ವಿದ್ಯಾರ್ಥಿಗಳಿಗೆ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ :

ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್-19 ರಿಂದ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರೆಸುವಂತೆ ಆರ್ಥಿಕ ಸಹಾಯ ಮಾಡಲು ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಷನ್ ವತಿಯಿಂದ ಆದಿತ್ಯ ಬಿರ್ಲಾ ಕ್ಯಾಪಿಟಲ್ ಕೋವಿಡ್ ವಿದ್ಯಾರ್ಥಿವೇತನ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನಿಸಿದೆ.

1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ರೂ. 24 ಸಾವಿರಗಳು, 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ರೂ. 30 ಸಾವಿರಗಳು, ವೃತ್ತಿಪರ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ರೂ. 60 ಸಾವಿರಗಳು ಹಾಗೂ ಸಾಮಾನ್ಯ ವೃತ್ತಿಪರ ಪದವಿಪೂರ್ವ ವಿದ್ಯಾರ್ಥಿಗಳಿಗೆ ರೂ. 36 ಸಾವಿರಗಳ ಆರ್ಥಿಕ ಧನ ಸಹಾಯ ನೀಡಲಾಗುತ್ತಿದ್ದು, 

ಆರ್ಹರು : http://www.buddy4study.com/page/aditya-birla-capital-covid-schoarship-programme ವೆಬ್ ಸೈಟ್  ಮೂಲಕ 31/01/2022 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಉಪನಿದೇರ್ಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, 100 ಅಡಿ ರಸ್ತೆ, ಆಲ್ಕೊಳ, ಶಿವಮೊಗ್ಗ. ದೂ.ಸಂ.: 08182-295709 ನ್ನು ಸಂಪರ್ಕಿಸುವುದು.

ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಬಳಸಿ :

http://www.buddy4study.com/page/aditya-birla-capital-covid-schoarship-programme

Leave a Reply

Your email address will not be published. Required fields are marked *