ರಿಪ್ಪನ್ ಪೇಟೆ: ಅನೈತಿಕ ಚಟುವಟಿಕೆಯ ತಾಣವಾದ ಸ್ತ್ರೀಶಕ್ತಿ ಸಮುದಾಯ ಭವನ.
ರಿಪ್ಪನ್ ಪೇಟೆ: ಪಟ್ಟಣಕ್ಕೆ ಹೊಂದಿಕೊಂಡಂತೆ ಇರುವ ದೊಡ್ಡಿನಕೊಪ್ಪ ಬಡಾವಣೆಯಲ್ಲಿರುವ ಸ್ತ್ರೀಶಕ್ತಿ ಸಮುದಾಯಭವನ ಸರಿಯಾದ ನಿರ್ವಹಣೆ ಇಲ್ಲದೇ ಅನೈತಿಕ ಚಟುವಟಿಕೆಯ ತಾಣವಾಗಿದೆ.ಲಕ್ಷಾಂತರ ರೂಪಾಯಿ ಮೊತ್ತದ ಅನುದಾನದಲ್ಲಿ ತಲೆಯೆತ್ತಿ ನಿಂತ ಸ್ತ್ರೀ ಶಕ್ತಿ ಸಮುದಾಯಭವನ ಇದೀಗ ಪಾಳುಬಿದ್ದು ಹಾಗೂ ಪುಡಾರಿಗಳ ನೆಚ್ಚಿನ ಅನೈತಿಕ ತಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. 2011-12ರಲ್ಲಿ ಅಂದಿನ ಶಾಸಕರಾಗಿದ್ದ ಬೇಳೂರು ಗೋಪಾಲಕೃಷ್ಣರವರ ಅವಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸ್ತ್ರೀ ಶಕ್ತಿ ಸಮುದಾಯ ಭವನವನ್ನು ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಿತ್ತು. ಈಗ ಸ್ತ್ರೀಶಕ್ತಿ…