ರಿಪ್ಪನ್ ಪೇಟೆ : ಮಹಿಳೆಯರು ಮತ್ತು ಯುವತಿಯರು ಬದುಕು ಕಟ್ಟಿಕೊಳ್ಳಲು ಮತ್ತು ಸಾವಲಂಬಿಯಾಗಿ ಸಮಾಜದಲ್ಲಿ ಜೀವನ ನಡೆಸಲು ವೃತ್ತಿ ಕೌಶಲ್ಯದ ಸ್ವಯಂ ಉದ್ಯೋಗದ ತರಬೇತಿ ಪಡೆದುಕೊಳ್ಳುವುದು ಅವಶ್ಯಕ ಎಂದು ಲೀಲಾ ಶಂಕರ್ ಹೇಳಿದರು.
ಪಟ್ಟಣದ ತೀರ್ಥಳ್ಳಿ ರಸ್ತೆಯ ಭವನದಲ್ಲಿ ಜನ ಶಿಕ್ಷಣ ಸಂಸ್ಥೆಯಿಂದ ಪ್ರಾರಂಭಿಸಲಾಗಿರುವ ಟೈಲರಿಂಗ್. ಬ್ಯೂಟಿಷಿಯನ್ ಸೇರಿದಂತೆ ವಿವಿಧ ವೃತ್ತಿ ಕೌಶಲ್ಯ ತರಬೇತಿ ಶಿಬಿರದಲ್ಲಿ ಅಜಾದ್ ಕಿ ಅಮೃತಮಹೋತ್ಸವ ಅಂಗವಾಗಿ ಮಹಿಳೆಯರಿಗೆ ಮತ್ತು ಯುವತಿಯರಿಗಾಗಿ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನವನ್ನು ಪಡೆದವರಿಗೆ ಪ್ರಶಸ್ತಿ ಪತ್ರವನ್ನು ವಿತರಿಸಿ ಮಾತನಾಡಿದ ಅವರು ಗ್ರಾಮೀಣ ಪ್ರದೇಶದ ಮಹಿಳೆಯರು ಮತ್ತು ಯುವತಿಯರು ತಮ್ಮ ಬಿಡುವಿನ ವೇಳೆಯಲ್ಲಿ ವಿವಿಧ ವೃತ್ತಿ ಕೌಶಲ್ಯ ತರಬೇತಿಯನ್ನು ಪಡೆಯುವುದರ ಮೂಲಕ ಸಾವಲಂಬಿಯಾಗಿ ಬದುಕುವುದರ ಜೊತೆಗೆ ಆರ್ಥಿಕ ಅಭಿವೃದ್ಧಿ ಹೊಂದಿ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಹೇಳಿದರು.
ಜನ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಪ್ರೊ. ಎಸ್. ಬಿ. ಕಮಲಾಕರ್ ಹಾಗೂ ಉದ್ದೇಶ ಕರಾದ ಎಸ್ ವೈ ಅರುಣ ದೇವಿಯವರ ಮಾರ್ಗದರ್ಶನ ಮತ್ತು ಸಹಕಾರದಿಂದ ರಿಪ್ಪನ್ ಪೇಟೆ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ 75ಕ್ಕೂ ಅಧಿಕ ಯುವತಿಯರು ಮತ್ತು ಮಹಿಳೆಯರು ವಿವಿಧ ವೃತ್ತಿ ಕೌಶಲ್ಯ ತರಬೇತಿಯನ್ನು ಪಡೆದುಕೊಂಡಿದ್ದಾರೆ. ವೃತ್ತಿಕೌಶಲ್ಯ ತರಬೇತಿಯು ಮೂರು ತಿಂಗಳ ಶಿಬಿರ ವಾಗಿದ್ದು. ಮಹಿಳೆಯರು ಮತ್ತು ಯುವತಿಯರು ತಮ್ಮ ಬಿಡುವಿನ ವೇಳೆಯಲ್ಲಿ ತರಬೇತಿಯನ್ನು ಪಡೆಯಲು ಅನುಕೂಲವಾಗುವಂತೆ ಸಮಯವನ್ನು ಸಹ ನಿಗದಿಪಡಿಸಲಾಗಿದೆ.
ಮುಂದಿನ ದಿನಗಳಲ್ಲಿ ರಿಪ್ಪನ್ ಪೇಟೆ ಪಟ್ಟಣದಲ್ಲಿ ವೃತ್ತಿ ಕೌಶಲ್ಯ ಪಡೆದ ಮಹಿಳೆಯರಿಗೆ ಮತ್ತು ಯುವತಿಯರಿಗೆ ಉದ್ಯೋಗ ಅವಕಾಶಕ್ಕಾಗಿ ಗಾರ್ಮೆಂಟ್ಸ್ ತೆ ರೆಯುವುದರ ಮೂಲಕ ಸಹಕಾರ ನೀಡಬೇಕೆಂದು ಶಾಸಕರಾದ ಹರತಾಳು ಹಾಲಪ್ಪ. ಗೃಹ ಮಂತ್ರಿಗಳಾದ ಆರಗ ಜ್ಞಾನೇಂದ್ರ ಮತ್ತು ಲೋಕಸಭಾ ಸದಸ್ಯರಾದ ಎಸ್ ವೈ ರಾಘವೇಂದ್ರ ರವರಿಗೆ ಶೀಘ್ರದಲ್ಲೇ ಮನವಿ ಸಲ್ಲಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ. ಗೀತಾ.ಶ್ವೇತಾ ಅಂಬಿಕಾ. ಅಮಿತಾ .ಇನ್ನಿತರರು ಇದ್ದರು
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್