ಗವಟೂರು ಹೊಳೆಯ ಒಡಲು ಬಗೆಯುತ್ತಿರುವ ಮರಳು ದಂಧೆಕೋರರು : ಈ ಮಾಫ಼ಿಯಾ ತಡೆಯುವಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಅಸಹಯಕರೋ.. ? ಅಸಮರ್ಥರೋ…?

ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಗವಟೂರು ಶ್ರೀ ಸಿದ್ಧೇಶ್ವರ ದೇವಸ್ಥಾನದ ಪಾರ್ಶ್ವದಲ್ಲಿರುವ ನದಿ ಪಾತ್ರದಲ್ಲಿ ಎಗ್ಗಿಲ್ಲದೇ ಮರಳು ದಂಧೆ ನಡೆಸುವುದು ಅಕ್ರಮ ಮರಳು ದಂಧೆಕೋರರಿಗೆ ದಿನಪ್ರತಿಯ ಕಸುಬಾಗಿದೆ.

ಶರ್ಮಣ್ಯಾವತಿ (ಗವಟೂರು ಹೊಳೆ) ನದಿಯಿಂದ ಮರಳೆತ್ತುವ ಕಾರ್ಯದಲ್ಲಿ ಹೊರರಾಜ್ಯ ಬಿಹಾರದ ಹತ್ತಾರು ಕೂಲಿ ಕಾರ್ಮಿಕರನ್ನು ಬಳಸಿಕೊಳ್ಳಲಾಗುತ್ತಿದೆ. ಟ್ಯೂಬ್, ಬಕೇಟ್, ಬುಟ್ಟಿಯನ್ನು ಉಪಯೋಗಿಸಿಕೊಂಡು ಹಗಲು ಹೊತ್ತಿನಲ್ಲಿ ನದಿ ಮಧ್ಯದಿಂದ ಮರಳನ್ನು ತೆಗೆದು ಸಂಗ್ರಹಿಸಿಟ್ಟುಕೊಂಡು ರಾತ್ರಿಯಾಗುತ್ತಿದ್ದಂತೆ ವಾಹನಗಳೊಂದಿಗೆ ಬೇರೆ ಬೇರೆ ತಾಲೂಕುಗಳಿಗೆ ಮರಳು ಸರಬರಾಜು ಮಾಡುವ ವಹಿವಾಟು ನಡೆಸಲಾಗುತ್ತಿದೆ

ಇಲ್ಲಿ ಅರಣ್ಯ ಪ್ರದೇಶಕ್ಕೆ ಅನ್ಯರಿಗೆ ಅವಕಾಶವಿಲ್ಲದಂತೆ ಕಂದಕವನ್ನು ನಿರ್ಮಿಸಿಕೊಂಡಿದ್ದರೂ ಕಂದಕವನ್ನು ಮುಚ್ಚಿ ರಸ್ತೆ ನಿರ್ಮಿಸಿಕೊಂಡ ದಂಧೆಕೋರರು ರಾಜಾರೋಷವಾಗಿ ತಮ್ಮ ಸಾಮ್ರಾಜ್ಯ ವಿಸ್ತರಿಸಿ ಕೊಂಡಿದ್ದಾರೆ. ದೇವಸ್ಥಾನಕ್ಕೆ ಪ್ರವೇಶಿಸುವ ರಸ್ತೆಗೆ ಗೇಟ್ ಅಳವಡಿಸಿ ಬೀಗ ಹಾಕಲಾಗಿದ್ದರೂ ನಿರಂತರವಾಗಿ ಅಕ್ರಮ ಮರಳು ವಹಿವಾಟು ನಡೆಯುತ್ತಿರುವ ಬಗ್ಗೆ ದೇವಸ್ಥಾನ ಸಮಿತಿಯವರು ಗಮನಹರಿಸದಿರುವುದು ಯಕ್ಷಪ್ರಶ್ನೆಯಾಗಿ ಉಳಿದಿದೆ.

ಸರ್ಕಾರಿ ಕಾಮಗಾರಿಗೆ ಬಳಸುವ ಉದ್ದೇಶದಿಂದ ಮರಳು ಸಂಗ್ರಹಿಸಲಾಗುತ್ತಿದೆ ಎಂಬುದು ಕೂಲಿಕಾರ್ಮಿಕನ ಅಭಿಪ್ರಾಯವಾಗಿತ್ತು. ಇದಕ್ಕೆ ಸಾಗರ ಮೂಲದ ಖಾಸಗಿ ವ್ಯಕ್ತಿಯೊಬ್ಬ  ಕಿಂಗ್ ಪಿನ್ ಆಗಿದ್ದಾರೆ ಎಂದು ಇಲ್ಲಿ ಮರಳು ತೆಗೆಯುವ ವ್ಯಕ್ತಿಯ ಹೇಳುತ್ತಾನೆ.

ಸರ್ಕಾರಕ್ಕೊಂದು ನಿಯಮ ಜನಸಾಮಾನ್ಯರಿಗೊಂದು ನಿಯಮ ಮರಳು ನೀತಿಯಲ್ಲಿ ಅಳವಡಿಸಲಾಗಿದೆ ಎಂಬುದು ಗೊಂದಲಕ್ಕೆ ಎಡೆಮಾಡಿದೆ ಸರ್ಕಾರದ ಕೋಟ್ಯಂತರ ರೂಪಾಯಿ ರಾಜಧನವನ್ನು ನಷ್ಟಗೊಳಿಸಿ ಗುತ್ತಿಗೆದಾರರು ಲಾರಿ ಮಾಲೀಕರು ದಂಧೆಕೋರರು ಲಾಭ ಗಳಿಸಿಕೊಳ್ಳುತ್ತಿದ್ದಾರೆ ಅಕ್ರಮ ವ್ಯವಹಾರದಲ್ಲಿ ಮೌನ ಸಮ್ಮತಿ ನೀಡಿರುವ ಆಡಳಿತ ವ್ಯವಸ್ಥೆಯಿಂದ ಅಪಾರ ಪ್ರಮಾಣದ ಸಂಪತ್ತು ನಾಶವಾಗುತ್ತಿದೆ.

ಸ್ವಾಭಾವಿಕ ಖನಿಜ ಸಂಪತ್ತನ್ನು ಸಂರಕ್ಷಿಸುವ ಬೇಕಾಗಿದ್ದ ಗಣಿ ಮತ್ತು ಭೂವಿಜ್ಞಾನ, ಲೋಕೋಪಯೋಗಿ, ಕಂದಾಯ, ಅರಣ್ಯ, ಪೊಲೀಸ್ ಹಾಗೂ ಇತರ ಇಲಾಖೆಯ ಅಧಿಕಾರಿಗಳು ಅಕ್ರಮ ಮರಳು ದಂಧೆಯನ್ನು ನಿಯಂತ್ರಿಸುವಲ್ಲಿ ಅಸಮರ್ಥರೋ ಅಥವಾ ಅಸಹಾಯಕರೋ ಎಂಬ ಜಿಜ್ಞಾಸೆ ಜನರಲ್ಲಿ ಮೂಡಿದ್ದು ಅಧಿಕಾರಿಗಳ ಗಮನದಲ್ಲಿ ಇದ್ದೆ ಅಕ್ರಮ ಮರಳು ದಂಧೆ ನಡೆಯುತ್ತಿದೆ ಆದ್ದರಿಂದಲೇ ಅಧಿಕಾರಸ್ಥರು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಈ ಭಾಗದ ನಾಗರಿಕರು ಮಾಹಿತಿ ನೀಡುತ್ತಾರೆ.
ಚುನಾವಣಾ ಸಂದರ್ಭದಲ್ಲಿ ಅಕ್ರಮ ಮರಳು ಸಾಗಣೆ ಒಂದು  ದೊಡ್ಡ ದೊಡ್ಡ ವಿಷಯವಾಗಿ ರಾಜಕೀಯ ಪಕ್ಷಗಳು ಆರೋಪ ಪ್ರತ್ಯಾರೋಪಗಳಿಗೆ ಎಡೆ ಮಾಡುವ ರಾಜಕಾರಣಿಗಳು ಇತರ ದಿನದಲ್ಲಿಯೂ ದಕ್ಷತೆ ಪ್ರದರ್ಶಿಸಿ ಪರಿಸರ ರಕ್ಷಣೆಗೆ ಮುಂದಾಗಬೇಕಾಗಿದೆ.

ಈ ಬಗ್ಗೆ ಉಪ ತಹಶಿಲ್ದಾರ್ ಹುಚ್ಚುರಾಯಪ್ಪ ಅವರ ಬಳಿ ಪ್ರಶ್ನಿಸಿದಾಗ ಅಕ್ರಮ ಮರಳು ಸಾಗಣೆ ನಿಯಂತ್ರಣಕ್ಕಾಗಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು ಸೋಮವಾರದಿಂದ ಗಸ್ತು ತಿರುಗುವ ಮೂಲಕ ಅಕ್ರಮ ಸಾಗಣೆಗೆ ಕಡಿವಾಣ ಹಾಕಲಾಗುವುದು ಎಂದು ಹೇಳುವ ಮೂಲಕ ಕೋಟೆ ಲೂಟಿ ಆದ ನಂತರ‌ ಕೋಟೆ ಬಾಗಿಲು ಹಾಕಿದ ಕಥೆಯನ್ನು ನೆನಪಿಸಿದ್ದಾರೆ.


ರಾಜಾರೋಷವಾಗಿ ಮರಳು ತೆಗೆಯುವ ವೀಡಿಯೋ ನೋಡಿ  👇👇👇👇👇👇👇



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

12 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

12 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

13 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago