ಕೋವಿಡ್ -19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಹಲವು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರಿದೆ.ಇದೇ ಶುಕ್ರವಾರ ರಾತ್ರಿಯಿಂದಲೇ ವೀಕೆಂಡ್ ಕಫ್ಯೂ೯ ಜಾರಿಗೊಳಿಸಲಾಗಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೆ ರಾಜ್ಯದಲ್ಲಿ ಕಫ್ಯೂ೯ ಜಾರಿ ಇರಲಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಂಜೆ ನಡೆದ ಸಚಿವರು ಮತ್ತು ಅಧಿಕಾರಿಗಳ ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸುಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.
ಗುರುವಾರದಿಂದಲೇ ಬೆಂಗಳೂರಿನಲ್ಲಿ 10 ಮತ್ತು 12 ನೇ ತರಗತಿ ಹೊರತುಪಡಿಸಿ 2 ವಾರಗಳ ಕಾಲ 1 ರಿಂದ 9 ನೇ ತರಗತಿಗಳಲ್ಲಿ ಆನ್ ಲೈನ್ ತರಗತಿಗೆ ಸೂಚನೆ ನೀಡಲಾಗಿದೆ. ಸಭೆ, ಸಮಾರಂಭಗಳಿಗೆ 2 ವಾರ ಕಡಿವಾಣ .
ಹೊರರಾಜ್ಯದಿಂದ ಕನಾ೯ಟಕಕ್ಕೆ ಬರುವ ಪ್ರಯಾಣಿಕರಿಗೆ ಆರ್ ಟಿಪಿಸಿ ಆರ್ ಕಡ್ಡಾಯ ಮಾಡಲಾಗಿದೆ. ಮಸೀದಿ,ಮಂದಿರ,ಚರ್ಚ್ ಗಳಲ್ಲಿ 50ಕ್ಕಿಂತ ಹೆಚ್ಚಿನ ಜನರು ಪ್ರಾರ್ಥನೆ ಸಲ್ಲಿಸುವುದನ್ನು ನಿರ್ಬಂಧಿಸಲಾಗಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್