ರಿಪ್ಪನ್ ಪೇಟೆ : ಹೊಸನಗರ ತಾಲ್ಲೂಕಿನ ಬೆಳ್ಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ನೊಬ್ಬನು ಧ್ವಜಾರೋಹಣ ದಿನದಂದೇ ರಾಷ್ಟ್ರಧ್ವಜಕ್ಕೆ ಶೂ ಧರಿಸಿ ಅವಮಾನ ಮಾಡಿದ್ದಾರೆ.
ಬೆಳ್ಳೂರು ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ರಾದ ಅಪ್ಪಾ ಸಾಹೇಬ್ ದರಿ ಗೌಡಾ ಎಂಬುವವರು ಗಣರಾಜ್ಯೋತ್ಸವ ದಿನದಂದು ಧ್ವಜಾರೋಹಣ ಸಮಾರಂಭದಲ್ಲಿ ಶೂ ಧರಿಸಿ ಧ್ವಜಾರೋಹಣ ಮಾಡಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ.
ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ಗೆ ಮಾಹಿತಿ ನೀಡಿದ ಗ್ರಾಮಸ್ಥರೊಬ್ಬರು ಇಂದು ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ಮಾಡುವ ಅತಿಥಿಗಳಿಗೆ ಧ್ವಜರೋಹಣ ಕಂಬದ ಬಳಿ ಕರೆದುಕೊಂಡು ಬಂದು ಧ್ವಜರೋಹಣ ಮಾಡುವಂತಹ ಸಂದರ್ಭದಲ್ಲಿ ದೈಹಿಕ ಶಿಕ್ಷಕ ಅಪ್ಪಾ ಸಾಹೇಬ್ ಧರಿ ಗೌಡ ಎಂಬುವವರು ಶೂ ಧರಿಸಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ.
ರಾಷ್ಟ್ರೀಯ ಹಬ್ಬಗಳಲ್ಲಿ ಗಣರಾಜ್ಯೋತ್ಸವ ಕೂಡ ಒಂದು ಹಬ್ಬವಾಗಿದೆ ಅದರಂತೆ ಬೇಜವಾಬ್ದಾರಿ ತೋರಿದ ದೈಹಿಕ ಶಿಕ್ಷಕನ ಫೋಟೋಗಳು ವೈರಲ್ ಆಗಿದ್ದು ದೇಶಾಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ.
ಮಕ್ಕಳಿಗೆ ಸರಿಯಾದ ದಾರಿ ತೋರಿಸುವ ಶಿಕ್ಷಕರೇ ಇಂತಹ ಕೆಲಸ ಮಾಡಿದರೆ ದೇಶದ ಭವಿಷ್ಯದ ಬುನಾದಿಯಲ್ಲಿ ಮಕ್ಕಳು ಏನನ್ನು ಕಲಿಯುತ್ತಾರೆ ಅನ್ನೋದು ಯಕ್ಷ ಪ್ರಶ್ನೇಯಾಗಿದೆ.
ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳುವ ಮೂಲಕ ಮುಂದೆಯೂ ಕೂಡ ಯಾವುದೇ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಶಿಕ್ಷಣ ಪ್ರೇಮಿಗಳ ಮತ್ತು ಜನಸಾಮಾನ್ಯರ ಒತ್ತಾಯವಾಗಿದೆ.