ತೀರ್ಥಹಳ್ಳಿಯಲ್ಲಿ ವ್ಯಾಕ್ಸಿನ್ ಪೈಟ್:
ತೀರ್ಥಹಳ್ಳಿ: ಪಟ್ಟಣದಲ್ಲಿ ಕೊರೊನಾ ಲಸಿಕೆಗಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು, ಬಳಿಕ ಅದು ಘರ್ಷಣೆಗೆ ತಿರುಗಿದ ಪರಿಣಾಮ ಕಾಂಗ್ರೆಸ್ನ ಇಬ್ಬರು ಹಾಗೂ ಬಿಜೆಪಿಯ ಮೂವರು ಕಾರ್ಯಕರ್ತರು ಆಸ್ಪತ್ರೆಗೆ ದಾಖಲಾಗಿದ್ದಾರೆ. ತಪ್ಪು ಮಾಡಿದ ಬಳಿಕ ಪರಸ್ಪರ ಆರೋಪಿಸಿಕೊಂಡ ಎರಡೂ ಪಕ್ಷದವರು ಪ್ರತಿಭಟನೆ ನಡೆಸಿದ್ದಾರೆ. ತೀರ್ಥಹಳ್ಳಿ ಪಟ್ಟಣದ ಸೀಬಿನಕೆರೆ ಶಾಲೆಯ ಕೊರೊನಾ ಲಸಿಕೆ ಕೇಂದ್ರದಲ್ಲಿ ಘಟನೆ ನಡೆದಿದ್ದು, ಮೊದಲು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದರೆ ಅವರ ಪ್ರತಿಭಟನೆ ಮುಗಿದ…