ರಿಪ್ಪನ್ ಪೇಟೆ : ಮಕ್ಕಳಿಗೆ ಕೋರೋಣ ಲಸಿಕೆ ನೀಡುವ ಅಭಿಯಾನ ಇಡೀ ದೇಶಾದ್ಯಂತ ಆರಂಭವಾಗಿದ್ದು. ಈ ಹಿನ್ನೆಲೆಯಲ್ಲಿ 15 ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಲಸಿಕೆಯನ್ನು ನೀಡಲಾಯಿತು.
ಕುಟುಂಬ ಕಲ್ಯಾಣ ಇಲಾಖೆ. ಜಿಲ್ಲಾ ಪಂಚಾಯತ್. ಗ್ರಾಮ ಪಂಚಾಯತ್ ತಾಲೂಕು ಆರೋಗ್ಯ ಅಧಿಕಾರಿ ಕಚೇರಿ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹ ಯೋಗದಲ್ಲಿ ಆಯೋಜಿಸಲಾಗಿದ್ದ ಕೊ ರೊ ನಾ ಲಸಿಕಾ ಅಭಿಯಾನವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಉದ್ಘಾಟಿಸಿದರು.
ಕೋವಿಡ್ ಮತ್ತು ಇದರ ರೂಪಾಂತರಿ ಸೋಂಕನ್ನು ನಿಯಂತ್ರಿಸಲು ಸರಕಾರ ಇದೀಗ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ವಿತರಣಾ ಕಾರ್ಯಕ್ರಮ ಆರಂಭಿಸಿದ್ದು ಮಕ್ಕಳು ಯಾವುದೇ ರೀತಿಯ ಭಯ ಮತ್ತು ಗೊಂದಲಕ್ಕೀಡಾಗಿದೆ ನಿರಂತಕ ವಾಗಿ ಲಸಿಕೆ ಪಡೆಯಬೇಕು ಎಂದರು. ಹುಂಚ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳಿಗೆ ಲಸಿಕೆಯನ್ನು ನೀಡಿದರು.408 ವಿದ್ಯಾರ್ಥಿಗಳಲ್ಲಿ 395 ಕ್ಕೂ ಅಧಿಕ ವಿದ್ಯಾರ್ಥಿಗಳು ಲಸಿಕೆಯನ್ನು ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಮಹ್ಮದ್ ನಜಹತ್ ಉಲ್ಲಾ. ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷ ಟಿ ಡಿ.ಸೋಮಶೇಖರ್. ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಂಡಿ ಲಿಂಗರಾಜು ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರುಗಳು ಮತ್ತು ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು
ಮಕ್ಕಳ ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ಪೋಷಕರು ಸಹ ಭಾಗಿಯಾಗಿದ್ದರು.