ಗವಟೂರು ಹೊಳೆಸಿದ್ದೇಶ್ವರ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆದ ಎಳ್ಳಮವಾಸ್ಯೆ ಜಾತ್ರಾ ಮಹೋತ್ಸವ:

ರಿಪ್ಪನ್‌ಪೇಟೆ : ಇಲ್ಲಿನ ಗವಟೂರು ಹೊಳೆಸಿದ್ದೇಶ್ವರ ಸ್ವಾಮಿಯ ಎಳ್ಳಮವಾಸ್ಯೆ ಜಾತ್ರಾಮಹೋತ್ಸವ ಕಾರ್ಯಕ್ರಮ ಮತ್ತು ಧರ್ಮಸಮಾರಂಭ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

ಜಾತ್ರಾಮಹೋತ್ಸವ ಕಾರ್ಯಕ್ರಮ ಮತ್ತು ಧರ್ಮಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಅಶೀರ್ವಚನ ನೀಡಿದ ಮಳಲಿಮಠದ ಷ.ಬ್ರ.ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿಗಳು ಸಂಘಟನೆ ಸದ್ಭಾವನೆಯೊಂದಿಗೆ ಯುವಜನಾಂಗ ಧಾರ್ಮಿಕ ಅಚರಣೆಗಳಲ್ಲಿ ತೊಡಗಿಸಿಕೊಂಡು ಸುಸಂಸ್ಕೃತ ಸಮಾಜ ನಿರ್ಮಾಣದಲ್ಲಿ ಹೆಚ್ಚು ಆಸಕ್ತಿ ವಹಿಸಬೇಕು,  ದುಡಿಮೆಯಿಂದ ಗಳಿಸಿದ ಹಣವನ್ನು ದಾನ, ಧರ್ಮಕ್ಕಾಯಕ್ಕೆ ವಿನಿಯೋಗಿಸಿದರೆ ಪುಣ್ಯನಾದರು ಬರುತ್ತದೆ ಅದೇ ಬಚ್ಚಿಟ್ಟರೆ ಪರರ ಪಾಲಾಗುತ್ತದೆ ಈಗಲಾದರೂ ಗಳಿಸಿದ ಸಂಪತ್ತು ಇನ್ನೊಬ್ಬರಿಗೆ ದಾನ ಮಾಡಿ ಪುಣ್ಯ ಗಳಿಸಿ ಎಂದು  ಹೇಳಿದರು.

ನಂತರ ಮಾತನಾಡಿದ ಹೊಸನಗರ ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ಹೊಳೆ ಸಿದ್ದೇಶ್ವರ  ದೇವಸ್ಥಾನದ ಮುಂಭಾಗದಲ್ಲಿ ಹೊಸದಾಗಿ ಶೀಟ್ ಹಾಕುವ ಬೇಡಿಕೆ ಇದೆ ಮುಂದಿನ ದಿನಗಳಲ್ಲಿ ಅವಕಾಶ ಸಿಕ್ಕರೆ ವ್ಯವಸ್ಥಿತವಾಗಿ ಶೀಟ್ ಹಾಕಿ ಕೊಡುವ ಕೆಲಸ ಮಾಡುತ್ತೇನೆ ಹಾಗೆಯೇ ಹೊಳೆ ಸಿದ್ದೇಶ್ವರ ದೇವಸ್ಥಾನದ ಅಭಿವೃದ್ಧಿ ವಿಚಾರದಲ್ಲಿ ಈ  ಹಿಂದೆ ಹೇಗೆ ನಮ್ಮ ಸಹಕಾರವಿತ್ತು   ಹಾಗೆಯೇ ಮುಂದೆಯೂ ನಮ್ಮ ಸಹಕಾರವಿರುತ್ತದೆ ಎಂದು ಹೇಳಿದರು.

ಹೊಳೆಸಿದ್ದೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಜಿ.ಡಿ.ಮಲ್ಲಿಕಾರ್ಜುನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಗ್ರಾ.ಪಂ.ಉಪಾಧ್ಯಕ್ಷ ಅರುಣಾಚಲ, ಗ್ರಾ.ಪಂ. ಸದಸ್ಯರಾದ ಗಣಪತಿ ಗವಟೂರು, ವೇದಮೂರ್ತಿ, ರಾಮೋಜಿರಾವ್, ವೆಂಕಟಾಚಲ, ಕೃಷ್ಣಶೆಟ್ಟ್ರು, ದೇವಸ್ಥಾನ ಅರ್ಚಕ ಧರ್ಮಾಕ್ಷಪ್ಪಗೌಡ ಇನ್ನಿತರರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

6 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

22 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

22 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

22 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

1 day ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

1 day ago