ರಿಪ್ಪನ್ ಪೇಟೆಯಲ್ಲಿ 73 ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಣೆ

ರಿಪ್ಪನ್ ಪೇಟೆ : ಪಟ್ಟಣ ಸೇರಿದಂತೆ  ಸುತ್ತಮುತ್ತಲಿನ  ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ 73ನೇ ಗಣರಾಜ್ಯೋತ್ಸವನ್ನು ಸಂಭ್ರಮ ಹಾಗೂ ಸಡಗರದಿಂದ ಸರಳವಾಗಿ ಆಚರಿಸಲಾಯಿತು.

ಕೋವಿಡ್ 19 ರ ಹಿನ್ನೆಲೆಯಲ್ಲಿ ಸರಕಾರದ ಆದೇಶದ ಮೇರೆಗೆ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.  ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿ ರಾವ್. ನಾಡಕಚೇರಿಯಲ್ಲಿ ಉಪತಹಸೀಲ್ದಾರ್ ಟಿ. ಹುಚ್ಚರಾಯಪ್ಪ. ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಿವಾನಂದ ಕೋಳಿ. ಸರ್ಕಾರಿ ಆಸ್ಪತ್ರೆಯಲ್ಲಿ ಡಾಕ್ಟರ್ ಅನಿಲ್ ಕುಮಾರ್. ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಕಾಲೇಜಿನ ಪ್ರಾಚಾರ್ಯ ಚಂದ್ರಶೇಖರ್. ಸರ್ಕಾರಿ  ಪದವಿಪೂರ್ವ ಕಾಲೇಜಿನಲ್ಲಿ ಪ್ರಾಚಾರ್ಯ ಮಂಜುನಾಥ್. ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಾಚಾರ್ಯ ಮಹಮ್ಮದ್ ನಜಾಹತ್ ಉಲ್ಲಾ. ಧ್ವಜಾರೋಹಣ ನೆರವೇರಿಸಿದರು.


ರಿಪ್ಪನ್ ಪೇಟೆಯ ಪ್ರಮುಖ ಶಾಲೆಗಳಾದ ಸರ್ಕಾರಿ ಪ್ರೌಢಶಾಲೆ ರಿಪ್ಪನಪೇಟೆ.ಶ್ರೀ ರಾಮಕೃಷ್ಣ ಪ್ರೌಢಶಾಲೆ. ಮೇರಿ ಮಾತಾ ಪ್ರೌಢಶಾಲೆ ಮತ್ತು ಕಾಲೇಜು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ. ಬಸವೇಶ್ವರ ಕಾನ್ವೆಂಟ್. ಗುಡ್ ಶೆಪರ್ಡ್ ಶಾಲೆ. ಬರುವ ಗ್ರಾಮದ ಸರಕಾರಿ ಶಾಲೆ  ಸೇರಿದಂತೆ ವಿವಿಧಡೆ 73ನೇ ಗಣರಾಜ್ಯೋತ್ಸವವನ್ನು ಕೋವಿಡ್ 19 ರ ಹಿನ್ನೆಲೆಯಲ್ಲಿ ಸರಕಾರದ ಆದೇಶದ ಮೇರೆಗೆ ಸರಳವಾಗಿ ಆಚರಿಸಲಾಯಿತು.


ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಚುನಾಯಿತ ಪ್ರತಿನಿಧಿಗಳು. ಪಟ್ಟಣದ ನಾಗರಿಕರು ಪೋಷಕರು ಶಾಲಾ ಕಾಲೇಜುಗಳ ಉಪನ್ಯಾಸಕರು ಮತ್ತು ಶಿಕ್ಷಕರು ವೃಂದ ವಿವಿಧ ಇಲಾಖೆಯ ಅಧಿಕಾರಿಗಳು. ಪತ್ರಕರ್ತರು ಭಾಗಿಯಾಗಿದ್ದರು
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

2 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

4 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago