ರಿಪ್ಪನ್ ಪೇಟೆ : ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ 73ನೇ ಗಣರಾಜ್ಯೋತ್ಸವನ್ನು ಸಂಭ್ರಮ ಹಾಗೂ ಸಡಗರದಿಂದ ಸರಳವಾಗಿ ಆಚರಿಸಲಾಯಿತು.
ಕೋವಿಡ್ 19 ರ ಹಿನ್ನೆಲೆಯಲ್ಲಿ ಸರಕಾರದ ಆದೇಶದ ಮೇರೆಗೆ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿ ರಾವ್. ನಾಡಕಚೇರಿಯಲ್ಲಿ ಉಪತಹಸೀಲ್ದಾರ್ ಟಿ. ಹುಚ್ಚರಾಯಪ್ಪ. ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಿವಾನಂದ ಕೋಳಿ. ಸರ್ಕಾರಿ ಆಸ್ಪತ್ರೆಯಲ್ಲಿ ಡಾಕ್ಟರ್ ಅನಿಲ್ ಕುಮಾರ್. ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಕಾಲೇಜಿನ ಪ್ರಾಚಾರ್ಯ ಚಂದ್ರಶೇಖರ್. ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಾಚಾರ್ಯ ಮಂಜುನಾಥ್. ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಾಚಾರ್ಯ ಮಹಮ್ಮದ್ ನಜಾಹತ್ ಉಲ್ಲಾ. ಧ್ವಜಾರೋಹಣ ನೆರವೇರಿಸಿದರು.
ರಿಪ್ಪನ್ ಪೇಟೆಯ ಪ್ರಮುಖ ಶಾಲೆಗಳಾದ ಸರ್ಕಾರಿ ಪ್ರೌಢಶಾಲೆ ರಿಪ್ಪನಪೇಟೆ.ಶ್ರೀ ರಾಮಕೃಷ್ಣ ಪ್ರೌಢಶಾಲೆ. ಮೇರಿ ಮಾತಾ ಪ್ರೌಢಶಾಲೆ ಮತ್ತು ಕಾಲೇಜು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ. ಬಸವೇಶ್ವರ ಕಾನ್ವೆಂಟ್. ಗುಡ್ ಶೆಪರ್ಡ್ ಶಾಲೆ. ಬರುವ ಗ್ರಾಮದ ಸರಕಾರಿ ಶಾಲೆ ಸೇರಿದಂತೆ ವಿವಿಧಡೆ 73ನೇ ಗಣರಾಜ್ಯೋತ್ಸವವನ್ನು ಕೋವಿಡ್ 19 ರ ಹಿನ್ನೆಲೆಯಲ್ಲಿ ಸರಕಾರದ ಆದೇಶದ ಮೇರೆಗೆ ಸರಳವಾಗಿ ಆಚರಿಸಲಾಯಿತು.
ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಚುನಾಯಿತ ಪ್ರತಿನಿಧಿಗಳು. ಪಟ್ಟಣದ ನಾಗರಿಕರು ಪೋಷಕರು ಶಾಲಾ ಕಾಲೇಜುಗಳ ಉಪನ್ಯಾಸಕರು ಮತ್ತು ಶಿಕ್ಷಕರು ವೃಂದ ವಿವಿಧ ಇಲಾಖೆಯ ಅಧಿಕಾರಿಗಳು. ಪತ್ರಕರ್ತರು ಭಾಗಿಯಾಗಿದ್ದರು