ಶಿವಮೊಗ್ಗ : ಶಂಕಿತ ಉಗ್ರ ಸೇರಿ ಇಬ್ಬರು ಆರೋಪಿಗಳು ಪೊಲೀಸ್ ಕಸ್ಟಡಿಗೆ :
ಶಿವಮೊಗ್ಗ : ಉದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿದ ಪ್ರಕರಣದ ವಿಚಾರಣೆಗೆ ಸಂಬಂಧ ಶಂಕಿತ ಉಗ್ರ ಸೇರಿದಂತೆ ಇಬ್ಬರನ್ನು ಆರೋಪಿಗಳನ್ನು ಬಿಗಿ ಭದ್ರತೆಯಲ್ಲಿ ಬೆಂಗಳೂರಿನಿಂದ ಕರೆತರಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದ ಶಂಕಿತ ಉಗ್ರ ಸದ್ದಾಂ ಹುಸೇನ್ ಮತ್ತು ಪ್ರಕರಣವೊಂದರಲ್ಲಿ ಶಿಕ್ಷೆ ಅನುಭವಿಸುತ್ತಿರುವ ನಾಗೇಂದ್ರ ಎಂಬುವವರನ್ನು ಶಿವಮೊಗ್ಗಕ್ಕೆ ಕರೆತರಲಾಗಿದೆ. ಇಬ್ಬರು ಆರೋಪಿಗಳನ್ನು ಪೊಲೀಸರು ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇಬ್ಬರನ್ನು ನವೆಂಬರ್ 2ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.ಉದ್ಯಮಿಗೆ ಬೆದರಿಕೆ ಪ್ರಕರಣ ಸಂಬಂಧ ವಿಚಾರಣೆ ನಡೆಯಲಿದೆ. ಶಂಕಿತ ಉಗ್ರ ಸದ್ದಾಂ…


