ಶುಕ್ರವಾರ ಸಂಜೆ ಸಾಗರದಿಂದನಾಪತ್ತೆಯಾಗಿದ್ದ ಸಾಗರದ ಪ್ರಖ್ಯಾತ ಟ್ರಾವೆಲ್ಸ್ ಕಂಪನಿ ಮಾಲೀಕರಾದ ಪ್ರಕಾಶ್ ರವರ ಕಾರು, ಮೊಬೈಲ್ ಮತ್ತು ಕನ್ನಡಕ ಹೊಸನಗರ ಸಮೀಪದ ಪಟಗುಪ್ಪೆ ಸೇತುವೆ ಮೇಲೆ ಪತ್ತೆಯಾಗಿರುವ ಹಿನ್ನಲೆಯಲ್ಲಿ ಪ್ರಕಾಶ್ ರವರ ಪತ್ತೆಗಾಗಿ ಅಗ್ನಿಶಾಮಕ ದಳ ತನ್ನ ಶೋಧಕಾರ್ಯವನ್ನು ಎರಡನೇ ದಿನಕ್ಕೆ ಮುಂದುವರೆಸಿದೆ.
ಸೊರಬದಿಂದ ಒಬಿಎಂ ಬೋಟ್ ನ್ನು ತರಿಸಲಾಗಿದ್ದು ನಾಲ್ವರು ಬೋಟ್ ನಲ್ಲಿ ಶೋಧಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳೀಯ ಮೀನುಗಾರರು ತೆಪ್ಪ ತಂದು ಅದರಲ್ಲಿ ಶೋಧಕಾರ್ಯದಲ್ಲಿ ತೊಡಗಿದ್ದಾರೆ.
ರಾಜ್ಯದಲ್ಲಿಯೇ ಅತೀ ಉದ್ದದ ಸೇತುವೆಯಾದ ಪಟಗುಪ್ಪ ಸೇತುವೆ ಇತ್ತೀಚೆಗಷ್ಟೇ ಉಧ್ಘಾಟನೆಯಾಗಿತ್ತು.
ಈ ಸೇತುವೆಯಿಂದ ಎಡಕ್ಕೆ ಮತ್ತು ಬಲ ಭಾಗಕ್ಕೆ ಸುಮಾರು 2 ರಿಂದ 3 ಕಿಮಿ ದೂರ ಈಗಾಗಲೆ ಶೋಧ ಕಾರ್ಯ ನಡೆದಿದೆ. ಆದರೆ ಯಾವುದೆ ರೀತಿಯಲ್ಲಿ ಪ್ರಕಾಶ್ ರವರ ಸುಳಿವು ಸಿಗುತ್ತಿಲ್ಲ. ಹೀಗಾಗಿ ಅಗ್ನಿಶಾಮಕ ದಳದವರಿಗೆ ಈ ಒಂದು ಪ್ರಕರಣ ಬಹಳಷ್ಟು ಕ್ಲಿಷ್ಟಕರವಾಗಿದೆ.
ಸ್ಥಳದಲ್ಲಿ ಈಗ ಪೊಲೀಸ್ ಸಿಬ್ಬಂದಿಗಳು ಹಾಗೂ ಅಗ್ನಿಶಾಮಕ ದಳದವರು ಬೀಡುಬಿಟ್ಟಿದ್ದು ಜಂಟಿ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದವರು ಶತಗತಾಯ ಪ್ರಯತ್ನ ನಡೆಸುತ್ತಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್