ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆಗೆ ಸಾರ್ವಜನಿಕರ ಆಗ್ರಹ :

ರಿಪ್ಪನ್ ಪೇಟೆ: ಇಲ್ಲಿಗೆ ಸಮೀಪದ ಅರಸಾಳುವಿನಲ್ಲಿ ಇರುವ ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಎಲ್ಲಾ ರೈಲು ನಿಲುಗಡೆ ಮಾಡಬೇಕೆಂದು ಇಲ್ಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಅರಸಾಳುವಿನಲ್ಲಿ ರೈಲು ನಿಲುಗಡೆಯಿಂದ ರಿಪ್ಪನ್‌ಪೇಟೆ, ಅರಸಾಳು, ಬೆಳ್ಳೂರು, ಬಸವಾಪುರ, ಕಳಸೆ, ಬುಕ್ಕಿವರೆ, ಹುಂಚ, ಅಮೃತ, ಹೆದ್ದಾರಿಪುರ, ಹಾರೋಹಿತ್ತಲು, ಹೆದ್ದಾರಿಪುರ, ಕಲ್ಲೂರು, ಹೊಸನಗರ, ರಾಮಚಂದ್ರಪುರಮಠ, ಕೊಲ್ಲೂರು ಮೂಕಾಂಬಿಕ ದೇವಸ್ಥಾನ, ಕುಂದಾಪುರ, ಬೈಂದೂರು, ಭಟ್ಕಳ, ಉಡುಪಿ, ಕೋಣಂದೂರು, ಆರಗ, ತೀರ್ಥಹಳ್ಳಿ, ಹೊಸಗಂಡಿ, ಸಿದ್ದಾಪುರ, ಆಗುಂಬೆ, ಹರತಾಳು, ಹೀಗೆ ಕೊಡಚಾದ್ರಿ, ಸಿಗಂದೂರು ಕವಲೆದುರ್ಗ ಕೋಟೆ, ಜೋಗ ಜಲಪಾತ ಇನ್ನಿತರ ಪ್ರಮುಖ ಪ್ರೇಕ್ಷಣಿಯ ಸ್ಥಳಗಳಿಗೆ ಬರುವ ಪ್ರವಾಸಿಗರಿಗೆ ಹಾಗೂ ಉದ್ಯೋಗಕ್ಕಾಗಿ ಹೋಗುವ ವಿದ್ಯಾವಂತ ಯುವಜನಾಂಗಕ್ಕೆ ಕಡಿಮೆ ಖರ್ಚಿನಲ್ಲಿ ಓಡಾಡಲು ತುಂಬಾ ಸಹಕಾರಿಯಾಗಲಿದೆ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಅರಸಾಳು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಉಮಾಕರ್ ಅರಸಾಳು ರೈಲ್ವೆ ಸ್ಟೇಷನ್‌ನಲ್ಲಿ ಕೆಲ ದಿನಗಳಿಂದ ಮೈಸೂರು-ತಾಳಗುಪ್ಪ, ಶಿವಮೊಗ್ಗ-ತಾಳಗುಪ್ಪ ಪ್ಯಾಸೆಂಜರ್ ರೈಲನ್ನು ನಿಲ್ಲಿಸದಿರುವುದು ಈ ಭಾಗದ ನೂರಾರು ಹಳ್ಳಿಯ ಸಾವಿರಾರು ಜನರು ತೊಂದರೆ ಅನುಭವಿ ಸುವಂತಾಗಿದೆ. ಈ ರೈಲು ನಿಲ್ದಾಣದಿಂದ ಪ್ರಯಾಣಿಸುತ್ತಿರುವ ಪ್ರಯಾಣಿಕರಿಗೆ ಶಿವಮೊಗ್ಗ, ಮೈಸೂರು, ಬೆಂಗಳೂರು ಮುಂತಾದ ದೂರದ ಊರುಗಳಿಗೆ ಪ್ರಯಾಣಿಸಲು ಅನುಕೂಲವಾಗಿದೆ. ಈಗ ಏಕಾಏಕಿ ಪ್ಯಾಸೆಂಜರ್ ರೈಲು ನಿಲುಗಡೆ ಮಾಡದಿರುವುದು ಪ್ರಯಾಣಿಕರಿಗೆ ತೊಂದರೆಯಾಗಿದೆ,ಕೋಟ್ಯಂತರ ರೂ ವೆಚ್ಚದಲ್ಲಿ ಹೊಸದಾಗಿ ರೈಲ್ವೆ ನಿಲ್ದಾಣ ಹಾಗೂ ಫ್ಲಾಟ್ ಫಾರಂಗಳು ನಿರ್ಮಾಣ ಮಾಡಲಾಗಿದ್ದು , ರೈಲು ನಿಲುಗಡೆಯಾಗದಿದ್ದರೆ ಏನು ಪ್ರಯೋಜನ ಎಂದು ಪ್ರಶ್ನಿಸಿದರು.

ನಂತರ ಮಾತನಾಡಿದ ಡೈಮಂಡ್‌ ಸ್ಪೋರ್ಟ್ಸ್ ಕ್ಲಬ್ ಗೌರವಾಧ್ಯಕ್ಷರಾದ ಎಂ ನಾಗೇಂದ್ರ ಅರಸಾಳು ಗ್ರಾಮದ ಮಾಲ್ಗುಡಿ ಡೇಸ್  ದಿನನಿತ್ಯ ಸಾವಿರಾರು ಸಂಖ್ಯೆಯಲ್ಲಿ  ಹೊರ ಜಿಲ್ಲೆಗಳಿಂದ ಹೆಚ್ಚಿನ ಪ್ರವಾಸಿಗರು ಬಂದು- ಹೋಗುವ ಸ್ಥಳವಾಗಿದೆ. ಮಾಲ್ಗುಡಿ ಡೇಸ್ ಗೆ ಇದರದೇ ಆದ ಇತಿಹಾಸವಿದೆ. ದೇಶವಿದೇಶಗಳಲ್ಲಿ ಖ್ಯಾತಿ ಪಡೆದಿದೆ. ಒಂದು ಸುಂದರ ಪ್ರವಾಸಿ ತಾಣ ಇಂತಹ ಸ್ಥಳದಲ್ಲಿ ಶಂಕರ್ ನಾಗ್ ರಂತಹ ಮೇರು ನಟರ ನೆನಪುಗಳು ಇದೆ.ಮಾಲ್ಗುಡಿ ಡೇಸ್ ಚಿತ್ರೀಕರಣಗೊಂಡ ಅರಸಾಳು ರೈಲು ನಿಲ್ದಾಣ ಮಾಲ್ಗುಡಿ ನಿಲ್ದಾಣವೆಂದೇ ಪ್ರಸಿದ್ಧವಾಗಿದೆ. ಬ್ರಿಟಿಷರ ಕಾಲದ ಈ ರೈಲು ನಿಲ್ದಾಣವನ್ನು 1.3 ಕೋಟಿ ರೂ. ವೆಚ್ಚದಲ್ಲಿ ನವೀಕರಿಸಲಾಗಿದೆ. ಹಾಗೇ, ಈ ರೈಲು ನಿಲ್ದಾಣದ ಆವರಣದಲ್ಲಿ ಮಾಲ್ಗುಡಿ ಮ್ಯೂಸಿಯಂ ಕೂಡ ನಿರ್ಮಿಸಲಾಗಿದೆ. ಇದರಲ್ಲಿ ಶಂಕರ್ ನಾಗ್ ಪ್ರತಿಮೆಯನ್ನು ಕೂಡ ಇರಿಸಲಾಗಿದೆ.ಇಂತಹ ಇತಿಹಾಸ ಪ್ರಸಿದ್ದ ಜಾಗದಲ್ಲಿ ರೈಲು ನಿಲುಗಡೆಗೆ ಗ್ರಾಮಸ್ಥರಾದ ನಾವುಗಳು ಕೇಳುತ್ತಿರುವುದು ಇಂದಿನ ಭ್ರಷ್ಟ ವ್ಯವಸ್ಥೆಗೆ ಹಿಡಿದ ಕನ್ನಡಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ನೆಲ್ಸನ್, ಅನಿಲ್, ಅರುಣ್, ಡೆನ್ನಿಸ್, ಪಿಯೂಸ್ ರೊಡ್ರಿಗಸ್, ರೂಪ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

10 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

11 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

14 hours ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

15 hours ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

15 hours ago

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…

15 hours ago