ಅಸಮರ್ಪಕ ರಸ್ತೆ ನಿರ್ವಹಣೆ : ಜೀರಿಗೆಮನೆ ಗ್ರಾಮಸ್ಥರ ದಿಡೀರ್ ಪ್ರತಿಭಟನೆ

ರಿಪ್ಪನ್ ಪೇಟೆ: ಅಸಮರ್ಪಕ ರಸ್ತೆ ನಿರ್ವಹಣೆ ಹಾಗೂ ಹೊಂಡ ಗುಂಡಿಗಳಿಗೆ ತೇಪೆ ಹಾಕುವ ಪ್ರಕ್ರಿಯೆಯಲ್ಲಿ ಲೋಪ ಎಸಗಲಾಗಿದೆ. ಸರಿಯಾದ ರೀತಿಯಲ್ಲಿ ಹೊಂಡ ಗುಂಡಿಗಳನ್ನು ಮುಚ್ಚದೆ ಬೇಕಾಬಿಟ್ಟಿಯಾಗಿ ರಸ್ತೆ ಕಾಮಗಾರಿಯನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಡಾಂಬರೀಕರಣದ ವಾಹನವನ್ನು ತಡೆದು ಪ್ರತಿಭಟನೆ ನಡೆಸಿದ ಘಟನೆ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೀರಿಗೆಮನೆ ಎಂಬಲ್ಲಿ ನಡೆದಿದೆ.

ಹಲವಾರು ವರ್ಷಗಳ ಹಿಂದೆ ರಿಪ್ಪನ್ ಪೇಟೆ ಯಿಂದ  ಹೆದ್ದಾರಿಪುರ ಮಾರ್ಗವಾಗಿ ಜೀರಿಗೆಮನೆ ವಡಹೊಸಹಳ್ಳಿ ಮಾರ್ಗವನ್ನು ಮಾಡಲಾಗಿತ್ತು. ಆದರೆ ಇದೀಗ ಡಾಂಬರೀಕರಣ ಮಾಡಿ ಕೆಲವು ವರ್ಷಗಳು ಕಳೆದರೂ ಮರು ಡಾಂಬರೀಕರಣ ಮಾಡದೆ ಇರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿತ್ತು,ಇದೀಗ ಕಣ್ಣಾಮುಚ್ಚಾಲೆ ಆಟವೆಂಬಂತೆ ಬೇಕಾಬಿಟ್ಟಿಯಾಗಿ ಹೊಂಡ ಗುಂಡಿಗಳನ್ನು ಮುಚ್ಚದೆ ಡಾಂಬರೀಕರಣ ಮಾಡುತಿದ್ದಾರೆ ಹಾಗೂ ಇದರ ಬಗ್ಗೆ  ಲೋಕೋಪಯೋಗಿ ಇಲಾಖೆ ನಿರ್ಲಕ್ಷ್ಯತನ ತೋರುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಡಾಂಬರೀಕರಣದ ವಾಹನ ತಡೆದು ದಿಢೀರ್ ಪ್ರತಿಭಟನೆ ನಡೆಸಿ ಸಂಬಂಧಪಟ್ಟ ಇಲಾಖೆ ಹಾಗೂ ಶಾಸಕರ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟಿಸಿದರು.

ಈ ಸಂಧರ್ಭದಲ್ಲಿ ನಿವೃತ್ತ ಸೈನಿಕರಾದ ಸತೀಶ್ ಜೀರಿಗೆಮನೆ ಮಾತನಾಡಿ ಲೋಕೊಪಯೋಗಿ ಇಲಾಖೆ ಅಭಿಯಂತರರಾದ ಮಲ್ಲಿಕಾರ್ಜುನ್ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸದೆ ಕೂತಲ್ಲೆ ರಸ್ತೆ ಕಾಮಗಾರಿಯ ಅಂದಾಜು ಪಟ್ಟಿ ತಯಾರಿಸಿದ್ದಾರೆ, ಕಿತ್ತುಹೋದ ರಸ್ತೆಗೆ ತೇಪೆ ಹಾಕಲು ಬಂದಿದ್ದ ಕಾರ್ಮಿಕರನ್ನು ತಡೆದು, ಇಂಜಿನಿಯರ್ ಗೆ ಮಾಹಿತಿ ನೀಡಲು ಕರೆ ಮಾಡಿದರೂ ಕೇವಲ ಉಡಾಫ಼ೆಯ ಉತ್ತರ ನೀಡುತ್ತಾರೆಯೇ ಹೊರತು ಸರಿಯಾದ ಮಾಹಿತಿ ನೀಡುತ್ತಿಲ್ಲ. ಶಾಸಕರು ಇಂತಹ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಂಡು ಗ್ರಾಮಗಳಿಗೆ ಬರುವ ರಸ್ತೆ ಕಾಮಗಾರಿಗಳನ್ನು ಗುಣಮಟ್ಟದಿಂದ ನಿರ್ವಹಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಬೇಕು’ ಎಂದು ಒತ್ತಾಯಿಸಿದರು.

ಈ ಪ್ರತಿಭಟನೆಯಲ್ಲಿ ಗ್ರಾಮಸ್ಥರಾದ ಅರುಣಭಂಡಾರಿ,ಉದಯ, ಶೇಖರಪ್ಪ , ಓಂರಾಜ , ಜಗದೀಶ , ರಾಜು, ಸತೀಶ, ಗಣೇಶ ,ಸಂತೋಷ, ಪಾಂಡು, ಪ್ರಶಾಂತ್ ಹಾಗೂ ಇನ್ನಿತರ ಗ್ರಾಮಸ್ಥರು ಪಾಲ್ಗೊಂಡಿದ್ದರು
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್ ವರದಿ ಅನ್ವಯ? ಇಲ್ಲಿದೆ ಸಂಪೂರ್ಣ ಪಟ್ಟಿ

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್…

15 hours ago

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…

22 hours ago

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

1 day ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

2 days ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

2 days ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

2 days ago