ಸೊರಬ ಪುರಸಭೆ ಅಧಿಕಾರ ಬಿಜೆಪಿ ತೆಕ್ಕೆಗೆ : ಅಧ್ಯಕ್ಷರಾಗಿ ಈರೇಶ್ ಮೇಸ್ತ್ರಿ ಆಯ್ಕೆ

ಸೊರಬ: ಭಾರಿ ಕುತೂಹಲ ಮೂಡಿಸಿದ್ದ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿಜೆಪಿಯ ವೀರೇಶ್ ಮೇಸ್ತ್ರಿ ಅಧ್ಯಕ್ಷರಾಗಿ ಆಯ್ಕೆಯಾದರು.

ಶುಕ್ರವಾರ ನಡೆದ ಅಧ್ಯಕ್ಷರ ಚುನಾವಣೆಗೆ ಬಿಜೆಪಿಯಿಂದ ವೀರೇಶ್ ಮೇಸ್ತ್ರಿ, ಕಾಂಗ್ರೆಸ್‌ನಿಂದ ಸುಲ್ತಾನಾ ಬೇಗಂ ನಾಮಪತ್ರ ಸಲ್ಲಿಸಿದ್ದರು. ವೀರೇಶ್ ಮೇಸ್ತ್ರಿ 8 ಮತಗಳನ್ನು ಹಾಗೂ ಕಾಂಗ್ರೆಸ್‌ನ ಸುಲ್ತಾನಾ ಬೇಗಂ 4 ಮತಗಳನ್ನು ಪಡೆದರು.

ಅಧ್ಯಕ್ಷರಾಗಿದ್ದ ಎಂ.ಡಿ. ಉಮೇಶ್ ವಿರುದ್ಧ ಸ್ವ‍ಪಕ್ಷದ ಸದಸ್ಯರೇ ಸೆ.27ರಂದು ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದರು. ಇದರಿಂದ ಚುನಾವಣೆ ನಡೆಯಿತು.


ಪಟ್ಟಣ ಪಂಚಾಯಿತಿಯಿಂದ ಪುರಸಭೆಯಾಗಿ ಮೇಲ್ದರ್ಜೆಗೇರಿದ ನಂತರ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ 6, ಕಾಂಗ್ರೆಸ್‌ನಿಂದ 4, ಒಬ್ಬರು ಜೆಡಿಎಸ್ ಮತ್ತು ಒಬ್ಬರು ಪಕ್ಷೇತರರು ಆಯ್ಕೆಯಾಗಿದ್ದರು.

ಮೂಲ ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದ ವೀರೇಶ್‌ ಮೊದಲ ಅವಧಿಯಲ್ಲಿಯೇ ಪ್ರಥಮ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾಗುವ ಕನಸು ಕಂಡಿದ್ದರು. ಆದರೆ ತಮ್ಮ ಆಪ್ತ ಎಂ.ಡಿ. ಉಮೇಶ್ ಅವರಿಗೆ ಅಧ್ಯಕ್ಷ ಸ್ಥಾನ ಸಿಗುವಂತೆ ಮಾಡಲು ಶಾಸಕ ಕುಮಾರ್ ಬಂಗಾರಪ್ಪ ಯಶಸ್ವಿಯಾಗಿದ್ದರು.

ಮೊದಲಿನಿಂದಲೂ ಪುರಸಭೆ ಆಡಳಿತದಲ್ಲಿ ಶಾಸಕರು ಹಸ್ತಕ್ಷೇಪ ಮಾಡುತ್ತಿರುವ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ಸದಸ್ಯರು ಶಾಸಕರ ಆಪ್ತ ಉಮೇಶ್ ಅವರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದರು.

ವೀರೇಶ್‌ಗೆ ಮೂಲ ಬಿಜೆಪಿ ಮುಖಂಡರ ಬೆಂಬಲ: ಶಾಸಕ ಕುಮಾರ್ ಬಂಗಾರಪ್ಪ ತಮ್ಮ ಅಭಿಪ್ರಾಯಗಳಿಗೆ ಮನ್ನಣೆ ನೀಡುತ್ತಿಲ್ಲ. ಅವರಿಗಾಗಿ ದುಡಿದ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ ಎಂದು ಮೂಲ ಬಿಜೆಪಿ ಮುಖಂಡರು ವೀರೇಶ್‌ ಮೇಸ್ತ್ರಿ ಬೆಂಬಲಕ್ಕೆ ನಿಂತು ಜಿಲ್ಲಾ ಮುಖಂಡರ ಮೇಲೆ ಒತ್ತಡ ಹಾಕಿದ್ದರು.

ಶಾಸಕ ಕುಮಾರ್ ಬಂಗಾರಪ್ಪ ವಿರೋಧ ಕಟ್ಟಿಕೊಳ್ಳದ ಜಿಲ್ಲಾ ಮುಖಂಡರು ವೀರೇಶ್‌ ಮೇಸ್ತ್ರಿ ಅವರನ್ನು ಬೆಂಬಲಿಸಲು ಸಾಧ್ಯವಾಗಿರಲಿಲ್ಲ.
ಉಮೇಶ್ ಅಧ್ಯಕ್ಷರಾಗಿದ್ದಾಗ ದೂರ ಉಳಿದಿದ್ದ ಮೂಲ ಬಿಜೆಪಿ ಮುಖಂಡರು ವೀರೇಶ್‌ ಮೇಸ್ತ್ರಿ ಅಧ್ಯಕ್ಷರಾಗಿ ಆಯ್ಕೆಗೊಂಡ ಬಳಿಕ ಅಭಿನಂದನೆ ಸಲ್ಲಿಸಲು ಬಂದಿದ್ದು ವಿಶೇಷ.

ಶಾಸಕ ಕುಮಾರ್ ಬಂಗಾರಪ್ಪ ಇತ್ತ ಸುಳಿಯಲಿಲ್ಲ. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಟಿ. ಮೇಘರಾಜ್, ತಾಲ್ಲೂಕು ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ, ಪಾಣಿ ರಾಜಪ್ಪ, ಕಡಸೂರು ಶಿವಕುಮಾರ್, ಶರಾವತಿರಾವ್, ಶ್ರೀನಾಥ್, ಶಿವರಾಜ್, ವಿಜಯಕುಮಾರ್, ಮಹೇಶ್, ನಿರಂಜನ ಕುಪ್ಪಗಡ್ಡೆ, ಗುರುಪ್ರಸನ್ನಗೌಡ ಇದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

3 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

3 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago