ರಿಪ್ಪನ್ ಪೇಟೆ: ಜಗತ್ತನ್ನೇ ತಲ್ಲಣಗೊಳಿಸಿದ ಕೊರೊನಾ ಸೋಂಕು ನಿವಾರಣೆಯಾಗಿ ದೇಶದ ಜನತೆ ಉತ್ತಮ ಆರೋಗ್ಯವನ್ನು ಹೊಂದಲಿ ಎಂದು ಪಟ್ಟಣದ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗರ ಸಂಘದ ವತಿಯಿಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು ಸರಳವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗ ಸಂಘದ ಅಧ್ಯಕ್ಷ ಅಧ್ಯಕ್ಷೆ ವಾಣಿ ಗೋವಿಂದಪ್ಪ ಗೌಡ ಮಾಧ್ಯಮದವರೊಂದಿಗೆ ಮಾತನಾಡಿ ಕೋವಿಡ್ 19 ರ ಕಾರಣದಿಂದ ದೇಶದಲ್ಲಿ ಕೋಟ್ಯಂತರ ಜನರು ಸೋಂಕಿನಿಂದ ಬಳಲುವಂತಾ ಯಿತು. ಹಾಗೆಯೇ ಲಕ್ಷಾಂತರ ಜನರು ಮರಣವನ್ನು ಹೊಂದಿದರು. ಕೊರೊನಾ ಸೋಂಕು ದೇಶದಲ್ಲಿ ಒಂದನೆಯ ಎರಡನೆಯ ಹಾಗೂ ಮೂರನೆಯ ಅಲೆಯ ರೀತಿಯಲ್ಲಿ ಬಂದು ಇಡೀ ಪ್ರಪಂಚದ ಹಾಗೂ ದೇಶದ ಜನತೆ ಸಂಕಷ್ಟದಲ್ಲಿ ಬಳಲುವಂತಾಯಿತು. ದೇಶದಲ್ಲಿ ಉಂಟಾದ ಸಂಕಷ್ಟವು ಪರಿಹಾರವಾಗಿ ಎಲ್ಲ ಜನರು ಉತ್ತಮ ಆರೋಗ್ಯವನ್ನು ಹೊಂದಲಿ ಎಂಬ ಸದುದ್ದೇಶದಿಂದ ಈ ಸತ್ಯನಾರಾಯಣ ಪೂಜೆಯನ್ನು ಆಯೋಜಿಸಲಾಗಿತ್ತು ಎಂದ ಅವರು ಮುಂದಿನ ದಿನಗಳಲ್ಲಿ ದೇಶದಲ್ಲಿ ಯಾವುದೇ ರೀತಿಯ ಮಹಾಮಾರಿ ರೋಗ ಮತ್ತು ಸೋಂಕು ಹರಡದೆ ದೇಶದ ಹಾಗೂ ನಾಡಿನ ಎಲ್ಲ ಜನರ ಆರೋಗ್ಯವನ್ನು ಶ್ರೀ ಸತ್ಯನಾರಾಯಣ ಕಾಪಾಡಲಿ ಎಂದು ಹೇಳಿದರು.
ಆರ್ಚಕ ರವಿ ಭಟ್ಟರವರ ನೇತೃತ್ವದಲ್ಲಿ ನಡೆದ ಸತ್ಯನಾರಾಯಣ ಪೂಜೆಯಲ್ಲಿ. ಶ್ರೀ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗರ ಸಂಘದ ಕಾರ್ಯದರ್ಶಿ ವೀಣಾ ಗುರುಮೂರ್ತಿ ಪದಾಧಿಕಾರಿಗಳಾದ ಪ್ರಮೀಳಾ ಎಲ್ ಗೌಡ. ಸುಮಂಗಲಾ ಹರೀಶ್. ರೂಪ ಶಂಕ್ರಪ್ಪ. ಕೋಮಲ ಕೇಶವ. ಪ್ರವೀಣಿ ಮಂಜುನಾಥ್. ಜಯಂತಿ ಅಶೋಕ್. ಶ್ಯಾಮಲಾ. ಮಮತಾ ಇನ್ನಿತರರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್