ರಿಪ್ಪನ್ ಪೇಟೆ : ಪ್ರಧಾನಿ ಮೋದಿ ಅವರಿಗೆ ಅವಮಾನ ಮಾಡಿರುವ ಮತ್ತು ಅವರ ಪ್ರಯಾಣಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿರುವ ಪಂಜಾಬ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ವಿನಾಯಕ ವೃತ್ತದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರ ಘಟಕದ ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು.
ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಮಾತನಾಡಿ ಪ್ರಧಾನಿ ಮೋದಿ ನಿನ್ನೆ ಪಂಜಾಬ್ ನಲ್ಲಿರುವ ಭಟಿಂಡಾದಿಂದ ಫಿರೋಜ್ ಪುರದ ಹುಸೇನ್ ವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಬೇಕಿತ್ತು. ಅಲ್ಲಿ ಅವರು ಭಗತ್ ಸಿಂಗ್ ಇತರ ಸ್ವಾತಂತ್ರ್ಯವೀರ ಹುತಾತ್ಮರಿಗೆ ಗೌರವ ಸಲ್ಲಿಸುವ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ಮಾಡುವ ಕಾರ್ಯಕ್ರಮವಿತ್ತು ಹವಾಮಾನ ವೈಫಲ್ಯದ ಹಿನ್ನಲೆಯಲ್ಲಿ ವಿಮಾನ ಪ್ರಯಾಣವನ್ನು ರದ್ದುಗೊಳಿಸಲಾಗಿತ್ತು.ರಸ್ತೆ ಮೂಲಕ ಪಂಜಾಬಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮನದ ವೇಳೆ ಭದ್ರತಾ ವೈಫಲ್ಯ ಆಗಿರೋದು ಅಕ್ಷಮ್ಯ ಅಪರಾಧ. ಪ್ರಧಾನಿ ಸ್ಥಾನಕ್ಕೆ ಗೌರವ ನೀಡಿಯಾದ್ರೂ ಸೂಕ್ತ ಭದ್ರತೆ ನೀಡಬೇಕಿತ್ತು. ಕಾಂಗ್ರೆಸ್ ಸರ್ಕಾರ ತನ್ನ ಸಣ್ಣತನದಿಂದ ತನ್ನ ಮರ್ಯಾದೆ ಹಾಳು ಮಾಡಿಕೊಂಡಿದೆ. ಕೂಡಲೇ ಪಂಜಾಬ್ ಮುಖ್ಯಮಂತ್ರಿ ಹಾಗೂ ಪಂಜಾಬ್ ಗೃಹ ಸಚಿವರು ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದರು.
ನಂತರ ಮಾತನಾಡಿದ ರಿಪ್ಪನ್ ಪೇಟೆ ಗ್ರಾಪಂ ಅಧ್ಯಕ್ಷರಾದ ಮಂಜುಳಾ ಕೇತಾರ್ಜಿರಾವ್ ಈ ಪ್ರತಿಭಟನೆ ದೇಶದ ಪ್ರಥಮ ಪ್ರಜೆಗೆ ಆದ ಅವಮಾನದ ವಿರುದ್ಧವಾಗಿದೆ ಪ್ರಪಂಚವೇ ಮೆಚ್ಚುವ ನಮ್ಮ ದೇಶದ ಪ್ರಧಾನಿಗೆ ಅಗೌರವ ತೋರುವ ಮೂಲಕ ಕಾಂಗ್ರೆಸ್ ಪಕ್ಷ ತನ್ನ ನೀಚ ಸಂಸ್ಕೃತಿಯನ್ನು ಪ್ರದರ್ಶಿಸಿದೆ ಎಂದರು.
ಈ ಸಂದರ್ಭದಲ್ಲಿ ಪ್ರಮುಖರಾದ ಎನ್ ಸತೀಶ್, ಸುರೇಶ್ ಸಿಂಗ್ ,ಸುಧೀಂದ್ರ ಪೂಜಾರಿ,ಜಿ ಡಿ ಮಲ್ಲಿಕಾರ್ಜುನ,ಮಹಾಲಕ್ಷ್ಮಿ ಅಣ್ಣಪ್ಪ, ಉಮಾ ಸುರೇಶ್, ರಿಯಾಜ್, ಜಂಬಳ್ಳಿ ಗಿರೀಶ್, ರಾಘವೇಂದ್ರ, ಹೂವಪ್ಪ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.