ವೀಕೆಂಡ್ ಕರ್ಫ್ಯೂ ರದ್ದು ಮಾಡಿದ ರಾಜ್ಯ ಸರ್ಕಾರ : ನೈಟ್ ಕರ್ಫ಼್ಯೂ ಮುಂದುವರಿಕೆ

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂವನ್ನು(Weekend Curfew)  ರದ್ದು ಮಾಡುವಂತೆ ಹೋಟೆಲ್, ಬಾರ್ ಮಾಲೀಕರು, ಉದ್ಯಮಿಗಳ ಸಂಘ ಮಾಡಿದ ಮನವಿಗೆ ಕರ್ನಾಟಕ ಸರ್ಕಾರ ಸ್ಪಂದಿಸಿದ್ದು ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂವನ್ನು ರದ್ದು ಮಾಡುವ ಅಧಿಕೃತ ಘೋಷಣೆ ಮಾಡಿದೆ. ಅದರೊಂದಿಗೆ ಈ ವಾರದಿಂದ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಇರುವುದಿಲ್ಲ, ನೈಟ್ ಕರ್ಫ್ಯೂಅಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ. ನೈಟ್ ಕರ್ಫ್ಯೂಅನ್ನು(Night Curfew) ಮುಂದುವರಿಸುವಂತೆ ತಜ್ಞರು ಸಲಹೆ ನೀಡಿದ್ದರೂ, ರಾಜ್ಯ ಸರ್ಕಾರ (Karnataka government) ಇದರಲ್ಲಿ ಕೊಂಚ ಬದಲಾವಣೆ ಮಾಡಿದೆ. ಇದರ ಪ್ರಕಾರ ರಾತ್ರಿ 10 ರಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಇರಲಿದೆ.

ರಾಜ್ಯದಲ್ಲಿ ಕೋವಿಡ್ (Covid 19) ಕೇಸ್ ಗಳ ಸಂಖ್ಯೆಯಲ್ಲಿ ಏರಿಕೆ ಆಗುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಎರಡು ವಾರದ ಹಿಂದೆ ರಾಜ್ಯ ಸರ್ಕಾರ ವೀಕೆಂಡ್ ಹಾಗೂ ನೈಟ್ ಕರ್ಫ್ಯೂ ಘೋಷಣೆ ಮಾಡಿತ್ತು. ಆದರೆ, ಇದಕ್ಕೆ ಜನರಿಂದ ಆಕ್ರೋಶ ವ್ಯಕ್ತವಾಗಿತ್ತು. ಆರ್ಥಿಕವಾಗಿ ಈಗಾಗಲೇ ಸಂಕಷ್ಟದಲ್ಲಿದ್ದು, ವೀಕೆಂಡ್ ಹಾಗೂ ನೈಟ್ ಕರ್ಫ್ಯೂ ಇದ್ದಲ್ಲಿ ನಾವು ಬೀದಿಗೆ ಬರಲಿದ್ದೇವೆ ಎಂದು ಉದ್ಯಮಿಗಳು ಅಳಲು ತೋಡಿಕೊಂಡಿದ್ದರು.

ವೀಕೆಂಡ್ ಕರ್ಫ್ಯೂ ತೆರವು ಮಾಡಲು ಇಂದು ಮುಖ್ಯಮಂತ್ರಿ ನೇತೃತ್ವದ ಸಭೆಯಲ್ಲಿ ನಿರ್ಣಯ ಮಾಡಲಾಗಿದೆ. ಯೂರೋಪ್ ರಾಷ್ಟ್ರಗಳಲ್ಲಿ ಯಾವುದೇ ನಿರ್ಬಂಧಗಳಿಲ್ಲ. ಕೋವಿಡ್ ಮೂರನೇ ಅಲೆಯ ವ್ಯಾಪಕವಾಗಿ ಹರಡಿದರೂ ತೀವ್ರತೆ ಕಡಿಮೆ ಇದೆ. ಆಸ್ಪತ್ರೆಗಳಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನ ಮಾಡಿಕೊಳ್ಳೋಣ. ಒಂದು ವೇಳೆ ಆಸ್ಪತ್ರೆ ಸೇರುವವರ ಸಂಖ್ಯೆ ಹೆಚ್ಚಾದರೆ, ಮತ್ತೆ ಬಿಗಿಕ್ರಮ ಮುಂದುವರಿಸೋಣ. ಸದ್ಯ ವೀಕೆಂಡ್ ಕರ್ಫ್ಯೂ ತೆರವು ಮಾಡೋಣ ಅಂತಾ ಕೆಲ ಸಚಿವರಿಂದ ಸಲಹೆ ಬಂದಿದೆ ಎಂದು ವರದಿಯಾಗಿದೆ. ಆರೋಗ್ಯ ಸಚಿವರ ಸಲಹೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದಲೂ ಸಹಮತ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *