ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆ : ಯಡಿಯೂರಪ್ಪ ನಿವಾಸದಲ್ಲಿ ನೀರವ ಮೌನ


ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ವಸಂತನಗರದ ನಿವಾಸದಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಮೃತಪಟ್ಟಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ.

ಶುಕ್ರವಾರ ಬೆಳಗ್ಗೆ 8 ಗಂಟೆಗೆ ಪತಿ ನೀರಜ್ ಕೆಲಸಕ್ಕೆ ತೆರಳಿದ ನಂತರ ಸುಮಾರು 10 ಗಂಟೆ ವೇಳೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಗಳು ಪದ್ಮಾವತಿಯವರ ಪುತ್ರಿ ಆಗಿರುವ ಸೌಂದರ್ಯ ಬೆಂಗಳೂರು ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು.
2018ರಲ್ಲಿ ವೈದ್ಯ ನೀರಜ್ ಎಂಬುವವರನ್ನು ವಿವಾಹವಾಗಿದ್ದರು. ಸೌಂದರ್ಯಗೆ ಒಂದು ಮಗು ಕೂಡಾ ಇದೆ. ಬೌರಿಂಗ್ ಆಸ್ಪತ್ರೆಯಲ್ಲಿ ಸೌಂದರ್ಯ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಈವರೆಗೂ ಸಾವಿಗೆ ಕಾರಣವೇನು ಎಂಬುದು ಸ್ಪಷ್ಟವಾಗಿ ತಿಳಿದು ಬಂದಿಲ್ಲ.

ಶುಕ್ರವಾರ ಬೆಳಗ್ಗೆ ನಡೆದಿದ್ದು ಏನು?:

ಬೆಂಗಳೂರು ವಸಂತನಗರ ಸೌಂದರ್ಯ ಅಪಾರ್ಟ್ ಮೆಂಟ್ ರೂಮಿನಲ್ಲಿ ಸೌಂದರ್ಯ ಲಾಕ್ ಆಗಿದ್ದಾರೆ. ಬಾಗಿಲು ತೆರೆಯುತ್ತಾರೆ ಎಂದು ನಿರೀಕ್ಷಿಸಿದ ಮನೆ ಕೆಲಸದವರು ಬಹಳ ಹೊತ್ತಿನ ನಂತರ ಪತಿ ನೀರಜ್ ಅವರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ. ತದನಂತರ ಮನೆ ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ ಫ್ಯಾನಿಗೆ ನೇಣು ಬಿಗಿದುಕೊಂಡಿರುವುದು ಬೆಳಕಿಗೆ ಬಂದಿದೆ. ತಕ್ಷಣ ಅವರನ್ನು ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಗೆ ರವಾನಿಸಲಾಯಿತು. ವೆಂಟಿಲೇಟರ್ ಅಳವಡಿಸಿ ಜೀವ ಉಳಿಸಲು ಪ್ರಯತ್ನಿಸಲಾಯಿತಾದರೂ ಅದು ಸಾಧ್ಯವಾಗಲಿಲ್ಲ. ಚಿಕಿತ್ಸೆ ಫಲಿಸದೇ ಮೃತಪಟ್ಟ ಸೌಂದರ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಯಿತು.

ಬೌರಿಂಗ್ ಆಸ್ಪತ್ರೆಗೆ ಗೋವಿಂದ್ ಕಾರಜೋಳ:

ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಬಿ ಎಸ್ ಯಡಿಯೂರಪ್ಪ ಮೊಮ್ಮಗಳು ಸೌಂದರ್ಯ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಈ ವಿಷಯ ತಿಳಿಯುತ್ತಿದ್ದಂತೆ ಸಚಿವ ಗೋವಿಂದ ಕಾರಜೋಳ ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

6 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

7 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

7 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago