ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ” ಅಂಬೇಡ್ಕರ್ ಓದು ಕಾರ್ಯಕ್ರಮ” : ಅಂಬೇಡ್ಕರ್ ರವರ ಚಿಂತನೆಗಳು ಇಂದಿನ ಯುವ ಸಮೂಹಕ್ಕೆ ಅಗತ್ಯವಾಗಿದೆ :ಉಮೇಶ್

ರಿಪ್ಪನ್ ಪೇಟೆ : ಜಗತ್ತಿನಲ್ಲಿ ಪ್ರಜಾಪ್ರಭುತ್ವ ಆಡಳಿತ ಇರುವ ದೇಶಗಳಲ್ಲಿ ಭಾರತವೂ ಅತ್ಯುನ್ನತ ದೇಶವಾಗಿದೆ. ಇದಕ್ಕೆ ಭಾರತದಲ್ಲಿ ರಚನೆಗೊಂಡ ಬಿಆರ್. ಅಂಬೇಡ್ಕರ್ ರವರ  ಸಂವಿಧಾನದ ಆಶಯಗಳೆ ಕಾರಣವಾಗಿದೆ ಎಂದು ಶಿವಮೊಗ್ಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್.ಹೇಳಿದರು.

ಅಮೃತ ಗ್ರಾಮದಲ್ಲಿ ಕರ್ನಾಟಕ ಸರ್ಕಾರ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಅಮೃತ ಇದರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ  ಅಂಬೇಡ್ಕರ್  ಓದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಜಗತ್ತಿನ ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಅತ್ಯುತ್ತಮವಾದ ರಾಷ್ಟ್ರವಾದ ನಮ್ಮಲ್ಲಿ ಆಡಳಿತ ವ್ಯವಸ್ಥೆ ಮತ್ತು ಸಾಮಾಜಿಕ ವ್ಯವಸ್ಥೆಗೆ ನಮ್ಮ ದೇಶದಲ್ಲಿ ರಚನೆಯಾದ ಸಂವಿಧಾನವೇ ಕಾರಣವಾಗಿದೆ. ಇದರ ರೂವಾರಿ ಡಾ. ಬಿ.ಆರ್ ಅಂಬೇಡ್ಕರ್ ಅವರು ನಮ್ಮ ದೇಶವನ್ನು ಸರ್ವತಂತ್ರ ಸ್ವಾತಂತ್ರ್ಯ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿರಲಿ  ಎಂಬ ಆಶಯವನ್ನು ಹೊಂದಿದ್ದರು. ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಆಸೆಗಳನ್ನು ಮತ್ತು ಚಿಂತನೆಗಳನ್ನು ಇಂದಿನ ಯುವ ಸಮೂಹ ಮತ್ತು ವಿದ್ಯಾರ್ಥಿಗಳು ಅಳವಡಿಸಿಕೊಂಡರೆ ಸಮಾಜದಲ್ಲಿ ಉತ್ತಮ ನಾಗರೀಕರಾಗಿ ಗುರುತಿಸಿ ಕೊಳ್ಳಲು ಸಹಕಾರಿಯಾಗಲಿದೆ ಎಂದು  ಹೇಳಿದರು.

ರಂಗ ನಿರ್ದೇಶಕ ಹಾಗೂ ಆಕಾಶವಾಣಿ ನಿರೂಪಕ ಗಣೇಶ್ ಕೆಂಚನಾಲ  ಕಾರ್ಯಕ್ರಮದಲ್ಲಿ ಮಾತನಾಡಿದರು.
ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಪ್ರಕಾಶ ಡಾ. ಬಿ ಆರ್ ಅಂಬೇಡ್ಕರ್ ಕುರಿತು  ನೀಡಿದರು ಉಪನ್ಯಾಸ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಮೃತ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಮಹಮ್ಮದ್ ನಜಹತ್  ಉಲ್ಲಾ ವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಕುರಿತು ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯ ಅಧ್ಯಕ್ಷ ಸೋಮಶೇಖರ್ ಟಿ. ಡಿ. ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿ ಹಾಗೂ ಉಪನ್ಯಾಸಕ ಹಾಲಪ್ಪ ಸಂಕೂರು. ಇನ್ನಿತರರಿದ್ದರು.

ಉಪನ್ಯಾಸಕರಾದ ಸತೀಶ್ ಎನ್. ನಿರೂಪಿಸಿ ಶಂಕ್ರಪ್ಪ ಕೆ.ಎಂ  ಸ್ವಾಗತಿಸಿ. ಸಬಾಸ್ಟಿನ್ ಮ್ಯಾಥ್ಯೂಸ್ ವಂದಿಸಿದರು .
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

8 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

8 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

9 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago