ಕೋವಿಡ್ ಬೂಸ್ಟರ್ ಡೋಸ್ ಲಸಿಕಾಕರಣ :: ಸಚಿವ ಈಶ್ವರಪ್ಪ ಚಾಲನೆ

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಶಿವಮೊಗ್ಗ(ಸಿಮ್ಸ್) ನಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪ ಇವರು ಕೋವಿಡ್-19 ಮುನ್ನೆಚ್ಚರಿಕೆ(ಬೂಸ್ಟರ್)ಡೋಸ್ ಲಸಿಕಾಕರಣಕ್ಕೆ ಚಾಲನೆ ನೀಡಿದರು.
ಈ ವೇಳೆ ಅವರು ಮಾತನಾಡಿ, ಭಾರತ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಜ.10 ರಿಂದ ಮೊದಲನೇ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷ ಮೇಲ್ಪಟ್ಟ ಸಹ ಅಸ್ವಸ್ಥತೆ(ಕೋಮಾರ್ಬಿಡಿಟಿ) ಹೊಂದಿರುವ ಫಲಾನುಭವಿಗಳಿಗೆ ಕೋವಿಡ್ 19 ಬೂಸ್ಟರ್ ಡೋಸ್ ಲಸಿಕೆ ನೀಡಲಾಗುತ್ತಿದ್ದು ಎಲ್ಲ ಅರ್ಹರು ಈ ಬೂಸ್ಟರ್ ಡೋಸ್ ಪಡೆಯಬೇಕೆಂದು ಕರೆ ನೀಡಿದರು.
  ಆರ್‍ಸಿಹೆಚ್‍ಓ ಡಾ.ನಾಗರಾಜನಾಯ್ಕ ಕಾರ್ಯಕ್ರಮದ ನಂತರ ಮಾತನಾಡಿ, ಈಗಾಗಲೇ ಲಸಿಕೆ ಪಡೆದಿರುವ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಸಹ ಅಸ್ವಸ್ಥತೆ ಹೊಂದಿರುವ ಫಲಾನುಭವಿಗಳು ಕೋವಿಡ್ ಪೋರ್ಟಲ್‍ನಲ್ಲಿ ನೊಂದಾಯಿಸಿದಂತೆ 2 ನೇ ಡೋಸ್ ಪಡೆದ 09 ತಿಂಗಳ(39 ವಾರಗಳು) ನಂತರ ಬೂಸ್ಟರ್ ಡೋಸ್ ಪಡೆಯಲು ಅರ್ಹರಿರುತ್ತಾರೆ.
    ಈ ಫಲಾನುಭವಿಗಳು ಈ ಮುಂಚೆ ಮೊದಲ ಹಾಗೂ ಎರಡನೇ ಡೋಸ್ ಕೋವಿಶೀಲ್ಡ್ ಪಡೆದಿದ್ದಲ್ಲಿ ಈಗ ಬೂಸ್ಟರ್ ಡೋಸ್ ಕೂಡ ಕಡ್ಡಾಯವಾಗಿ ಕೋವಿಶೀಲ್ಡನ್ನೇ ಪಡೆಯತಕ್ಕದ್ದು. ಮುಂಚೆ ಕೋವ್ಯಾಕ್ಸಿನ್ ಪಡೆದಿದ್ದಲ್ಲಿ ಬೂಸ್ಟರ್ ಡೋಸ್ ಕೂಡ ಕಡ್ಡಾಯವಾಗಿ ಕೋವ್ಯಾಕ್ಸಿನ್ ತೆಗೆದುಕೊಳ್ಳಬೇಕು.
   ಬೂಸ್ಟರ್ ಡೋಸ್‍ಗಾಗಿ ಯಾವುದೇ ಹೊಸ ಫಲಾನುಭವಿಗಳನ್ನು ಕೋವಿನ್ ಪೋರ್ಟಲ್‍ನಲ್ಲಿ ನೋಂದಾಯಿಸುವಂತಿಲ್ಲ. ಜಿಲ್ಲೆಯ ಎಲ್ಲ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಉಚಿತವಾಗಿ ಲಸಿಕಾಕರಣ ನಡೆಸಲಾಗುತ್ತದೆ.
ಗುರಿ ಮತ್ತು ಫಲಾನುಭವಿಗಳ ವಿವರ : ಆರೋಗ್ಯ ಕಾರ್ಯಕರ್ತರಿಗೆ 23124 ಮತ್ತು ಮುಂಚೂಣಿ ಕಾರ್ಯಕರ್ತರಿಗೆ 18154 ಲಸಿಕೆ ನೀಡುವ ಗುರಿ ಹೊಂದಲಾಗಿದೆ.
    ಆರೋಗ್ಯ ಕಾರ್ಯಕರ್ತೆಯರಿಗೆ 1ನೇ ಡೋಸ್ 23124, 2ನೇ ಡೋಸ್ 22573 ಲಸಿಕೆ ನೀಡಲಾಗಿದೆ. ಮುಂಚೂಣಿ ಕಾರ್ಯಕರ್ತೆಯರಿಗೆ 1ನೇ ಡೋಸ್ 18152, 2ನೇ ಡೋಸ್ 17822 ಲಸಿಕೆ ನೀಡಲಾಗಿದೆ. 18 ರಿಂದ 44 ವರ್ಷ ವಯಸ್ಸಿನ ನಾಗರೀಕರಿಗೆ 1ನೇ ಡೋಸ್ 690891, 2ನೇ ಡೋಸ್ 516566 ಲಸಿಕೆ ನೀಡಲಾಗಿದೆ. 45 ರಿಂದ 59 ವರ್ಷ ವಯಸ್ಸಿನ ನಾಗರಿಕರಿಗೆ 1ನೇ ಡೋಸ್ 310132, 2ನೇ ಡೋಸ್ 297041 ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರೀಕರಿಗೆ 1ನೇ ಡೋಸ್ 204831, 2ನೇ ಡೋಸ್ 179185 ಲಸಿಕೆ ನೀಡಲಾಗಿದೆ. ಮತ್ತು 15 ರಿಂದ 17 ವರ್ಷ ವಯಸ್ಸಿನ ಮಕ್ಕಳಿಗೆ 1ನೇ ಡೋಸ್ 44482 ಲಸಿಕೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
    ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ್, ಡಿ.ಎಸ್.ಅರುಣ್, ಮಹಾನಗರಪಾಲಿಕೆ ಮಹೌಪೌರರಾದ ಸುನೀತಾ ಅಣ್ಣಪ್ಪ, ಉಸ್ತುವಾರಿ ಸಚಿವರ ಧರ್ಮಪತ್ನಿ ಜಯಲಕ್ಷ್ಮಿ,, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ದಿ ನಿಗಮದ ಉಪಾಧ್ಯಕ್ಷ ಎಸ್.ದತ್ತಾತ್ರಿ, ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಸಿಮ್ಸ್ ನಿರ್ದೇಶಕ ಡಾ.ಸಿದ್ದಪ್ಪ, ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶ್ರೀಧರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಿದ್ದನಗೌಡ, ಇತರರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ತೀರ್ಥಹಳ್ಳಿ ಗುಡ್ಡ ಕುಸಿತ: ಸಂತ್ರಸ್ತರಿಗೆ ನಿವೇಶನ, ಮನೆ ನಿರ್ಮಾಣಕ್ಕೆ ನೆರವು – ಮಧು ಬಂಗಾರಪ್ಪ

ತೀರ್ಥಹಳ್ಳಿ ಗುಡ್ಡ ಕುಸಿತ: ಸಂತ್ರಸ್ತರಿಗೆ ನಿವೇಶನ, ಮನೆ ನಿರ್ಮಾಣಕ್ಕೆ ನೆರವು – ಮಧು ಬಂಗಾರಪ್ಪ Minister Madhu Bangarappa visits…

5 hours ago

ಸಾಗರದಲ್ಲಿ ನಕಲಿ ನೋಟುಗಳ ಹಾವಳಿ ಆರೋಪ: ಸಣ್ಣ ವ್ಯಾಪಾರಿಗಳಿಗೆ ಸಂಕಷ್ಟ

ಸಾಗರದಲ್ಲಿ ನಕಲಿ ನೋಟುಗಳ ಹಾವಳಿ ಆರೋಪ: ಸಣ್ಣ ವ್ಯಾಪಾರಿಗಳಿಗೆ ಸಂಕಷ್ಟ Fake currency circulation allegedly increasing in Sagara,…

5 hours ago

ವೋಟರ್ ಲಿಸ್ಟ್‌ನಲ್ಲಿ ನಿಮ್ಮ ಹೆಸರು ಡಿಲೀಟ್ ಆಗಿದೆಯಾ? ಮೊಬೈಲ್‌ನಲ್ಲೇ ಪರಿಶೀಲಿಸಿ; ಇಲ್ಲಿದೆ ಸುಲಭ ವಿಧಾನ

ವೋಟರ್ ಲಿಸ್ಟ್‌ನಲ್ಲಿ ನಿಮ್ಮ ಹೆಸರು ಡಿಲೀಟ್ ಆಗಿದೆಯಾ? ಮೊಬೈಲ್‌ನಲ್ಲೇ ಪರಿಶೀಲಿಸಿ; ಇಲ್ಲಿದೆ ಸುಲಭ ವಿಧಾನ Check whether your name…

5 hours ago

ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ

ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ…

1 day ago

ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ Ripponpete Kenchanala Sri Marikamba Devi…

1 day ago

ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ

ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ Shikaripura MLA B.Y. Vijayendra…

1 day ago