ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ : ನಾಲ್ವರು ಸಾವು , ಐವರ ಸ್ಥಿತಿ ಗಂಭೀರ
ಆಗುಂಬೆ: ಇಲ್ಲಿನ ಘಾಟಿಯ 9 ನೇ ತಿರುವಿನಲ್ಲಿ ಲಾರಿ ನಿಯಂತ್ರಣ ತಪ್ಪಿ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಐದು ಮಂದಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಘಾಟಿಯನ್ನು ಇಳಿಯುವಾಗ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ. ಲಾರಿಯೂ ಪ್ರಪಾತಕ್ಕೆ ಮಗುಚಿ ಬಿದ್ದಿದ್ದು, ಮೃತದೇಹಗಳನ್ನು ಮೇಲೆತ್ತಲು ಸ್ಥಳೀಯರು ಹರಸಾಹಸ ಪಡುತ್ತಿದ್ದಾರೆ. ಹೆಬ್ರಿ ಮತ್ತು ಆಗುಂಬೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ,ಚಿಂತಾಜನಕವಾಗಿದೆ.