ಶಿರಾಡಿ ಗ್ರಾಮದ ಅಡ್ಡಹೊಳೆ ಸಮೀಪ ಭಾನುವಾರ ಮುಂಜಾನೆ ಸಂಚರಿಸುತ್ತಿದ್ದ ಕಾರನ್ನು ಅದರ ಚಾಲಕ ಬೆಂಗಳೂರು ನಿವಾಸಿ ಸುರೇಶ್ ನಾವಡ (43) ಅವರು ಯಾವುದೋ ಶಬ್ದ ಕೇಳಿದ್ದಕ್ಕಾಗಿ ರಸ್ತೆಯಲ್ಲಿ ನಿಲ್ಲಿಸಿ ನೋಡುತ್ತಿದ್ದ ವೇಳೆ ಮರವೊಂದು ಕಾರಿನ ಮೇಲೆ ಹಠಾತ್ ಆಗಿ ಬಿದ್ದ ಪರಿಣಾಮ ಚಾಲಕ ಸುರೇಶ್ ನಾವಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಸುರೇಶ್ ನಾವಡ ಅವರು ಬೆಂಗಳೂರು ಐಬಿಎಂ ಸಾಫ್ಟ್ ವೇರ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದು ಡಿಸೆಂಬರ್ 23 ರಂದು ಪತ್ನಿ ಮಕ್ಕಳೊಂದಿಗೆ ತಾಯಿ ಮನೆಯಾದ ಪಾವಂಜೆಗೆ ಬಂದಿದ್ದು, ಭಾನುವಾರ ಮುಂಜಾನೆ 5.30 ರ ವೇಳೆಗೆ ಗಂಟೆಗೆ ಮರಳಿ ಬೆಂಗಳೂರಿಗೆ ತೆರಳಲು ಪಾವಂಜೆಯಿಂದ ತನ್ನ ಕೆ.ಎ 41 ಎನ್ 6613 ನೋಂದಣಿ ಸಂಖ್ಯೆಯ ಐ20 ಕಾರಿನಲ್ಲಿ ಹೊರಟಿದ್ದು, ಬೆಳಿಗ್ಗೆ ಸುಮಾರು 7-20 ರವೇಳೆಗೆ ಕಡಬ ತಾಲೂಕು ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿಗೆ ತಲುಪಿದಾಗ ಏನೋ ಒಂದು ಶಬ್ದ ಕೇಳಿ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಕಾರಿನಿಂದ ಇಳಿಯುತ್ತಿರುವ ಸಮಯ ರಸ್ತೆ ಬದಿಯ ಅಭಯಾರಣ್ಯದಿಂದ ಒಂದು ಮರವು ಅವರ ಮೇಲೆ ಬಿದ್ದ ಪರಿಣಾಮ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಿಂದ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ಯಾವುದೇ ಗಾಯಗಳಾಗಿರುವುದಿಲ್ಲ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್