ಜಿಲ್ಲೆಯಲ್ಲಿ ಮಾಹಿತಿ ತಂತ್ರಜ್ಞಾನ,ವೃತ್ತಿ ಕೌಶಲ್ಯ ಅಭಿವೃದ್ದಿಗೆ ವಿಫುಲ ಅವಕಾಶ,ಮೂಲಭೂತ ಸೌಕರ್ಯ ಒದಗಿಸಲು ಬದ್ದ:ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್
ಶಿವಮೊಗ್ಗ : ಜಿಲ್ಲೆಯಲ್ಲಿ ಮಾಹಿತಿ ತಂತ್ರಜ್ಞಾನ, ಸಂಪರ್ಕ ಸಂವಹನ ಹಾಗೂ ವೃತ್ತಿ ಕೌಶಲ್ಯ ಅಭಿವೃದ್ದಿಗೆ ವಿಫುಲ ಅವಕಾಶವಿದ್ದು, ಇದಕ್ಕೆ ಪೂರಕವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಬದ್ದರಾಗಿದ್ದೇವೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ದಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದರು. ಇಂದಿಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದ ಅವರು, ಕೋವಿಡ್ ನಂತರದಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ಸಂಪರ್ಕದಿಂದ ಜಿಲ್ಲಾ ಕೇಂದ್ರಗಳಲ್ಲಿ ಉದ್ಯೋಗವಕಾಶದ ಸಾಧ್ಯತೆಗಳು ತೆರೆದಿದ್ದು, ಇದಕ್ಕೆ ಪೂರಕವಾದ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಅಗತ್ಯವಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಉದ್ಯೋಗ…