ಗೃಹ ಸಚಿವರ ಕ್ಷೇತ್ರದಲ್ಲಿ ಅಕ್ರಮ ಮರಳುಗಾರಿಕೆಯ ಫೋಟೋ ತೆಗೆದಿದ್ದಕ್ಕೆ ಪತ್ರಕರ್ತನಿಗೆ ಟಾರ್ಚರ್ : ಕಣ್ಮುಚ್ಚಿ ಕುಳಿತಿವೆ ಸಂಬಂಧಪಟ್ಟ ಇಲಾಖೆಗಳು

ತೀರ್ಥಹಳ್ಳಿಯ ಹಿರಿಯ ಪತ್ರಕರ್ತ ಲಿಯೋ ಅರೋಜರವರನ್ನು ತೀರ್ಥಹಳ್ಳಿಯ ಪ್ರತಿಷ್ಠಿತ ಸಮಾಜದ ಮುಖಂಡರೆಲ್ಲಾ ಸೇರಿ ಕುಶಾವತಿ ಸೇತುವೆ ಬಳಿ ಸುಮಾರು ನಾಲ್ಕುಗಂಟೆಯ ವರೆಗೆ ಕೂರಿಸಿಕೊಂಡು ಮಾನಸಿಕ ಹಿಂಸೆ ನೀಡಿರುವ ಘಟನೆ ನಡೆದಿದೆ.
ಗೃಹ ಸಚಿವರ ಕ್ಷೇತ್ರದಲ್ಲಿ ಪತ್ರಕರ್ತನೋರ್ವನಿಗೆ ರಕ್ಷಣೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು ಸಜ್ಜನರ ನಾಡಾಗಿದ್ದ ತೀರ್ಥಹಳ್ಳಿ ಮರಳು ಮಾಫಿಯಾದ ಗೂಂಡಾರಾಜ್ಯವಾಗಿ ನಿರ್ಮಾಣವಾಗಿ ಬಿಟ್ಟಿತೇ ಎಂಬ ಆತಂಕ ಎದುರಾಗಿದೆ.
ಯಾವುದೇ ನದಿ ಸೇತುವೆಗಳ ಕೆಳಗಡೆ ಮರಳು ತೆಗೆಯದಂತೆ ಸುಪ್ರೀಕೋರ್ಟ್ ಆದೇಶವಿದೆ. ಆದರೆ ಕುಶಾವತಿ ಸೇತುವೆ ಕೆಳಗೆ ತೀರ್ಥಹಳ್ಳಿಯ ಪ್ರತಿಷ್ಠಿತ ಸಮಾಜದ ಮುಖಂಡರು ಸೇರಿ ಇಂದು ಅಕ್ರಮ‌ ಮರಳು ಹೊಡೆದಿದ್ದಾರೆ.
ಈ ಅಕ್ರಮ ಮರಳು ತೆಗೆದಿರುವುದಕ್ಕೆ ಜಿಲ್ಲಾಡಳಿತ ಸುಮೋಟೋ ಪ್ರಕರಣ ದಾಖಲಿಸಿಕೊಳ್ಳಬೇಕಿತ್ತು. ಆದರೆ ಇಡೀ ಜಿಲ್ಲಾಡಳಿತ ನಿದ್ರೆಗೆ ಜಾರಿದೆ.
ಜನ ಸಾಮಾನ್ಯರ ಮೇಲೆ ಗಧಾಪ್ರಹಾರ ನಡೆಸುವ ಇಲಾಖೆಗಳು ಸಮಾಜದ ನಾಯಕರ ವಿರುದ್ಧ ಗಪ್ ಚುಪ್ ಆಗಿದೆ.
ಪ್ರತಿಷ್ಠಿತ ಸಂಘ ಸಂಸ್ಥೆಯ ಮುಖಂಡರು 20 ಲಾರಿ ಮತ್ತು 20 ಜೆಸಿಬಿಯನ್ನು ತರಿಸಿ ನೂರಾರು ಲೋಡು ಮರಳನ್ನು ಸಾಗಿಸಿದ್ದಾರೆ.
ವಿಷಯ ತಿಳಿದ ಪತ್ರಕರ್ತ ಲಿಯೋ ಅರೋಜ ಈ ಬಗ್ಗೆ ಫೋಟೊ ತೆಗೆದುಕೊಂಡು ಹತ್ತಿರದಲ್ಲಿಯೇ ಇರುವ ಮನೆಗೆ ತೆರಳಿದ್ದಾರೆ. ಪತ್ರಕರ್ತ ಲಿಯೋ ಅರೋಜರನ್ನು ಪರಿಚಯಸ್ಥರ ಮೂಲಕ ಸ್ಥಳಕ್ಕೆ ಕರೆಯಿಸಿಕೊಂಡು ಸೇತುವೆಯ ಕೆಳಗೆ ಕೂರಿಸಿಕೊಂಡು ಪ್ರತಿಷ್ಠಿತ ಸಮಾಜದ ಮುಖಂಡರು ಪೌರುಷ ತೋರಿದ್ದಾರೆ.
ಸುಮಾರು ಬೆಳಿಗ್ಗೆ 10 ಗಂಟೆಗೆ ಲಿಯೋ ಅರೋಜರವರ ಮನೆಗೆ ಬಂದ ಪರಿಚಯವಿದ್ದ ವ್ಯಕ್ತಿ ನಿಮ್ಮೊಂದಿಗೆ ಮಾತನಾಡಬೇಕು ಬನ್ನಿ ಎಂದು ಕರೆದುಕೊಂಡು ಹೋಗಿದ್ದಾರೆ. ಹೋದಾಗ ಅವರನ್ನ ಮರಳು ಹೊಡೆಯುವುದು ಮುಗಿಯುವ ವರೆಗೆ ಹೋಗುವ ಹಾಗಿಲ್ಲವೆಂದು ಕೂರಿಸಿಕೊಂಡು ಟಾರ್ಚರ್ ನೀಡಿದ್ದಾರೆ.
ನಂತರ ಇವರ ಮಗ ಎಸ್ಪಿ ಲಕ್ಷ್ಮೀಪ್ರಸಾದ್ ಗೆ ವಿಷಯ ಮುಟ್ಟಿಸಿದ ಮೇಲೆ ಮಧ್ಯಾಹ್ನ 2 ಗಂಟೆಗೆ ತೀರ್ಥಹಳ್ಳಿಯ ಸಿಪಿಐ ಸ್ಥಳಕ್ಕೆ ಧಾವಿಸಿ ಅರೋಜರನ್ನ ಬಿಡುಗಡೆ ಮಾಡಿದ್ದಾರೆ. ಒಂದು ಪ್ರತಿಷ್ಠಿತ ಸಮಾಜದ ಹೆಸರಿನಲ್ಲಿ ತೀರ್ಥಹಳ್ಳಿಯಲ್ಲಿ ಗೂಂಡಾಗಿರಿ ನಡೆದಿದೆ.‌ ಆದರೂ ಅಕ್ರಮ ಮರಳುಗಾರಿಕೆ ನಡೆದಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

2 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

4 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago