ಸಾಗರ : ಮನೆಯಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಆಯಾ ತಪ್ಪಿ ಬಿದ್ದು ಐದು ವರ್ಷದ ಮಗು ಮೃತಪಟ್ಟಿರುವ ಘಟನೆ ನಗರದಲ್ಲಿ ಶನಿವಾರ ಸಂಜೆ ನಡೆದಿದೆ.
ಶನಿವಾರ ಸಂಜೆ ಸುಮಾರು 5-00 ಗಂಟೆಯ ಸುಮಾರಿಗೆ ಸಾಗರ ನಗರಸಭೆ ವ್ಯಾಪ್ತಿಯ ಅಣಲೇಕೊಪ್ಪದಲ್ಲಿ ವಾಸವಾಗಿದ್ದ ಮೂರ್ತಿಹಾಗೂ ರಾಜೇಶ್ವರಿ ದಂಪತಿಯ ಎರಡನೆ ಮಗು ಆಟವಾಡುವಾಗ ಆಯಾ ತಪ್ಪಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಕ್ರಿಶಾ (5) ಮೃತಳಾದ ದುರ್ದೈವಿ.
ಮೂರ್ತಿಹಾಗೂ ರಾಜೇಶ್ವರಿ ದಂಪತಿಗಳುಮೂಲತಃ ಸಾಗರ ತಾಲೂಕಿನ ಹೆಗ್ಗೋಡು ಗ್ರಾ.ಪಂ ವ್ಯಾಪ್ತಿಯ ಹೈತೂರಿನ ಕ್ವಾಗೇರಿರವರಗಿದ್ದಾರೆ. ಮೂರ್ತಿ ಸಾಗರದ ಸೊರಬ ರಸ್ತೆಯ ಹೊಳೆ ಬಸ್ಸ್ ನಿಲ್ದಾಣದ ಹತ್ತಿರ ಬೆಕರಿಯಲ್ಲಿ ಕೆಲಸ ಮಾಡುತ್ತಿದ್ದರು.
ಘಟನೆ ನಡೆದ ತಕ್ಷಣ ಸ್ಥಳೀಯ ನಗರಸಭೆ ಸದಸ್ಯರಾದ ಸುಧಾ ಮಗುವನ್ನು ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿದರು ಯಾವುದೇ ಪ್ರಯೋಜನವಾಗದೇ ಮಗು ಮೃತಪಟ್ಟಿರುತ್ತದೆ.
ಮಗುವಿನ ಅಂತ್ಯ ಸಂಸ್ಕಾರ ಹೈತೂರಿನಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್