ಆನ್ ಲೈನ್ ವಂಚನೆ : 79,998 ರೂ ಕಳೆದುಕೊಂಡ ಕಾಲೇಜು ವಿದ್ಯಾರ್ಥಿ

ಸರಕಾರ ಹಾಗೂ ಬ್ಯಾಂಕ್ ಗಳು ಹಲವಾರು ಜಾಹಿರಾತಿನ ಮೂಲಕ ಆನ್ ಲೈನ್ ವಂಚನೆಯ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು ಹಲವರು ಈಗಲೂ ಆನ್ ಲೈನ್ ವಂಚಕರ ಬಲೆಗೆ ಬೀಳುತಿದ್ದಾರೆ. ಶಿವಮೊಗ್ಗದ ವಿದ್ಯಾರ್ಥಿಯೊಬ್ಬ ಆನ್ ಲೈನ್ ವಂಚನೆಗೆ ಒಳಗಾಗಿ ಪರಿತಪಿಸುತ್ತಿರುವ ಘಟನೆ ನಡೆದಿದೆ.

ಪಾನ್ ಕಾರ್ಡ ಅಪ್ಡೇಟ್ ಮಾಡಿಕೊಳ್ಳುವಂತೆ ಬಂದ ಲಿಂಕ್ ಒತ್ತುವ ಮೂಲಕ ವಿದ್ಯಾರ್ಥಿಯೋರ್ವ 79998/- ರೂ. ಹಣ ಕಳೆದುಕಂಡ ಘಟನೆ ಈಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ನಡದಿದೆ.

ಅಪರಿಚಿತ ಮೊಬೈಲ್ ನಂಬರ್ ಮೂಲಕ ಬಂದ ಲಿಂಕ್ ನಲ್ಲಿ ನಿಮ್ಮ ಬ್ಯಾಂಕ್ ಖಾತೆಯ ಪಾನ್ ಕಾರ್ಡನ ನಂಬರ್ ನ್ನ ಅಪ್ಡೇಡ್ ಮಾಡಿಕೊಳ್ಳುವಂತೆ ಸೂಚಿಸಿದ್ದರಿಂದ 20 ವರ್ಷದ ವಿದ್ಯಾರ್ಥಿ ಲಿಂಕ್ ಕ್ಲಿಕ್ ಮಾಡಿದ್ದಾನೆ.

ಲಿಂಕ್ ನಲ್ಲಿ SBI ಬ್ಯಾಂಕ್ ನ ವೆಬ್‌ಸೈಟ್ ಓಪನ್ ಆಗಿರುತ್ತದೆ. ಇದು SBI ಬ್ಯಾಂಕ್ ನ ಲಾಗಿನ್ ಎಂದು ನಂಬಿ ವಿದ್ಯಾರ್ಥಿ ಲಾಗಿನ್ ಮತ್ತು ಪಾಸ್ ವರ್ಡ ನೀಡುತ್ತಾನೆ. ಪಾಸ್ ವರ್ಡ ಮತ್ತು ಲಾಗಿನ್ ನೀಡುತ್ತಿದ್ದಂತೆ ಒಟಿಪಿ ಸಿಗುತ್ತದೆ. ಒಟಿಪಿ ಯನ್ನು ಅಪ್ ಡೇಟ್ ಮಾಡುತಿದ್ದಂತೆ 24998/-, 5೦೦೦೦/- ಹಾಗೂ 5 ಸಾವಿರ ರೂವನ್ನ ಹಂತ ಹಂತವಾಗಿ ವಿದ್ಯಾರ್ಥಿಯ ಬ್ಯಾಂಕ್ ಖಾತೆಯಿಂದ ಹಣ ಕಳೆದುಕೊಳ್ಳುತ್ತಾ ಹೋಗುತ್ತಾನೆ.

ತಾನು ಮೋಸಹೋಗಿರುವುದು ವಿದ್ಯಾರ್ಥಿಯ ಅರಿವಿಗೆ ಬರುತ್ತಿದ್ದಂತೆ ಸಿಇಎನ್ ಠಾಣೆಗೆ ದೂರು ನೀಡಿದ್ದಾನೆ.

ಆನ್ ಲೈನ್ ವಂಚಕರ ಬಗ್ಗೆ ಇರಲಿ ಎಚ್ಚರ :

ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಆನ್‌ ಲೈನ್ ವಂಚನೆ ಬಗ್ಗೆ ಅದೆಷ್ಟೇ ಜಾಗೃತಿ ಮೂಡಿಸಿದರೂ, ಗ್ರಾಹಕರು ಒಂದಿಲ್ಲೊಂದು ರೀತಿಯಲ್ಲಿ ವಂಚಕರ ಖೆಡ್ಡಾಗೆ ಬೀಳುವುದು‌ ಮಾತ್ರ ತಪ್ಪಿಲ್ಲ. ಯಾವ ರೀತಿಯಲ್ಲಿ ಜನರಿಗೆ ಮೋಸ ಮಾಡಲಾಗುತ್ತಿದೆ ಎನ್ನುವ ಬಗ್ಗೆ ವರದಿಯೊಂದು ಸಿದ್ಧವಾಗಿದೆ.

ಪ್ರಮುಖವಾಗಿ ಐದು ರೀತಿಯಲ್ಲಿ ಸಾರ್ವಜನಿಕರಿಗೆ ವಂಚನೆ ಮಾಡುತ್ತಿದ್ದು, ಐಡೆಂಟಿಟಿ ಕಳವು ಅಥವಾ ಹೊಸ ಖಾತೆ ಮಾಡಿಸುವ ನೆಪದಲ್ಲಿ ವಂಚಕರು ಗ್ರಾಹಕರ ಬ್ಯಾಂಕ್ ಖಾತೆಯ ಮಾಹಿತಿ ಪಡೆದು ವಂಚಿಸುತ್ತಿದ್ದಾರೆ. ಶೇ.65 ರಷ್ಟು ಮಂದಿ ಈ ರೀತಿಯ ವಂಚನೆಗೆ ಒಳಗಾಗುತ್ತಾರೆ ಎಂದು ಟ್ರಾನ್ಸ್ ಯೂನಿಯನ್ ಸಿಬಿಲ್ ಫ್ರಾಡ್ ಟ್ರೆಂಡ್ ವರದಿಯಲ್ಲಿ ಬಹಿರಂಗವಾಗಿದೆ.

ಇದೇ ರೀತಿಯ ವಂಚನೆಗೆ ಚೆನ್ನೈ ಮೂಲದ ಭರತ್ ಎನ್ನುವವರು 50 ಸಾವಿರ ಕಳೆದುಕೊಂಡಿದ್ದಾರೆ. ವಂಚಕನೊಬ್ಬ ಬ್ಯಾಂಕ್ ಅಧಿಕಾರಿ ಎಂದು ಕರೆ ಮಾಡಿ, ಕಾರ್ಡ್ ಹಾಗೂ ಸಿವಿವಿ ನಂಬರ್ ಪಡೆದುಕೊಂಡು 50 ಸಾವಿರ ರೂ. ವಂಚಿಸಿದ್ದಾನೆ.

ಇನ್ನುಳಿದಂತೆ ನಕಲಿ ದಾಖಲೆಗಳನ್ನು ಇನ್ನೊಬ್ಬರ ಹೆಸರಲ್ಲಿ ಸೃಷ್ಟಿಸಿ ಸಾಲಗಳನ್ನು ಪಡೆದುಕೊಳ್ಳುತ್ತಿದ್ದಾರೆ. ವಂಚಕರ‌ ಮತ್ತೊಂದು ದಾರಿ ಎಂದರೆ ಖಾತೆದಾರರ ಲಾಗ್ ಇನ್ ಐಡಿ-ಪಾಸ್‌ವರ್ಡ್ ಪಡೆದುಕೊಂಡು,‌ ಅಲ್ಲಿಂದ ಖಾತೆಯ ಹಣ ಲಪಟಾಯಿಸುವುದು. ಆದ್ದರಿಂದ ಯಾವುದೇ ಕಾರಣಕ್ಕೂ ಗ್ರಾಹಕರು ಯಾವುದೇ ವ್ಯಕ್ತಿಗೆ ತಮ್ಮ ಖಾತೆಯ ನಂಬರ್, ಪಾಸ್‌ ವರ್ಡ್ ಗಳನ್ನು ನೀಡಬಾರದು. ಬ್ಯಾಂಕಿನ ಅಧಿಕಾರಿಗಳೆಂದರೂ ನೀಡಬಾರದು ಎಂದು ಎಲ್ಲ ಬ್ಯಾಂಕ್‌ ಗಳು ಜಾಗೃತಿ ಮೂಡಿಸುತ್ತಿದ್ದರೂ, ಕೆಲವರು ಈ ಖೆಡ್ಡಾಗೆ ಆಗ್ಗಿಂದಾಗ್ಗೆ ಬೀಳುತ್ತಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್ ವರದಿ ಅನ್ವಯ? ಇಲ್ಲಿದೆ ಸಂಪೂರ್ಣ ಪಟ್ಟಿ

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್…

12 hours ago

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…

19 hours ago

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

1 day ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

1 day ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

1 day ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

1 day ago