ರಿಪ್ಪನ್ ಪೇಟೆ : ಐಟಿಐ ಕಾಲೇಜಿನ ನೂತನ ಕಟ್ಟಡ ಉದ್ಘಾಟಿಸುವಂತೆ ಬಿ ಪಿ ರಾಮಚಂದ್ರ ಆಗ್ರಹ

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಕೆದಲುಗುಡ್ಡ ಗ್ರಾಮದಲ್ಲಿ ನೂತನ ಸರಕಾರಿ ಐಟಿಐ ಕಾಲೇಜು ಕಟ್ಟಡ ಸಂಪೂರ್ಣವಾಗಿ ನಿರ್ಮಾಣವಾಗಿದ್ದು, ಉದ್ಘಾಟನೆ ಭಾಗ್ಯ ಕಾಣದೆ ಐಟಿಐ ವಿದ್ಯಾರ್ಥಿಗಳು ಪರಿತಪಿಸುತಿದ್ದಾರೆ, ಆದಷ್ಟು ಬೇಗ ನೂತನ ಕಟ್ಟಡ ಉದ್ಘಾಟನೆ ಮಾಡಿ ಐಟಿಐ ವಿದ್ಯಾರ್ಥಿಗಳಿಗೆ ಅನುಕೂಲಕರ ಮಾಡಿಕೊಡುವಂತೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬಿ ಪಿ ರಾಮಚಂದ್ರ ಆಗ್ರಹಿಸಿದ್ದಾರೆ.

ಇಂದು ಕೆದಲುಗುಡ್ಡೆ ಗ್ರಾಮದಲ್ಲಿ ನಿರ್ಮಾಣವಾಗಿರುವ ನೂತನ ಐಟಿಐ ಕಾಲೇಜಿನ ಕಟ್ಟಡವನ್ನು ವೀಕ್ಷಿಸಿ ನಂತರ ಮಾತನಾಡಿದ ಅವರು ಕಾಗೋಡು ತಿಮ್ಮಪ್ಪ ರವರ ಅವಧಿಯಲ್ಲಿ  ಸುಮಾರು 2 ಕೋಟಿ ರೂ ವೆಚ್ಚದಲ್ಲಿ ಪ್ರಾರಂಭಗೊಂಡಿದ್ದ ಸರ್ಕಾರಿ ಐಟಿಐ ಕಾಲೇಜ್ ಕಟ್ಟಡ ಈಗ ಸಂಪೂರ್ಣವಾಗಿ ನಿರ್ಮಾಣಗೊಂಡಿದ್ದರೂ ಸಹ ಉದ್ಘಾಟನೆ ಭಾಗ್ಯ ಕಾಣದೆ ಕೋಟ್ಯಾಂತರ ರೂಪಾಯಿ ವೆಚ್ಚದ ಉಪಕರಣಗಳು ದೊಡ್ಡಿನಕೊಪ್ಪದಲ್ಲಿ ಇರುವ ಹಳೆಯ ಬಿಲ್ಡಿಂಗ್ ನಲ್ಲಿ ತುಕ್ಕು ಹಿಡಿಯುತ್ತಿದೆ.ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಅನುಕೂಲಕರವಾಗಬೇಕಾಗಿದ್ದ ಈ ಸರ್ಕಾರಿ ಐಟಿಐ ಕಾಲೇಜು ವಿದ್ಯಾರ್ಥಿಗಳ ಬಳಕೆಗೆ ಇಲ್ಲದೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಆದಷ್ಟು ಬೇಗ ನೂತನ ಕಟ್ಟಡ ಉದ್ಘಾಟನೆ ಮಾಡಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು.

ಸರ್ಕಾರಿ ಸವಲತ್ತುಗಳು ಸದ್ಬಳಕೆ ಆಗಬೇಕು.ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾದ ವಾತಾವರಣವನ್ನು ಜನಪ್ರತಿನಿಧಿಗಳು ನಿರ್ಮಿಸಿಕೊಡಬೇಕು.ಐಟಿಐ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಶಿಕ್ಷಣ ಅತಿಮುಖ್ಯ ಅದು ಈ ಹೊಸ ಕಟ್ಟಡದಲ್ಲಿ ಲಭ್ಯವಿದೆ. ಜನಪ್ರತಿನಿಧಿಗಳು ಕೂಡಲೇ ಇತ್ತ ಗಮನಹರಿಸಿ ನೂತನ ಕಟ್ಟಡ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದರು.


ಈ ಸಂಧರ್ಭದಲ್ಲಿ ಕಾಂಗ್ರೆಸ್ ರಿಪ್ಪನ್ ಪೇಟೆ ಘಟಕದ ಅಧ್ಯಕ್ಷರಾದ ಆಸೀಫ಼್ ಭಾಷಾಸಾಬ್, ಗ್ರಾಪಂ ಸದಸ್ಯರಾದ ಚಂದ್ರೇಶ್ ಎನ್ ,ಕಾಂಗ್ರೆಸ್ ಜಿಲ್ಲಾ ಮುಖಂಡರಾದ ಅಮೀರ್ ಹಂಜಾ ಹಾಗೂ ಇನ್ನಿತರರ ಮುಖಂಡರು ಉಪಸ್ಥಿತರಿದ್ದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

39 minutes ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

5 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

7 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

7 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

17 hours ago

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

1 day ago