ಸರಳವಾಗಿ ನಡೆದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ :
ಶಿವಮೊಗ್ಗ ಜಿಲ್ಲೆಯ ಇತಿಹಾಸ ಪ್ರಸಿದ್ಧ ಜೇನುಕಲ್ಲಮ್ಮ ದೇವಿಯ ಜಾತ್ರೆಯು ಅತ್ಯಂತ ಸರಳ ಹಾಗೂ ಸಾಂಕೇತಿಕವಾಗಿ ನೆರವೇರಿತು. ಮಹಾಲಯ ಸಮಯದಲ್ಲಿ ಜರುಗುವ ಹದಿನೈದು ದಿನಗಳ ಜಾತ್ರಾ ಮಹೋತ್ಸವ ಇದಾಗಿದ್ದು, ಕೊರೋನಾ ಕಾರಣದಿಂದ ಜಾತ್ರಾ ಮಹೋತ್ಸವವು ಕಳೆಗುಂದಿತ್ತು. ಶ್ರೀ ಜೇನುಕಲ್ಲಮ್ಮ ಇರುವುದು ಚಿತ್ತಾಕರ್ಷಕ ಮಲೆನಾಡಿನ ಪ್ರಕೃತಿ ಐಸಿರಿ ನಡುವೆ. ಇಂತಹ ಅಪರೂಪದ ಪ್ರಕೃತಿದತ್ತ ದೇವಸ್ಥಾನವೇ ಶ್ರೀ ಜೇನುಕಲ್ಲಮ್ಮ ಕ್ಷೇತ್ರ.ಹೊಸನಗರ ತಾಲೂಕು ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅಮ್ಮನಘಟ್ಟ ಬೆಟ್ಟವೇ ಜೇನುಕಲ್ಲಮ್ಮ ದೇವಸ್ಥಾನ. ಮಲೆನಾಡಿನ ತಪ್ಪಲಿನಲ್ಲಿರುವ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ…