ದೈಹಿಕ ಶಿಕ್ಷಕ ಜಿ ಎಸ್ ಶಿವಕುಮಾರ್ ರವರಿಗೆ ಗ್ರಾಮಸ್ಥರಿಂದ ಗೌರವ ಸಮರ್ಪಣೆ :

ರಿಪ್ಪನ್ ಪೇಟೆ : ಮಂಡಗಟ್ಟ  ( ನಗರ ರೋಡ್) ಸರ್ಕಾರಿ ಪ್ರೌಢಶಾಲೆಯ ದೈಹಿಕ  ಶಿಕ್ಷಕರಾದ ಜಿ ಎಸ್. ಶಿವ ಕುಮಾರ್ ರವರು ಇಂದು ಸರ್ಕಾರಿ ಸೇವೆಯಿಂದ ನಿವೃತ್ತಿ ಯಾಗಿದ್ದು. ಇವರನ್ನು ರಿಪ್ಪನ್ ಪೇಟೆಯ ಗ್ರಾಮಸ್ಥರು ಮಂಡಘಟ್ಟ ಸರ್ಕಾರಿ ಪ್ರೌಢಶಾಲೆಯಲ್ಲಿ ಗೌರವಿಸಿ ಅಭಿನಂದಿಸಿದರು.
ಬೆಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ನಂತರ ಸುಮಾರು 28 ವರ್ಷಗಳ ಕಾಲ ಶಿವಮೊಗ್ಗ ಜಿಲ್ಲೆಯಜಿಲ್ಲೆಯ ವಿವಿಧೆಡೆಯಲ್ಲಿ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸಿ ಗ್ರಾಮೀಣ ಪ್ರದೇಶದ ಸಾವಿರಾರು ಮಕ್ಕಳನ್ನು ಜಿಲ್ಲಾಮಟ್ಟ ರಾಜ್ಯಮಟ್ಟ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಉತ್ತಮ ತರಬೇತಿ ನೀಡಿ ವಿದ್ಯಾರ್ಥಿಗಳಲ್ಲಿರುವ ಕ್ರೀಡಾ ಪ್ರತಿಭೆಯನ್ನು ಪ್ರದರ್ಶನ ಮಾಡುವುದರ ಜೊತೆಗೆ  ತಾವು ಕಾರ್ಯನಿರ್ವಹಿಸಿದ ಶಾಲೆಗಳಿಗೆ  ಗ್ರಾಮಕ್ಕೆ.  ಕೀರ್ತಿ ತರಲು  ಅನುವು ಮಾಡಿಕೊಟ್ಟ ಜಿ.ಎಸ್ ಶಿವಕುಮಾರ್ ಅವರನ್ನು ಸರಳ ಹೃದಯಸ್ಪರ್ಶಿ ಗೌರವ ಸಮರ್ಪಣೆ ಯೊಂದಿಗೆ ಅಭಿನಂದಿಸಿದರು.
ಜಿ.ಎಸ್. ಶಿವಕುಮಾರ್ ರವರು  ಉತ್ತಮ ಕ್ರೀಡಾಪಟುವಾಗಿ ದೈಹಿಕ ಶಿಕ್ಷಕರು ಆಗಿದ್ದರು. ಜಿಲ್ಲಾ.ರಾಜ್ಯ ಹಾಗೂ ರಾಷ್ಟ್ರ ಮಟ್ಟದ ವಿವಿಧ ಕ್ರೀಡಾಕೂಟಗಳಲ್ಲಿ ತೀರ್ಪುಗಾರರಾಗಿಯೂ ಸಹ ಕಾರ್ಯನಿರ್ವಹಿಸಿದ್ದರು. ಹಾಗೆಯೇ ಉತ್ತಮ ಗಾಯಕರಾದ ಇವರು ಜಾನಪದ ಗೀತೆ . ಕನ್ನಡ ಹಾಗೂ ಹಿಂದಿ ಚಲನ  ಚಿತ್ರಗೀತೆ ಗಳನ್ನು ಹಾಡುವುದರ ಮೂಲಕ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನವನ್ನು ಗಳಿಸುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಹಾಗೂ ಸಾರ್ವಜನಿಕರಲ್ಲಿ ಉತ್ತಮ ಗಾಯಕರೆಂದು ಮನ್ನಣೆ ಗಳಿಸಿದ್ದರು.
ಇಂದು ನಡೆದ ಗೌರವ ಸಮರ್ಪಣ ಕಾರ್ಯಕ್ರಮದಲ್ಲಿ ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಪಿ.ರಮೇಶ್. ಹಾಗೂ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಪ್ರತಿಷ್ಠಾಪನ ಸಮಿತಿಯ ಅಧ್ಯಕ್ಷ  ಎನ್.ಸತೀಶ್. ಜಿ.ಎಸ್. ವರದರಾಜ್. ವೈ. ಜೆ.ಕೃಷ್ಣ. ಆರ್. ಎಸ್ ನಾಗರಾಜ್  . ಜಿ ಎಸ್ ಶ್ರೀನಿವಾಸ್ ಇನ್ನಿತರರಿದ್ದರು
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

3 days ago