ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸನಗರ ತಾಲೂಕು ದಂಡಾಧಿಕಾರಿಗಳ ಆದೇಶದ ಮೇರೆಗೆ ರಿಪ್ಪನ್ ಪೇಟೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಎರಡು ಕಾಲೇಜುಗಳನ್ನು ಸೀಲ್ ಡೌನ್ ಮಾಡಿದ್ದಾರೆ.
ಕಳೆದ ಒಂದು ವಾರದಲ್ಲಿ ಪದವಿ ಕಾಲೇಜಿನ 12 ವಿದ್ಯಾರ್ಥಿಗಳಿಗೆ ಹಾಗೂ ಪದವಿಪೂರ್ವ ಕಾಲೇಜಿನ 10 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗಲಿದ ಹಿನ್ನೆಲೆಯಲ್ಲಿ ಕಾಲೇಜುಗಳಿಗೆ ಸೀಲ್ ಡೌನ್ ಮಾಡಲಾಗಿದೆ.
ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಚಂದ್ರಶೇಖರ್ ಮಾತನಾಡಿ ಕಳೆದ ಒಂದು ವಾರದ ಹಿಂದೆ ಪದವಿ ಕಾಲೇಜಿನ ಒಬ್ಬ ವಿದ್ಯಾರ್ಥಿಗೆ ಹಾಗೂ ಪದವಿಪೂರ್ವ ಕಾಲೇಜಿನ ಒಬ್ಬ ವಿದ್ಯಾರ್ಥಿಗೆ ಕೊರೊನಾ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ತರಗತಿಗಳ ವಿದ್ಯಾರ್ಥಿಗಳಿಗೆ ರಾಪಿಡ್ ಟೆಸ್ಟ್ ಮಾಡಿದ ಹಿನ್ನೆಲೆಯಲ್ಲಿ ಪದವಿ ತರಗತಿಯ 11 ವಿದ್ಯಾರ್ಥಿಗಳು ಹಾಗೂ ಪದವಿಪೂರ್ವ ತರಗತಿಯ 10 ವಿದ್ಯಾರ್ಥಿಗಳಿಗೆ ಕೊರೊನಾ ಧೃಡಪಟ್ಟ ಹಿನ್ನೆಲೆಯಲ್ಲಿ ಎರಡು ಕಾಲೇಜುಗಳಿಗೆ ಸ್ಯಾನಿಟೈಸರ್ ಮಾಡಿದ್ದು. ಜನವರಿ 23ರ ತನಕ ಕಾಲೇಜಿನ ತರಗತಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಭಯಪಡುವ ಅಗತ್ಯವಿಲ್ಲ ಎಂದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಚಂದ್ರಶೇಖರ್. ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಉಪನ್ಯಾಸಕರು ಹಾಜರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್