ರಿಪ್ಪನ್ ಪೇಟೆಯಲ್ಲಿ ‘ಗ್ರಾಮ ಒನ್‌’ ಕೇಂದ್ರಕ್ಕೆ ಚಾಲನೆ : ಒಂದೇ ಸೂರಿನಡಿ ಸಿಗಲಿದೆ 750 ಸರ್ಕಾರಿ ಸೇವೆಗಳು..!!

ಸರಕಾರಿ ಸೇವೆಗಳನ್ನು ಪಡೆಯಲು ಗ್ರಾಮೀಣ ಭಾಗದ ಜನರು ತಾಲೂಕು ಅಥವಾ ಜಿಲ್ಲಾ ಕೇಂದ್ರಗಳಿಗೆ ಹೋಗುವುದನ್ನು ತಪ್ಪಿಸಲು ಗ್ರಾಮಗಳ ಮಟ್ಟದಲ್ಲೇ ‘ಗ್ರಾಮ ಒನ್‌’ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು,ಇದರ ಅಂಗವಾಗಿ ರಿಪ್ಪನ್ ಪೇಟೆ ಶಿವಮೊಗ್ಗ ರಸ್ತೆಯಲ್ಲಿ ಸರ್ಕಾರಿ ಆಸ್ಪತ್ರೆಯ ಮುಂಭಾಗ ಗ್ರಾಮ ಒನ್ ಕೇಂದ್ರವನ್ನು ಗ್ರಾಪಂ ಅಧ್ಯಕ್ಷರಾದ ಮಂಜುಳಾ ಕೆ ರಾವ್ ಉದ್ಘಾಟಿಸಿದರು.



ಈ ಸಂಧರ್ಭದಲ್ಲಿ ಮಾತನಾಡಿದ ಅವರು ಗ್ರಾಮೀಣ ಭಾಗದ ಜನರು ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಿಗೆ ಅಲೆಯುವುದನ್ನು ತಪ್ಪಿಸಲು ಮುಂದಾಗಿರುವ ರಾಜ್ಯ ಸರಕಾರ ಗ್ರಾ.ಪಂ. ವ್ಯಾಪ್ತಿಯಲ್ಲಿ ಗ್ರಾಮ ಒನ್‌ ಕೇಂದ್ರಗಳನ್ನು ಸ್ಥಾಪಿಸಲು ಮುಂದಾಗಿದ್ದು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಹೇಳಿದರು.


ನಂತರ ಮಾತನಾಡಿದ ಉಪ ತಹಶೀಲ್ದಾರ್ ಹುಚ್ಚರಾಯಪ್ಪ ಈ ಕೇಂದ್ರವನ್ನು ಉಧ್ಘಾಟಿಸಲು ಶಾಸಕರು ಬರಬೇಕಿತ್ತು ಆದರೆ ಅನಿವಾರ್ಯ ಕಾರಣಗಳಿಂದ ಬರಲಾಗಲಿಲ್ಲ ಆವರ ಅನುಪಸ್ಥಿತಿಯಲ್ಲಿ ಗ್ರಾಪಂ ಅಧ್ಯಕ್ಷರಿಂದ ಈ ಕೇಂದ್ರ ಉಧ್ಘಾಟಿಸಲಾಯಿತು.ಸರಕಾರಿ ಸೇವೆಗಳನ್ನು ಪಡೆಯಲು ಗ್ರಾಮೀಣ ಭಾಗದ ಜನರು ತಾಲೂಕು ಅಥವಾ ಜಿಲ್ಲಾ ಕೇಂದ್ರಗಳಿಗೆ ಹೋಗಿಬರಬೇಕಾದ ಪರಿಸ್ಥಿತಿಯಿದೆ. ಆ ಹಿನ್ನೆಲೆಯಲ್ಲಿ ಜನರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಗ್ರಾಮ ಒನ್‌ ಕೇಂದ್ರ ತೆರೆಯುತ್ತಿದ್ದು, ನೂರಾರು ಸೇವೆಗಳು ಜನರಿಗೆ ಗ್ರಾಮಗಳಲ್ಲಿಯೇ ಲಭ್ಯವಾಗಲಿವೆ ಎಂದರು.


ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಹಾಲಕ್ಷ್ಮಿ ಪ್ರವೀಣ್ ಮಾತನಾಡಿ    ಸರಕಾರಿ ಸೇವೆಗಳನ್ನು ಪಡೆಯಲು ಸರಕಾರಿ ಕಚೇರಿಗಳಿಗೆ ಪ್ರಯಾಣಿಸುವ ಸಮಯ ಮತ್ತು ಹಣ ಖರ್ಚು ಮಾಡುವುದನ್ನು ಈ ಕೇಂದ್ರಗಳು ತಪ್ಪಿಸಲಿದ್ದು, ಸರತಿ ಸಾಲಿನಲ್ಲಿ ಸೇವೆಗಳಿಗಾಗಿ ಕಾಯುವುದನ್ನು ತಪ್ಪಿಸುತ್ತದೆ. ಇನ್ನು ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಸರಕಾರಿ ಸೇವೆಗಳು ನೇರವಾಗಿ ಜನರಿಗೆ ತಲುಪಿಸುವ ಉದ್ದೇಶವನ್ನು ಕೇಂದ್ರಗಳು ಹೊಂದಿವೆ. ಅದರಲ್ಲಿಯೂ ಪ್ರಮುಖವಾಗಿ ನಾಗರಿಕರ ಅನುಕೂಲಕ್ಕಾಗಿ ಗ್ರಾಮ ಒನ್‌ ಕೇಂದ್ರಗಳು ಬೆಳಗ್ಗೆ 8 ರಿಂದ ರಾತ್ರಿ 8ರವರೆಗೆ ತೆರೆದಿರುವುದರಿಂದ ಜನರು ಬಿಡುವಿನ ಸಮಯದಲ್ಲಿ ಕೇಂದ್ರಗಳಿಗೆ ಹೋಗಿ ತಮಗೆ ಬೇಕಾದ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಗ್ರಾಮ ಒನ್‌ ಕೇಂದ್ರಗಳು ಜನರಿಗೆ ನೂರಾರು ಸರಕಾರಿ ಸೇವೆಗಳನ್ನು ಒದಗಿಸಿದೆ ಎಂದರು.


ಈ ಸಂಧರ್ಭದಲ್ಲಿ ಗ್ರಾಪಂ ಸದಸ್ಯರಾದ ಆಸೀಫ಼್ ಭಾಷಾಸಾಬ್,ಪಿ ರಮೇಶ್,ವನಮಾಲ, ಗ್ರಾಪಂ ಮಾಜಿ ಉಪಾಧ್ಯಕ್ಷರಾದ ಆರ್ ರಾಘವೇಂದ್ರ, ಮುಖಂಡರಾದ ಟಿ ಆರ್ ಕೃಷ್ಣಪ್ಪ,ಅಮೀರ್ ಹಂಜಾ, ಕಂದಾಯ ಇಲಾಖೆಯ ಇನಾಯತ್ ಖಾನ್, ರೇಣುಕಯ್ಯ,ಜಾಕೀರ್ ಹುಸೇನ್,ಗ್ರಾಪಂ ಸಿಬ್ಬಂಧಿಗಳಾದ ನಾಗೇಶ್,ರಾಜೇಶ್ ಹಾಗೂ ಗ್ರಾಮ ಒನ್ ಕೇಂದ್ರ ನಿರ್ವಾಹಕ ಸನತ್ ಶೆಟ್ಟಿ ಹಾಗೂ ಇನ್ನಿತರರಿದ್ದರು.


ಗ್ರಾಮ ಒನ್‌ನಲ್ಲಿ ಸಿಗುವ ಸೌಲಭ್ಯ

  • ಸೇವಾ ಸಿಂಧುವಿನಲ್ಲಿ ಬರುವ ಎಲ್ಲ750 ಸೇವೆಗಳು
  • ಸಕಾಲ ಸೇವೆಗಳು
  • ಮಾಹಿತಿ ಹಕ್ಕು ಸೇವೆಗಳು
  • ಮುಖ್ಯಮಂತ್ರಿಗಳ ಪರಿಹಾರ ನಿಧಿ
  • ಸಣ್ಣ ಬ್ಯಾಂಕಿಂಗ್‌ ಸೇವೆಗಳು

ಗ್ರಾಮ ಒನ್‌ ಅನುಕೂಲಗಳೇನು?

  • ಜನರ ಸಮಯ ಹಾಗೂ ಹಣ ಉಳಿಸುತ್ತದೆ
  • ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸುತ್ತದೆ
  • ಮಧ್ಯವರ್ತಿಗಳ ಹಾವಳಿ ಇರುವುದಿಲ್ಲ
  • ಬೆಳಗ್ಗೆ 8 ರಿಂದ ರಾತ್ರಿ 8ರವರೆಗೆ ಸೇವೆ ನೀಡುತ್ತವೆ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

4 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

4 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

5 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago