ರಿಪ್ಪನ್ ಪೇಟೆ ಯಲ್ಲಿ ರೋಟರಿ ಭವನ ಉದ್ಘಾಟನೆ :

ರಿಪ್ಪನ್ ಪೇಟೆ : ರೋಟರಿ ಸಂಸ್ಥೆ ಅಂತರರಾಷ್ಟ್ರೀಯ ಸಂಸ್ಥೆಯಾಗಿದ್ದು ರೋಟರಿಯ ಮೂಲ ಉದ್ದೇಶ ಸಮಾಜ ಸೇವೆಯಾಗಿದೆ. ಆರೋಗ್ಯ ಶಿಕ್ಷಣ ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ  ರೋಟರಿ ಸಂಸ್ಥೆಯು ಮುಂಚೂಣಿಯಲ್ಲಿದೆ ಎಂದು ರೋಟರಿ 31 82ರ ಜಿಲ್ಲಾ ಗವರ್ನರ್ ಎಂ ಜಿ ರಾಮಚಂದ್ರಮೂರ್ತಿ ಹೇಳಿದರು.

ರಿಪ್ಪನ್ ಪೇಟೆ ಯಲ್ಲಿ ನೂತನವಾಗಿ ನಿರ್ಮಾಣವಾದ ರೋಟರಿ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು  ಸಮಾಜಸೇವೆಯ ಮೂಲಕ ಪ್ರತಿಯೊಬ್ಬರೂ ನೆಮ್ಮದಿಯ ಬದುಕನ್ನು ಕಂಡುಕೊಳ್ಳಬಹುದು ಎಂಬುದಕ್ಕೆ ರೋಟರಿ ಸಂಸ್ಥೆಯ ಕಾರ್ಯವೈಖರಿಗಳು ಉತ್ತಮ ಉದಾಹರಣೆಗಳಾಗಿವೆ. ಮಾನವ ಜಗತ್ತಿನಿಂದ ಪೋಲಿಯೋ ನಿರ್ಮೂಲನೆ ಮಾಡುವ ಸದುದ್ದೇಶದಿಂದ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಆರ್ಥಿಕ ನೆರವು ನೀಡುವುದರ ಮೂಲಕ  ಇಂದು ಇಡೀ ಜಗತ್ತಿನಲ್ಲಿ ಪೋಲಿಯೋ ನಿಯಂತ್ರಣದೊಂದಿಗೆ ನಿರ್ಮೂಲನಕ್ಕೆ ಕಾರಣ ಭೂತವಾಗಿದೆ. ಸಮಾಜ ಸೇವೆಯನ್ನು ಮಾಡುವ ಸದುದ್ದೇಶವನ್ನು ಹೊಂದಿರುವ ಪ್ರತಿಯೊಬ್ಬ ನಾಗರಿಕನಿಗೆ ರೋಟರಿಯ ಮೂಲಕ ಸೇವೆಯನ್ನು ಸಲ್ಲಿಸಲು ಅತ್ಯುತ್ತಮ ಅವಕಾಶ  ದೊರೆಯಲಿದ್ದು ಅದರ ಸದುಪಯೋಗ ಪಡೆದುಕೊಳ್ಳುವುದರ ಮೂಲಕ ರೋಟರಿ ಸಂಸ್ಥೆಯೊಂದಿಗೆ ಕೈಜೋಡಿಸಿ ದಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದರು.


ರೋಟರಿ 31 82ರ ಜಿಲ್ಲಾ ಸಹಾಯಕ ಗೌರ್ನರ್ ಎಲ್. ಟಿ.ತಿಮ್ಮಪ್ಪ ಹೆಗಡೆ ಮಾತನಾಡಿ ರಿಪ್ಪನ್ ಪೇಟೆ ರೋಟರಿ ಸಂಸ್ಥೆ ಅನೇಕ ಸಮಾಜಮುಖಿ ಕಾರ್ಯಕ್ರಮಗಳಾದ ಆರೋಗ್ಯ.ಶಿಕ್ಷಣದ  ಜೊತೆಗೆ  ರೈತರಿಗೆ ಅನುಕೂಲವಾಗುವಂತಹ ರೈತರ ಮಿತ್ರದಂತಹ ಅನೇಕ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ  ಜನಮಾನಸದಲ್ಲಿ ರೋಟರಿ ಸಂಸ್ಥೆ ಅತ್ಯುತ್ತಮ ಸಮಾಜಸೇವೆ ಸಂಸ್ಥೆ ಎಂದು ಮನ್ನಣೆ ಗಳಿಸಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಿಪ್ಪನ್ ಪೇಟೆ ರೋಟರಿ ಕ್ಲಬ್ಬಿನ ಅಧ್ಯಕ್ಷ ನಾಗಭೂಷಣ ವಹಿಸಿದ್ದರು.ರೋಟರಿ ಜಿಲ್ಲೆ 31 82 ವಲಯ 11 ರ ಜೋನಲ್ ಲೆಫ್ಟಿನೆಂಟ್ ಗಣೇಶ್ ಎನ್.ಕಾಮತ್. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಕೆತಾರ್ಜಿರಾವ್ ಉಪಾಧ್ಯಕ್ಷೆ ಮಹಾ ಲಕ್ಷ್ಮಿ ಪ್ರವೀಣ್ ಕಾರ್ಯದರ್ಶಿ ಡಾಕಪ್ಪ ಇನ್ನಿತರರಿದ್ದರು.

ರೋಟರಿ ಸಂಸ್ಥೆಯ ಅಧ್ಯಕ್ಷ ನಾಗಭೂಷಣ  ಆರ್ ಸ್ವಾಗತಿಸಿ. ಸಬಾಸ್ಟಿನ್ ಮ್ಯಾಥ್ಯೂಸ್   ನಿರೂಪಿಸಿ. ರಾಧಾಕೃಷ್ಣ. ಜೆ.ವಂದಿಸಿದರು.

ಕಾರ್ಯಕ್ರಮದಲ್ಲಿ ರೋಟರಿ ಭವನದ ನಿರ್ಮಾಣಕ್ಕೆ ಸಹಕಾರ ನೀಡಿದ ಹುಗಡಿ ವರ್ತೆಶ್ ದಂಪತಿಗಳು. ಗಣೇಶ್ ಕಾಮತ್ ದಂಪತಿಗಳು. ಎಂಬಿ ಮಂಜುನಾಥ್ ದಂಪತಿಗಳು  ಸೇರಿದಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರುಗಳು. ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರು  ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ರೋಟರಿ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

3 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

3 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

4 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago