ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿರುವ ಯುವಕನೊರ್ವನಿಗೆ ಕೋವಿಡ್ ಪಾಸಿಟಿವ್ ಬಂದಿದ್ದು,ಯುವಕನನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.ಈ ಕಾಲೇಜಿನಲ್ಲಿ ಸುಮಾರು 605 ವಿದ್ಯಾರ್ಥಿಗಳು ಇದ್ದಾರೆ.
ಕಳೆದ ಮೂರು ದಿನಗಳ ಹಿಂದೆ ವಿದ್ಯಾರ್ಥಿ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಹಿನ್ನಲೆಯಲ್ಲಿ ರಿಪ್ಪನ್ ಪೇಟೆಯ ಪಿಹೆಚ್ ಸಿಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದಾನೆ ಕೋವಿಡ್ ಪರೀಕ್ಷೆಯ ವರದಿಯು ಇಂದು ಪಾಸಿಟಿವ್ ಎಂದು ಬಂದ ಕಾರಣ ವಿದ್ಯಾರ್ಥಿಯನ್ನು ಮನೆಗೆ ಕಳುಹಿಸಿ ಕೊಡಲಾಗಿದೆ,ಹಾಗೂ ಕಾಲೇಜನ್ನು ಸಂಪೂರ್ಣವಾಗಿ ಸ್ಯಾನಿಟೈಜ಼್ ಮಾಡಲಾಗಿದೆ ಎಂದು ಪಿಯು ಕಾಲೇಜಿನ ಪ್ರಾಂಶುಪಾಲರಾದ ಮಂಜುನಾಥ್ ಎ ಪೋಸ್ಟ್ ಮ್ಯಾನ್ ನ್ಯೂಸ್ ಗೆ ಮಾಹಿತಿ ನೀಡಿದ್ದಾರೆ.
ಆತನ ಪ್ರಥಮ ಸಂಪರ್ಕದಲ್ಲಿ ಇದ್ದ ವಿದ್ಯಾರ್ಥಿಗಳಿಗೆ ಆರ್ ಟಿಪಿಸಿಆರ್ ತಪಾಸಣೆಗೆ ಮಾಡಲು ಇಲ್ಲಿನ ಪಿ ಹೆಚ್ ಸಿ ಯಲ್ಲಿ ಟೆಸ್ಟಿಂಗ್ ಕಿಟ್ ನ ಕೊರತೆ ಇದ್ದ ಕಾರಣ ನಾಳೆ ಕೊವೀಡ್ ಪರಿಕ್ಷೇಗೆ ಒಳಪಡಿಸಲು ಸಿದ್ದತೆ ನಡೆಸಲಾಗಿದೆ.
ಈಗ ಕರೊನಾ ಪಾಸಿಟಿವ್ ಬಂದಿರುವ ವಿದ್ಯಾರ್ಥಿಗೆ ಸರಿಯಾದ ಚಿಕಿತ್ಸೆ ನೀಡಿ ಹಾಗೂ ಇನ್ನುಳಿದ ವಿದ್ಯಾರ್ಥಿಗಳಿಗೆ ಹರಡದಂತೆ ಮುಂಜಾಗ್ರತಾ ಕ್ರಮ ವಹಿಸದೆ ಇದ್ದರೆ ಪರಿಸ್ಥಿತಿ ವಿಕೋಪಕ್ಕೆ ಹೋಗುವುದರಲ್ಲಿ ಯಾವುದೇ ಸಂದೇಹವಿಲ್ಲ.
ಇನ್ನಾದರೂ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡು ಕೊವೀಡ್ ತಪಾಸಣ ಕಿಟ್ ಗಳನ್ನು ಸಕಾಲದಲ್ಲಿ ಪೂರೈಕೆ ಮಾಡಿ ಸೋಂಕಿತರನ್ನು ಪತ್ತೆ ಹಚ್ಚಿ, ಕೊರೊನಾ ಮಹಮಾರಿಯನ್ನು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಪೋಸ್ಟ್ ಮ್ಯಾನ್ ನ್ಯೂಸ್ ನ ಕಳಕಳಿ…