ರಿಪ್ಪನ್ ಪೇಟೆ : ಜಗತ್ತಿನಲ್ಲಿ ಪ್ರಜಾಪ್ರಭುತ್ವ ಆಡಳಿತ ಇರುವ ದೇಶಗಳಲ್ಲಿ ಭಾರತವೂ ಅತ್ಯುನ್ನತ ದೇಶವಾಗಿದೆ. ಇದಕ್ಕೆ ಭಾರತದಲ್ಲಿ ರಚನೆಗೊಂಡ ಬಿಆರ್. ಅಂಬೇಡ್ಕರ್ ರವರ ಸಂವಿಧಾನದ ಆಶಯಗಳೆ ಕಾರಣವಾಗಿದೆ ಎಂದು ಶಿವಮೊಗ್ಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್.ಹೇಳಿದರು.
ಅಮೃತ ಗ್ರಾಮದಲ್ಲಿ ಕರ್ನಾಟಕ ಸರ್ಕಾರ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಅಮೃತ ಇದರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಅಂಬೇಡ್ಕರ್ ಓದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಜಗತ್ತಿನ ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಅತ್ಯುತ್ತಮವಾದ ರಾಷ್ಟ್ರವಾದ ನಮ್ಮಲ್ಲಿ ಆಡಳಿತ ವ್ಯವಸ್ಥೆ ಮತ್ತು ಸಾಮಾಜಿಕ ವ್ಯವಸ್ಥೆಗೆ ನಮ್ಮ ದೇಶದಲ್ಲಿ ರಚನೆಯಾದ ಸಂವಿಧಾನವೇ ಕಾರಣವಾಗಿದೆ. ಇದರ ರೂವಾರಿ ಡಾ. ಬಿ.ಆರ್ ಅಂಬೇಡ್ಕರ್ ಅವರು ನಮ್ಮ ದೇಶವನ್ನು ಸರ್ವತಂತ್ರ ಸ್ವಾತಂತ್ರ್ಯ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿರಲಿ ಎಂಬ ಆಶಯವನ್ನು ಹೊಂದಿದ್ದರು. ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಆಸೆಗಳನ್ನು ಮತ್ತು ಚಿಂತನೆಗಳನ್ನು ಇಂದಿನ ಯುವ ಸಮೂಹ ಮತ್ತು ವಿದ್ಯಾರ್ಥಿಗಳು ಅಳವಡಿಸಿಕೊಂಡರೆ ಸಮಾಜದಲ್ಲಿ ಉತ್ತಮ ನಾಗರೀಕರಾಗಿ ಗುರುತಿಸಿ ಕೊಳ್ಳಲು ಸಹಕಾರಿಯಾಗಲಿದೆ ಎಂದು ಹೇಳಿದರು.
ರಂಗ ನಿರ್ದೇಶಕ ಹಾಗೂ ಆಕಾಶವಾಣಿ ನಿರೂಪಕ ಗಣೇಶ್ ಕೆಂಚನಾಲ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಪ್ರಕಾಶ ಡಾ. ಬಿ ಆರ್ ಅಂಬೇಡ್ಕರ್ ಕುರಿತು ನೀಡಿದರು ಉಪನ್ಯಾಸ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಮೃತ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಮಹಮ್ಮದ್ ನಜಹತ್ ಉಲ್ಲಾ ವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಕುರಿತು ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯ ಅಧ್ಯಕ್ಷ ಸೋಮಶೇಖರ್ ಟಿ. ಡಿ. ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿ ಹಾಗೂ ಉಪನ್ಯಾಸಕ ಹಾಲಪ್ಪ ಸಂಕೂರು. ಇನ್ನಿತರರಿದ್ದರು.
ಉಪನ್ಯಾಸಕರಾದ ಸತೀಶ್ ಎನ್. ನಿರೂಪಿಸಿ ಶಂಕ್ರಪ್ಪ ಕೆ.ಎಂ ಸ್ವಾಗತಿಸಿ. ಸಬಾಸ್ಟಿನ್ ಮ್ಯಾಥ್ಯೂಸ್ ವಂದಿಸಿದರು .