ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದರೂ ಆತಂಕಪಡದೇ ಶಾಲಾ ಕಾಲೇಜುಗಳನ್ನು ಮುಂದುವರೆಸುವುದು ಉತ್ತಮ: ಜಿಲ್ಲಾಧಿಕಾರಿಗಳ ಸಭೆಯಲ್ಲಿ ತಜ್ಞರ ಸಲಹೆ

ಶಿವಮೊಗ್ಗ : ಕೋವಿಡ್ ಮೂರನೇ ಅಲೆಯಲ್ಲಿ ಹಲವೆಡೆ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದರೂ, ಆತಂಕಪಡದೇ ಶಾಲಾ ಕಾಲೇಜುಗಳನ್ನು ಎಂದಿನಂತೆ ಮುಂದುವರೆಸುವುದು ಉತ್ತಮ ಎಂದು ಗುರುವಾರ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕೋವಿಡ್ ತಜ್ಞರ ಸಭೆಯಲ್ಲಿ ತಜ್ಞ ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದರು.

ಮಕ್ಕಳಿಗೆ ಕೋವಿಡ್ ಪಾಸಿಟಿವ್ ಬಂದರೆ ಗಾಬರಿಗೊಳ್ಳುವ ಅಗತ್ಯವಿಲ್ಲ. ಮೂರನೇ ಅಲೆಯಲ್ಲಿ ಕೋವಿಡ್ ಮಕ್ಕಳ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರಿಲ್ಲ. ಕೋವಿಡ್ ಪಾಸಿಟಿವ್ ಮಕ್ಕಳನ್ನು ಮನೆಯಲ್ಲಿಯೇ ಐಸೋಲೇಷನ್ ಮಾಡಿಸಿ ಶಾಲಾ ಕಾಲೇಜುಗಳನ್ನು ನಡೆಸುವುದು ಉತ್ತಮ. ಪ್ರತಿ ಶಾಲಾ ಕಾಲೇಜುಗಳಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು. ರೋಗ ಲಕ್ಷಣವಿರುವ ಮಕ್ಕಳನ್ನು ಮನೆಗೆ ಕಳುಹಿಸಿ ಅವರ ಆರೋಗ್ಯದ ಮೇಲೆ ನಿಗಾ ಇರಿಸಬೇಕು ಎಂದು ತಜ್ಞ ವೈದ್ಯರು ಸಲಹೆ ನೀಡಿದರು.

ಅಂಕಿಅಂಶ ಗಳನ್ನು ಗಮನಿಸಿದರೆ ಕೋವಿಡ್ ಮೂರನೇ ಅಲೆಯಲ್ಲಿ ಪಾಸಿಟಿವ್ ಆಗಿ ಆಸ್ಪತ್ರೆಗೆ ದಾಖಲಾಗಿರುವವರ ಪ್ರಮಾಣ ಅತಿ ಕಡಿಮೆ ಇದೆ. ಪ್ರಸ್ತುತ ಜಿಲ್ಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ 63 ಜನರ ಪೈಕಿ ಇಬ್ಬರಿಗೆ ಮಾತ್ರ ಆಕ್ಸಿಜನ್ ಒದಗಿಸುವ ಅಗತ್ಯ ಬಿದ್ದಿದೆ. ಈಗಾಗಲೇ ಬೇರೆ ರೋಗಗಳನ್ನು ಹೊಂದಿರುವ ಕೋವಿಡ್ ಪಾಸಿಟಿವ್ ವ್ಯಕ್ತಿಗಳನ್ನು ಆಸ್ಪತ್ರೆಗೆ ದಾಖಲಿಸುವ ಅಗತ್ಯ ಬಿದ್ದಿದೆ. ಜಿಲ್ಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಿದರೆ ಬಹುತೇಕ ಮಂದಿಯನ್ನು ಆಸ್ಪತ್ರೆಯ ಬದಲಿಗೆ ಅಲ್ಲಿಗೆ ಸೇರಿಸಬಹುದಾಗಿದೆ ಎಂದು ತಜ್ಞರು ಸಲಹೆ ನೀಡಿದರು.

ಲಸಿಕೆ ಪ್ರತಿಯೊಬ್ಬರೂ ಹಾಕಬೇಕು

ಮೂರನೇ ಅಲೆಯಲ್ಲಿ ಕೋವಿಡ್ ಪಾಸಿಟಿವ್ ವ್ಯಕ್ತಿಗಳ ಅಂಕಿಅAಶಗಳನ್ನು ಗಮನಿಸಿದಾಗ, ಎರಡು ಲಸಿಕೆ ಹಾಕಿಸಿದವರ ಮೇಲೆ ಕೋವಿಡ್ ಸಾಮಾನ್ಯ ಪ್ರಭಾವ ಬೀರಿದ್ದು ಬಹುತೇಕ ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ. ಎರಡು ಲಸಿಕೆ ಹಾಕದ 17ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಲ್ಲಿ ಕೋವಿಡ್ ರೋಗ ಲಕ್ಷಣಗಳು ಹೆಚ್ಚಾಗಿವೆ. ಈಗಾಗಲೇ ಜಿಲ್ಲೆಯಲ್ಲಿ ಶೇ.99 ಮಂದಿ ಪ್ರಥಮ ಡೋಸ್ ಹಾಗೂ ಶೇ.84ರಷ್ಟು ಮಂದಿ ಎರಡು ಡೋಸ್ ಲಸಿಕೆ ಪಡೆದಿದ್ದಾರೆ. ಪ್ರತಿಯೊಬ್ಬರೂ ಲಸಿಕೆಯನ್ನು ಪಡೆಯುವ ಮೂಲಕ ಕೋವಿಡ್ ಪರಿಣಾಮಕಾರಿಯಾಗಿ ಎದುರಿಸಲು ಸಾಧ್ಯವಿದೆ ಎಂಬುವುದು ಇದರಿಂದ ಸ್ಪಷ್ಟ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಹೇಳಿದರು.

ಒಂದೆರಡು ದಿನಗಳಲ್ಲಿ ಅಗತ್ಯವಿರುವ ಕೋವಿಡ್ ಕೇರ್ ಸೆಂಟರ್‌ಗಳನ್ನು ಪ್ರಾರಂಭಿಸಲಾಗುವುದು. ಕೋವಿಡ್ ಪಾಸಿಟಿವ್ ವ್ಯಕ್ತಿಗಳಿಗೆ ಟೆಲಿಫೋನ್ ಮೂಲಕ ಟ್ರಯಾಜ್ ಮಾಡಲು ವ್ಯವಸ್ಥೆ ಮಾಡಲಾಗುವುದು. ಕೋವಿಡ್ ಪಾಸಿಟಿವ್ ವ್ಯಕ್ತಿಗಳಿಗೆ ಅಗತ್ಯ ಔಷಧಿಗಳನ್ನು ಒಳಗೊಂಡ ಕಿಟ್ ನೀಡಲಾಗುತ್ತಿದೆ. ಶಾಲಾ ಕಾಲೇಜುಗಳಲ್ಲಿ ಸಹ ಕೋವಿಡ್ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗುವುದು. ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಸಭೆಯಲ್ಲಿ ಮಕ್ಕಳ ತಜ್ಞರಾದ ಡಾ.ಧನಂಜಯ ಸರ್ಜಿ, ಡಾ.ಶ್ರೀಕಾಂತ್ ಹೆಗ್ಡೆ, ಡಾ.ಮಲ್ಲಿಕಾರ್ಜುನ ಕೊಪ್ಪದ್, ಡಾ.ಪಾಟೀಲ್, ಡಾ.ಸತೀಶ್ಚಂದ್ರ, ಡಾ.ನಾಗರಾಜ ನಾಯಕ್, ಡಾ.ಮಲ್ಲಪ್ಪ, ಸಿಮ್ಸ್ ನಿರ್ದೇಶಕ ಡಾ. ಸಿದ್ದಪ್ಪ, ಡಾ.ಕಿರಣ್ ಸೇರಿದಂತೆ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

16 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

18 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

2 days ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

2 days ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

2 days ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

3 days ago