ಜಿಲ್ಲೆಯಲ್ಲಿ ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ ಕೆ ಬಿ ಶಿವಕುಮಾರ್ ಅವರನ್ನು ರಾಜ್ಯ ಸರ್ಕಾರ ದಿಢೀರ್ ವರ್ಗಾವಣೆ ಮಾಡಿದ್ದು , ಅವರ ಸ್ಥಾನಕ್ಕೆ ಕೋಲಾರದ ಜಿಲ್ಲಾಧಿಕಾರಿಯಾಗಿದ್ದ ಸೆಲ್ವಮಣಿ (2013 ನೇ ಬ್ಯಾಚಿನ ಐಎಎಸ್ ಅಧಿಕಾರಿ)ರವರನ್ನು ಸರ್ಕಾರ ವರ್ಗಾಯಿಸಿ ಆದೇಶ ನೀಡಿದ್ದು .ಇಂದು ಬೆಳಿಗ್ಗೆ ನೂತನ ಜಿಲ್ಲಾಧಿಕಾರಿಗಳು ಹಿಂದಿನ ಜಿಲ್ಲಾಧಿಕಾರಿ ಅವರಿಂದ ಅಧಿಕಾರವನ್ನು ಸ್ವೀಕರಿಸಿದ್ದಾರೆ.
ಹಿಂದಿನ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ನಿಷ್ಠೆ, ಪ್ರಾಮಾಣಿಕತೆ ಮತ್ತು ದಕ್ಷತೆಯಿಂದ ಸೇವೆ ಸಲ್ಲಿಸಿದ್ದು ಕೆಲವು ಮಾಫಿಯಾಗಳು ಅದರಲ್ಲೂ ಮುಖ್ಯವಾಗಿ ಹುಣಸೋಡು ಕ್ರಷರ್ ಮತ್ತು ಕಲ್ಲು ಮಾಫಿಯಾ ಮತ್ತು ಕೆಲವು ಭೂ ಮಾಫಿಯಾಗಳು ಅವರ ವಿರುದ್ಧ ವರ್ಗಾವಣೆಗೆ ಕಾರ್ಯಾಚರಣೆ ನಡೆಸುತ್ತಿದ್ದವು .
2019 ಆಗಸ್ಟ್ ತಿಂಗಳಲ್ಲಿ ಜಿಲ್ಲಾಧಿಕಾರಿಯಾಗಿ ಬಂದಿದ್ದ ಕೆ.ಬಿ.ಶಿವಕುಮಾರ್ ಇಂದು ವರ್ಗವಾಗಿದ್ದು ಕೋಲಾರದ ಡಿಸಿ ಡಾ.ಸೆಲ್ವಮಣಿ ವರ್ಗವಾಗಿದ್ದಾರೆ.
ಇಂದಿನಿಂದ ಡಾ.ಸೆಲ್ವಮಣಿ ಶಿವಮೊಗ್ಗ ಡಿಸಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅನೇಕ ದಿನಗಳಿಂದ ಕೆ.ಬಿ.ಶಿವಕುಮಾರ್ ವರ್ಗಾವಣೆ ಗುಸುಗುಸು ಇಂದು ನಿಜವಾಗಿದೆ
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್