ರಿಪ್ಪನ್ ಪೇಟೆ : ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರರಾಗಿದ್ದ ದಿವಂಗತ ಅಹಮ್ಮದ್ ಬ್ಯಾರಿಯವರ ತೃತೀಯ ಪುತ್ರ ಶಫಿ ಅಹಮದ್ ಬ್ಯಾರಿ (48) ಇಂದು ಮಧ್ಯಾಹ್ನ ಚೆನ್ನೈ ನಗರದಲ್ಲಿ ನಿಧನ ಹೊಂದಿದ್ದಾರೆ.
ಅಲ್ಪಕಾಲದ ಖಾಯಿಲೆಯಿಂದ ಬಳಲುತಿದ್ದ ಶಫ಼ಿ ಅಹಮದ್ ಬ್ಯಾರಿ ರವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ನಂತರ ಇತ್ತಿಚೆಗೆ ಹೆಚ್ಚಿನ ಚಿಕಿತ್ಸೆಗೆ ಚೆನೈ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ಕೊನೆಯುಸಿರೆಳೆದರು.
ಚೆನ್ನೈ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಅಂಬುಲೆನ್ಸ್ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸರಳ ಸಜ್ಜನಿಕೆಯ ಮೂಲಕ ರಿಪ್ಪನಪೇಟೆ ಪಟ್ಟಣದ ನಾಗರಿಕರೊಂದಿಗೆ ಸ್ನೇಹ ಹೊಂದ್ದಿದ್ದ ಶಫಿ ಅಹಮದ್ ಬ್ಯಾರಿ ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ.
ಅವರ ಮೃತದೇಹವು ಇಂದು ರಾತ್ರಿ ರಿಪ್ಪನ್ ಪೇಟೆ ಗೆ ಆಗಮಿಸಲಿದ್ದು ನಾಳೆ ಬೆಳಿಗ್ಗೆ ಮೃತರ ಅಂತ್ಯಕ್ರಿಯೆ ಸಾಗರ ರಸ್ತೆಯ ಖಬರ್ ಸ್ಥಾನ್ ನಲ್ಲಿ ನಡೆಯಲಿದೆ ಎಂದು ಕುಟುಂಬದ ವರ್ಗದವರು ಮಾಹಿತಿ ನೀಡಿದ್ದಾರೆ.
ಸಂತಾಪ:
ಶಫಿ ಅಹಮದ್ ಬ್ಯಾರಿ ಅವರ ನಿಧನಕ್ಕೆ ಮುಖಂಡರಾದ ಆರ್ ಎ ಚಾಬುಸಾಬ್,ಬಿಜೆಪಿ ಮುಖಂಡರಾದ ಎಂ ಬಿ ಮಂಜುನಾಥ್,ಸತೀಶ್ ಎನ್ ,ಗ್ರಾಪಂ ಸದಸ್ಯರಾದ
ಆಸೀಫ಼್ ಭಾಷಾಸಾಬ್,ನಿರೂಪ್ ಕುಮಾರ್,ಚಂದ್ರೇಶ್ ಎನ್, ಹಾಗೂ ಆರ್ ಎಸ್ ಶಂಷುದ್ದೀನ್, ಅಮಿರ್ ಹಂಜಾ ಸೇರಿದಂತೆ ಅನೇಕ ಮುಖಂಡರುಗಳು ಸಂತಾಪ ಸೂಚಿಸಿದ್ದಾರೆ
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್