ರಿಪ್ಪನ್ಪೇಟೆ: ಇಲ್ಲಿಗೆ ಸಮೀಪದ ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂಡ್ಲೆಮನೆಯ ಶರ್ಮೀಣ್ಯಾವತಿ ನದಿ ತೀರದಲ್ಲಿ ನೆಲೆಸಿರುವ ಶ್ರೀ ಕ್ಷೇತ್ರ ರಾಮತೀರ್ಥದ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಭಾನುವಾರ ಎಳ್ಳಮಾವಾಸ್ಯೆ ನಿಮಿತ್ತ ಸಾವಿರಾರು ಭಕ್ತರು ತೀರ್ಥಸ್ನಾನ ಮಾಡಿದರು.
ಸುತ್ತಮುತ್ತಲ ಗ್ರಾಮಗಳಿಂದ ತಂಡೋಪತಂಡವಾಗಿ ಬಂದ ಭಕ್ತರು ನದಿಯಲ್ಲಿ ಮಿಂದೆದ್ದು, ನದಿ ತೀರದಲ್ಲಿ ನೆಲೆಸಿರುವ ರಾಮೇಶ್ವರನ ಸನ್ನಿಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಕೆಂಜಿಗಾಪುರದ ಶ್ರೀಧರ್ ಭಟ್ ಹಾಗೂ ದೇವಸ್ಥಾನದ ಅರ್ಚಕ ಎ.ವಿ. ಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಹೋಮ ಹವನ ಮತ್ತು ವಿಶೇಷ ಪೂಜೆ ನಡೆಯಿತು. ಹಾಲಂದೂರು ಶ್ರೀಧರ್ ಭಟ್ ಅವರ ನೇತೃತ್ವದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ನಂತರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಭಕ್ತರಿಗೆ ಸಾಮೂಹಿಕ ಅನ್ನಸಂತರ್ಪಣೆ ನಡೆಯಿತು.
ಸಂಜೆ ಹೊಳೆ ದೀಪೋತ್ಸವ ಕಾರ್ಯಕ್ರಮವು ಅತ್ಯಂತ ಅದ್ದೂರಿಯಾಗಿ ನೆರವೇರಿತು.
ದೇವಸ್ಥಾನದ ಸೇವಾ ಸಮಿತಿಯ ಗೌರವಾಧ್ಯಕ್ಷ ಕೆ.ವೈ. ಜಯಂತ್, ಅಧ್ಯಕ್ಷ ಅಚ್ಯುತಾಚಾರ್, ಕಾರ್ಯದರ್ಶಿ ಕರುಣಾಕರ, ಖಜಾಂಚಿ ಗಂಗಾಧರ ಮತ್ತು ಎಲ್. ಶೇಖರಪ್ಪ ಮತ್ತು ಸಮಿತಿ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್