ಮರಳು ಲಾರಿ ಮಾಲೀಕರಿಂದ ಶಾಸಕ ಹರತಾಳು ಹಾಲಪ್ಪರವರಿಗೆ ಕಮಿಷನ್ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಪ್ರಮಾಣ ಮಾಡಲು ಸಿದ್ಧ: ಬೇಳೂರು ಗೋಪಾಲಕೃಷ್ಣ

ಹೊಸನಗರ: ಹೊಸನಗರ-ಸಾಗರ ಕ್ಷೇತ್ರದ ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ  ಹರತಾಳು ಹಾಲಪ್ಪನವರು ಮರಳು ಲಾರಿ ಮಾಲೀಕರಿಂದ ಕಮೀಷನ್ ಪಡೆದಿದ್ದಾರೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಪ್ರಮಾಣ ಮಾಡಲು ನಾನು ಸಿದ್ಧ, ತಾಕತ್ತಿದ್ದರೆ ಹಾಲಪ್ಪನವರು ಕಮೀಷನ್ ತೆಗೆದುಕೊಂಡಿಲ್ಲ ಎಂದು ಪ್ರಮಾಣ ಮಾಡಲಿ ಎಂದು ಹೊಸನಗರ ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ  ಬೇಳೂರು ಗೋಪಾಲಕೃಷ್ಣರವರು ಸವಾಲು ಹಾಕಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ  ಅವರು ತಾವು ಪ್ರಾಮಾಣಿಕರು ಮರಳು ಮಾಧ್ಯಮದವರಿಂದ…

Read More

ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ : ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಮೊದಲ ಆದ್ಯತೆ : ಗೃಹ ಸಚಿವ ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡಿದೆ. ಗ್ರಾಮೀಣ ಪ್ರದೇಶದ ಅಭಿವೃದ್ಧಿಯೆ ಬಿಜೆಪಿ ಸರಕಾರಗಳ ಮೊದಲ ಆದ್ಯತೆಯಾಗಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು . ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ  ಯಳಗಲ್ಲು ಗ್ರಾಮದಲ್ಲಿ ಸುಮಾರು 26.50 ಕೋಟಿ ರೂ. ವೆಚ್ಚದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಶಂಕುಸ್ಥಾಪನೆ ಮತ್ತು ಕೋಡೂರು ಗ್ರಾಮದ ಸ.ನಂ.14ರಲ್ಲಿ ಪಿಕಪ್ ಚಾನಲ್ ಕಾಮಗಾರಿ ಶ್ರೀ ಶಂಕರೇಶ್ವರ ದೇವಸ್ಥಾನದ ರಸ್ತೆ, ಹಳೇಕೋಟೆ ರಸ್ತೆ ಮರು ಡಾಂಬರಿಕರಣ…

Read More

ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ ಮೊಹಮ್ಮದ್‌ ನಲಪಾಡ್‌ ಅಧಿಕಾರ ಸ್ವೀಕಾರ :

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್‌ ನಲಪಾಡ್‌ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಆಯ್ಕೆಯಲ್ಲಿ ಈ ಹಿಂದೆ ಗೊಂದಲ ಉಂಟಾಗಿದ್ದು, ಯುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ ಹೆಚ್ಚು ಮತಗಳಿಸಿದ್ದ ಮೊಹಮ್ಮದ್‌ ನಲಪಾಡ್‌ ಅವರನ್ನು ಅನರ್ಹಗೊಳಿಸಿ, ನಂತರದ ಸ್ಥಾನಗಳಿಸಿದ್ದ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಲಾಗಿತ್ತು. ಇನ್ನು ಕಾಂಗ್ರೆಸ್‌ನ ಹಿರಿಯ ನಾಯಕರು ಸಂಧಾನ ನಡೆಸಿ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಿ ಅವರ ಅಧಿಕಾರದ ಅವಧಿ ಮುಗಿದ ಬಳಿಕ ಮೊಹಮ್ಮದ್‌…

Read More

ದೈಹಿಕ ಶಿಕ್ಷಕ ಜಿ ಎಸ್ ಶಿವಕುಮಾರ್ ರವರಿಗೆ ಗ್ರಾಮಸ್ಥರಿಂದ ಗೌರವ ಸಮರ್ಪಣೆ :

 ರಿಪ್ಪನ್ ಪೇಟೆ : ಮಂಡಗಟ್ಟ  ( ನಗರ ರೋಡ್) ಸರ್ಕಾರಿ ಪ್ರೌಢಶಾಲೆಯ ದೈಹಿಕ  ಶಿಕ್ಷಕರಾದ ಜಿ ಎಸ್. ಶಿವ ಕುಮಾರ್ ರವರು ಇಂದು ಸರ್ಕಾರಿ ಸೇವೆಯಿಂದ ನಿವೃತ್ತಿ ಯಾಗಿದ್ದು. ಇವರನ್ನು ರಿಪ್ಪನ್ ಪೇಟೆಯ ಗ್ರಾಮಸ್ಥರು ಮಂಡಘಟ್ಟ ಸರ್ಕಾರಿ ಪ್ರೌಢಶಾಲೆಯಲ್ಲಿ ಗೌರವಿಸಿ ಅಭಿನಂದಿಸಿದರು.  ಬೆಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ನಂತರ ಸುಮಾರು 28 ವರ್ಷಗಳ ಕಾಲ ಶಿವಮೊಗ್ಗ ಜಿಲ್ಲೆಯಜಿಲ್ಲೆಯ ವಿವಿಧೆಡೆಯಲ್ಲಿ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸಿ ಗ್ರಾಮೀಣ ಪ್ರದೇಶದ ಸಾವಿರಾರು ಮಕ್ಕಳನ್ನು ಜಿಲ್ಲಾಮಟ್ಟ ರಾಜ್ಯಮಟ್ಟ ಹಾಗೂ…

Read More

ಐತಿಹಾಸಿಕ ಕಲ್ಯಾಣೇಶ್ವರ ದೇವಾಲಯದ ನೂತನ ಶಿಲಾಮಯ ಹಾಗೂ ಪುನರ್ ಪ್ರತಿಷ್ಠಾಪನೆಗೆ ಕ್ಷಣಗಣನೆ! ಭಕ್ತರ ಮದುವೆಯ ಶುಭ ಕಾರ್ಯದ ಬೇಡಿಕೆಯು ಬಹುಬೇಗನೆ ಪೂರೈಸುವ ಶ್ರೀ ಕಲ್ಯಾಣೇಶ್ವರ

ಹೊಸನಗರ :ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಸಮೀಪ ವಾರಂಬಳ್ಳಿ ಯ ಸರಿಸುಮಾರು ಎಂಟು, ಮತ್ತು ಹತ್ತನೇ ಶತಮಾನದ  ಐತಿಹಾಸಿಕ ಸುಪ್ರಸಿದ್ಧ  ಶಿವನ ಆಲಯ ಕಲ್ಯಾಣಿ ಶ್ವರ ದೇವಸ್ಥಾನದ ಸಪರಿವಾರ ಕಲ್ಯಾಣಿಶ್ವರನ ಶಿಲಾಮಯ ಹಾಗೂ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು. ಫೆಬ್ರವರಿ 2ರಂದು ಪುನರ್ ಪ್ರತಿಷ್ಠಾಪನೆ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದ್ದು  ಮರುದಿನ ಬ್ರಹ್ಮಕಲಶೋತ್ಸವ ಹಾಗೂ ಪೂರ್ಣಾಹುತಿಯನ್ನು ಶ್ರೀ ಸದಾನಂದ ಶಿವಯೋಗ ಆಶ್ರಮದ ಶ್ರೀ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳಿಂದ ನೆರವೇರಲಿದೆ. ದೇವಾಲಯದ ಐತಿಹಾಸಿಕ ಹಿನ್ನೆಲೆ : ದೇವಸ್ಥಾನದ ಐತಿಹಾಸಿಕ…

Read More

ಪುನೀತ್ ರಾಜಕುಮಾರ್ ನಾಮಫಲಕಕ್ಕೆ ಹೆಸರು ಬರೆಸುವಲ್ಲಿ ರಿಪ್ಪನ್ ಪೇಟೆ ಗ್ರಾಪಂ ವಿಳಂಬ ನೀತಿ : ಯಾರ ಒತ್ತಡಕ್ಕೆ ಮಣಿಯುತ್ತಿದೆ ಗ್ರಾಮಾಡಳಿತ ?????

ಇಲ್ಲಿನ ಸಾಗರ ರಸ್ತೆಯ ಕುಕ್ಕಳಲೆ ಸಂಪರ್ಕ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ನೆನಪಿಗಾಗಿ ಪುನೀತ್ ರಾಜ್‍ಕುಮಾರ್ ರಸ್ತೆ ಎಂದು ನಾಮಕರಣ ಮಾಡಲಾಗಿತ್ತು. ಆದರೆ ಕೆಲ ವಿಕೃತ ಕಿಡಿಗೇಡಿಗಳು ಮಧ್ಯರಾತ್ರಿಯಲ್ಲಿ ಪುನೀತ್ ರಾಜಕುಮಾರ್ ಹೆಸರಿಗೆ ಬಿಳಿ ಬಣ್ಣವನ್ನು ಬಳಿದು ವಿಕೃತಿ ಮೆರೆದಿದ್ದರು. ನಂತರ ಪುನೀತ್ ನಾಮಫಲಕಕ್ಕೆ ಬಣ್ಣ ಬಳಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಹಲವಾರು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.ಆದರೆ ಇಲ್ಲಿಯವರೆಗೂ ಯಾವುದೇ ಆರೋಪಿಗಳನ್ನು ಪೊಲೀಸರು ಬಂಧಿಸಿಲ್ಲ. ನಂತರ ರಿಪ್ಪನ್ ಪೇಟೆ ಗ್ರಾಮಾಡಳಿತ ಮಧ್ಯ ಪ್ರವೇಶಿಸಿ ಪುನೀತ್ ರಾಜಕುಮಾರ್…

Read More

ಆಗುಂಬೆ ಪೊಲೀಸರ ಭರ್ಜರಿ ಕಾರ್ಯಾಚರಣೆ : ಒಂದೂವರೆ ಕ್ವಿಂಟಲ್ ಅಡಿಕೆ ಕದ್ದಿದ್ದ ಆರೋಪಿ ಮಾಲು ಸಮೇತ ಬಂಧನ

ತೀರ್ಥಹಳ್ಳಿ : ಅಡಿಕೆ ಮೂಟೆ ಕದ್ದ ಕಳ್ಳನನ್ನು ಆಗುಂಬೆ ಪೊಲೀಸರು ಬಂಧಿಸಿ ಆತನಿಂದ ಸುಮಾರು ಒಂದೂವರೆ ಕ್ವಿಂಟಲ್ ಅಡಿಕೆ ವಶಪಡಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಸುಧಾಕರ್ ಎಂಬುವವನು ಜನವರಿ ತಿಂಗಳಲ್ಲಿ ಕೌರಿಹಕ್ಕಲು ಬಿಎಸ್ಎನ್ಎಲ್ ವೆಂಕಟೇಶ್ ಎಂಬುವವರ ಮನೆಯಲ್ಲಿ ಒಣಹಾಕಿದ್ದ ಒಂದುವರೆ ಕ್ವಿಂಟಲ್ ಅಡಿಕೆ ಕದ್ದಿದ್ದ. ಈ ಬಗ್ಗೆ ಆಗುಂಬೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಡಿವೈಎಸ್ ಪಿ ಶಾಂತವೀರ, ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಪ್ರವೀಣ್ ನೀಲಮ್ಮನವರ್,ಆಗುಂಬೆ ಪಿಎಸ್ ಐ ಶಿವಕುಮಾರ್ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳಾದ ವೀರೇಂದ್ರ,…

Read More

ಬಸ್ ನಿಯಂತ್ರಣ ತಪ್ಪಿ ಪಾದಾಚಾರಿಗಳಿಗೆ ಡಿಕ್ಕಿ : ಗಾಯಾಳುಗಳು ಮೆಗ್ಗಾನ್ ಗೆ ದಾಖಲು

ಆಯನೂರು ಮೆಸ್ಕಾಂ ಕಚೇರಿ ಎದುರು ನಡೆದುಕೊಂಡು ಹೋಗುತಿದ್ದ  ವಿದ್ಯಾರ್ಥಿಗಳಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರೂ ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ. ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಖಾಸಗಿ ಬಸ್ ಆಯನೂರಿನ ಮೆಸ್ಕಾಂ ಕಚೇರಿ ಎದುರು ಚಾಲಕನ ನಿಯಂತ್ರಣ ಕೈತಪ್ಪಿ ಫುಟ್ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದಿದೆ. ಅಲ್ಲಾಭಕ್ಷಿ (17) ಆಯನೂರು ಸಮೀಪದ ಹೊಸೂರು ಗ್ರಾಮದವನೆಂದು ತಿಳಿದುಬಂದಿದೆ. ಸನು (16) ಎಂಬ ಯುವಕನು ಭದ್ರಾವತಿ ದಡಂಘಟ್ಟದ ಯುವಕನೆಂದು ಹಾಗೂ ಹಾರನಹಳ್ಳಿಯ ರಾಹುಲ್ (17) ಎಂಬುವರನ್ನು ಹೆಚ್ಚಿನ…

Read More

ಜ 31 ರಿಂದ ರಾಜ್ಯಾದ್ಯಂತ ನೈಟ್ ಕರ್ಫ಼್ಯೂ ರದ್ದು : ಶಾಲೆಗಳು ಪುನರಾರಂಭ !!!!

  ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾಧ್ಯಂತ ಜಾರಿಗೊಳಿಸಲಾಗಿದ್ದಂತ ನೈಟ್ ಕರ್ಪ್ಯೂವನ್ನು ( Night Curfew ) ರದ್ದುಪಡಿಸಲಾಗಿದೆ. ಇದಲ್ಲದೇ ಹೋಟೆಲ್, ರೆಸ್ಟೋರೆಂಟ್, ಪಬ್ ಗಳಲ್ಲಿನ ಶೇ.50ರ ಮಿತಿಯನ್ನು ವಾಪಾಸ್ ಪಡೆಯಲಾಗಿದೆ.ಆದರೆ ಸಿನಿಮಾ ಮಂದಿರಗಳಲ್ಲಿ ಶೇ.50ರ ಮಿತಿಯನ್ನು ಮುಂದುವರೆಸಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಈ ಕುರಿತಂತೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಕೋವಿಡ್ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ತಜ್ಞರು ನೀಡಿದಂತ ವರದಿಯ ಆಧಾರದ ಮೇಲೆ ಹಲವು ವಿಚಾರಗಳನ್ನು ಚರ್ಚಿಸಲಾಗಿದೆ. ರಾಜ್ಯದಲ್ಲಿ…

Read More

ಸೊರಬ ಪುರಸಭೆ ಅಧಿಕಾರ ಬಿಜೆಪಿ ತೆಕ್ಕೆಗೆ : ಅಧ್ಯಕ್ಷರಾಗಿ ಈರೇಶ್ ಮೇಸ್ತ್ರಿ ಆಯ್ಕೆ

ಸೊರಬ: ಭಾರಿ ಕುತೂಹಲ ಮೂಡಿಸಿದ್ದ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿಜೆಪಿಯ ವೀರೇಶ್ ಮೇಸ್ತ್ರಿ ಅಧ್ಯಕ್ಷರಾಗಿ ಆಯ್ಕೆಯಾದರು. ಶುಕ್ರವಾರ ನಡೆದ ಅಧ್ಯಕ್ಷರ ಚುನಾವಣೆಗೆ ಬಿಜೆಪಿಯಿಂದ ವೀರೇಶ್ ಮೇಸ್ತ್ರಿ, ಕಾಂಗ್ರೆಸ್‌ನಿಂದ ಸುಲ್ತಾನಾ ಬೇಗಂ ನಾಮಪತ್ರ ಸಲ್ಲಿಸಿದ್ದರು. ವೀರೇಶ್ ಮೇಸ್ತ್ರಿ 8 ಮತಗಳನ್ನು ಹಾಗೂ ಕಾಂಗ್ರೆಸ್‌ನ ಸುಲ್ತಾನಾ ಬೇಗಂ 4 ಮತಗಳನ್ನು ಪಡೆದರು. ಅಧ್ಯಕ್ಷರಾಗಿದ್ದ ಎಂ.ಡಿ. ಉಮೇಶ್ ವಿರುದ್ಧ ಸ್ವ‍ಪಕ್ಷದ ಸದಸ್ಯರೇ ಸೆ.27ರಂದು ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದರು. ಇದರಿಂದ ಚುನಾವಣೆ ನಡೆಯಿತು.  ಪಟ್ಟಣ ಪಂಚಾಯಿತಿಯಿಂದ ಪುರಸಭೆಯಾಗಿ ಮೇಲ್ದರ್ಜೆಗೇರಿದ…

Read More