ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೋನ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ತಮ್ಮ ಸೋಂಕು ದೃಢಪಡಿಸಿದ್ದಾರೆ.
ಮೂರನೇ ಅಲೆಯ ಹೊಸ್ತಿಲಿನಲ್ಲಿರುವ ಕೊರೋನ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಈ ವೇಳೆ ಸಿಎಂ ಬೊಮ್ಮಾಯಿ ಸಣ್ಣಪ್ರಮಾಣದ ಲಕ್ಷಣ ಕಾಣಿಸಿಕೊಂಡ ಬೆನ್ನಲ್ಲಿ ಕೊರೋನ ಪರೀಕ್ಷೆಗೆ ಒಳಪಟ್ಟಿದ್ದು, ಸೋಂಕು ದೃಢಪಟ್ಟಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ.
ಕೊರೋನ ಪಾಸಿಟಿವ್ ಕಾಣಿಸಿಕೊಂಡ ಬೆನ್ನಲ್ಲಿ ನಾನು ಹೋಂಕ್ಯಾರಂಟೈನ್ ಆಗಿರುವುದಾಗಿ ತಿಳಿಸಿರುವ ಸಿಎಂ ನನ್ನೊಂದಿಗೆ ಸಂಪರ್ಕದಲ್ಲಿರುವವರು ಪರೀಕ್ಷೆಗೆ ಒಳಪಡುವಂತೆ ಹಾಗೂ ಐಸೋಲೇಷನ್ ಆಗುವಂತೆ ಕೋರಿದ್ದಾರೆ.
		 
                         
                         
                         
                         
                         
                         
                         
                         
                         
                        
