ಸಾಗರದ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ವೈದ್ಯರು ಬುಧವಾರ 2 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದ ನಂತರ 50 ವರ್ಷದ ಮಹಿಳೆ ಹೊಟ್ಟೆಯಲ್ಲಿದ್ದ 8 ಕೆಜಿ ತೂಕದ ಗಡ್ಡೆಯನ್ನು ಹೊರತೆಗೆದಿದ್ದಾರೆ.
ಇದೊಂದು ಅಂಡಾಶಯದ ಗಡ್ಡೆಯಾಗಿದ್ದು, ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಆಸ್ಪತ್ರೆಯ ಹಿರಿಯ ಸ್ತ್ರೀರೋಗ ತಜ್ಞ ಡಾ.ನಾಗೇಂದ್ರಪ್ಪ ತಿಳಿಸಿದ್ದಾರೆ.
ಮಹಿಳೆಯ ಸ್ಥಿತಿ ಸ್ಥಿರವಾಗಿದ್ದು,ಶಸ್ತ್ರಚಿಕಿತ್ಸೆಗೆ ಅರವಳಿಕೆ ತಜ್ಞೆ ಸುಷ್ಮಾ ಪತ್ತಾರ್,ನರ್ಸ್ ಸುವರ್ಣ,ರೋಹಿನಿ ಹಾಗೂ ಚಂದ್ರು ಸಹಕರಿಸಿದ್ದಾರೆ ಎಂದು ಇದೇ ವೇಳೆ ತಿಳಿಸಿದರು.
ಮಹಿಳೆಯ ಪ್ರಾಣ ಉಳಿಸಿದ ಡಾ.ನಾಗೇಂದ್ರಪ್ಪ ಹಾಗೂ ಅವರ ತಂಡದ ಕಾರ್ಯಕ್ಕೆ ಕುಟುಂಬದವರು ಮೆಚ್ಚುಗೆ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.