ಕುಖ್ಯಾತ ರೌಡಿ ಹೆಬ್ಬೆಟ್ ಮಂಜನ ಹೆಸರಿನಲ್ಲಿ ಬೆದರಿಕೆ! ಪೊಲೀಸರ ಬಲೆಗೆ ಬಿದ್ದ ಭಟ್ಕಳದ ಸಾಹಿರಾ ಬಾನು
ಶಿವಮೊಗ್ಗ : ಕುಖ್ಯಾತ ರೌಡಿಶೀಟರ್ ಹೆಬ್ಬೆಟ್ ಮಂಜನ ಹೆಸರಿನಲ್ಲಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹಿಳೆಯೊಬ್ಬರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಉದ್ಯಮಿಯೊಬ್ಬರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಸಾಹಿರಾ ಬಾನು ಎಂಬ ಮಹಿಳೆಯನ್ನು ಶಿವಮೊಗ್ಗ ಸೈಬರ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಮಹಿಳೆಯ ಪತಿ ಸದ್ದಾಂ ಹುಸೇನ್ ಬೆಂಗಳೂರಿನ ಅಗ್ರಹಾರದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ. ಈತ ಜೈಲಿನಿಂದಲೇ ಶಿವಮೊಗ್ಗದ ಉದ್ಯಮಿಗೆ ವಾಟ್ಸಪ್ ಕಾಲ್ ಮಾಡಿ ಜೀವ…


