ವಿದ್ಯಾರ್ಥಿಗಳಿಗೆ ಹೆಚ್ಚುತ್ತಿರುವ ಕೊರೊನಾ ಸೋಂಕು : ರಿಪ್ಪನ್ ಪೇಟೆಯ ಸರಕಾರಿ ಪದವಿ ಹಾಗೂ ಪಿಯು ಕಾಲೇಜು ಸೀಲ್ ಡೌನ್……!

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸನಗರ ತಾಲೂಕು ದಂಡಾಧಿಕಾರಿಗಳ ಆದೇಶದ ಮೇರೆಗೆ  ರಿಪ್ಪನ್ ಪೇಟೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಎರಡು ಕಾಲೇಜುಗಳನ್ನು ಸೀಲ್ ಡೌನ್ ಮಾಡಿದ್ದಾರೆ.

 ಕಳೆದ ಒಂದು ವಾರದಲ್ಲಿ ಪದವಿ ಕಾಲೇಜಿನ 12 ವಿದ್ಯಾರ್ಥಿಗಳಿಗೆ ಹಾಗೂ ಪದವಿಪೂರ್ವ ಕಾಲೇಜಿನ 10 ವಿದ್ಯಾರ್ಥಿಗಳಿಗೆ ಕೊರೊನಾ  ಸೋಂಕು  ತಗಲಿದ ಹಿನ್ನೆಲೆಯಲ್ಲಿ ಕಾಲೇಜುಗಳಿಗೆ ಸೀಲ್ ಡೌನ್ ಮಾಡಲಾಗಿದೆ.

 ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಚಂದ್ರಶೇಖರ್ ಮಾತನಾಡಿ  ಕಳೆದ ಒಂದು ವಾರದ ಹಿಂದೆ ಪದವಿ ಕಾಲೇಜಿನ ಒಬ್ಬ ವಿದ್ಯಾರ್ಥಿಗೆ ಹಾಗೂ ಪದವಿಪೂರ್ವ ಕಾಲೇಜಿನ ಒಬ್ಬ ವಿದ್ಯಾರ್ಥಿಗೆ ಕೊರೊನಾ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ  ಸಂಬಂಧಪಟ್ಟ ತರಗತಿಗಳ ವಿದ್ಯಾರ್ಥಿಗಳಿಗೆ ರಾಪಿಡ್ ಟೆಸ್ಟ್ ಮಾಡಿದ ಹಿನ್ನೆಲೆಯಲ್ಲಿ ಪದವಿ ತರಗತಿಯ 11 ವಿದ್ಯಾರ್ಥಿಗಳು ಹಾಗೂ ಪದವಿಪೂರ್ವ ತರಗತಿಯ 10 ವಿದ್ಯಾರ್ಥಿಗಳಿಗೆ ಕೊರೊನಾ ಧೃಡಪಟ್ಟ ಹಿನ್ನೆಲೆಯಲ್ಲಿ ಎರಡು ಕಾಲೇಜುಗಳಿಗೆ ಸ್ಯಾನಿಟೈಸರ್ ಮಾಡಿದ್ದು. ಜನವರಿ 23ರ ತನಕ ಕಾಲೇಜಿನ ತರಗತಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಭಯಪಡುವ ಅಗತ್ಯವಿಲ್ಲ ಎಂದರು.

 ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಚಂದ್ರಶೇಖರ್. ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಉಪನ್ಯಾಸಕರು ಹಾಜರಿದ್ದರು.

Leave a Reply

Your email address will not be published. Required fields are marked *