ಕೋಣಂದೂರು : ಇಲ್ಲಿನ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ಬೆಳಿಗ್ಗೆ ಸಾಮಾನ್ಯ ಸಭೆ ನಡೆಯುತ್ತಿದ್ದ ವೇಳೆ ಇಬ್ಬರು ಗ್ರಾಮ ಪಂಚಾಯತ್ ಸದಸ್ಯರು ಹೊಡೆದಾಡಿಕೊಂಡು ಆಸ್ಪತ್ರೆ ಸೇರಿರುವ ಘಟನೆ ನಡೆದಿದ್ದು, ಇಬ್ಬರೂ ಆಸ್ಪತ್ರೆ ದಾಖಲಾಗಿದ್ದಾರೆ.
ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯ ಸುರೇಶ್ ಮತ್ತು ಬಿಜೆಪಿ ಬೆಂಬಲಿತ ಸದಸ್ಯ ಪೂರ್ಣೇಶ್ ಇಬ್ಬರ ನಡುವೆ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದು ಇಬ್ಬರು ಕೈ ಕೈ ಮಿಲಾಯಿಸಿಕೊಂಡಿದ್ದಾರೆ.
ಘಟನೆಯಲ್ಲಿ ಸುರೇಶ್ ಅವರಿಗೆ ಗಂಭೀರ ಗಾಯವಾಗಿದ್ದು, ತೀರ್ಥಹಳ್ಳಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಪೂರ್ಣೇಶ್ ಅವರು ಕೋಣಂದೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಸಮಾಜವಾದದ ನೆಲದಲ್ಲಿ ಈ ತರಹದ ಘಟನೆ ನಡೆಯುತ್ತಿರುವುದು ಬೇಸರದ ಸಂಗತಿಯಾಗಿದೆ.
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ .