ಹೊಸನಗರದಲ್ಲಿ ನೂತನವಾಗಿ ಶುಭಾರಂಭಗೊಂಡ ಡಾ.ಸಾಯಿಲ್ ಜೈವಿಕ ಗೊಬ್ಬರದ ಶಾಖೆ :

ಹೊಸನಗರ : ಅಡಕೆ ಬೆಳೆಗಾರರ ಮನೆ ಮಾತಗಿರುವ ಡಾ ಸಾಯಿಲ್ ಜೈವಿಕ ಗೊಬ್ಬರದ ಶಾಖೆ ಈಗ  ಹೊಸನಗರದಲ್ಲೂ ಪ್ರಾರಂಭವಾಗಿದೆ.

ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯಿಂದ ಮಾನ್ಯತೆ ಪಡೆದಿರುವ ಮತ್ತು ಹೊಸನಗರದ ಕೃಷಿ ಇಲಾಖೆ ವತಿಯಿಂದ ದೃಡೀಕರಿಸಿ ಪರವಾನಿಗೆ ನೀಡಲಾಗಿರುವ ವೀರಭದ್ರೇಶ್ವರ ‌ಟ್ರೇಡರ್ಸ್ ಶುಭಾರಂಭಗೊಂಡಿದೆ.
ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿದ‌ ಗುರುಶಕ್ತಿ ಟ್ರಾನ್ಸ್ ಪೋರ್ಟ್ ಮಾಲೀಕರಾದ ವಿದ್ಯಾದರ್  ಜೈವಿಕ ಗೊಬ್ಬರಗಳು ಅಡಕೆ, ಕಬ್ಬು, ತೆಂಗು ಮತ್ತು ಎಲ್ಲಾ ರೀತಿಯ ಬೆಳೆಗಳಿಗೆ ಲಭ್ಯ. ಜೈವಿಕ ಗೊಬ್ಬರಗಳ ಬಳಕೆ ಇಂದ ಭೂಮಿಯಲ್ಲಿ ತ್ವರಿತವಾಗಿ ಸೂಕ್ಷ್ಮಾಣು ಜೀವಿಗಳು ಹಾಗು ಎರೆಹುಳುಗಳು ಅಭಿರುದ್ದಿ ಆಗುವುದರೊಂದಿಗೆ ಫಲವತ್ತತೆ ಹೆಚ್ಚಿಸಿ ಉತ್ತಮ ಬೆಳೆಗಳನ್ನು ಬೆಳೆಯಲು ಸಹಕಾರಿಯಾಗುತ್ತವೆ ಎಂದರು.

ನಂತರ ಸಂಸ್ಥೆಯ ಮಾಲೀಕರಾದ ಆದರ್ಶ್ ಹೆಚ್ ಜಿ ಮಾತನಾಡಿ  ರಾಸಾಯನಿಕ ಗೊಬ್ಬರಗಳ ಬಳಕೆಯಿಂದ ಭೂಮಿಯು ತನ್ನ ಫಲವತ್ತತೆಯನ್ನು ಕಳೆದುಕೊಳ್ಳುವುದರ ಜೊತೆಗೆ ಬೆಳೆಗಳ ಆಯಸ್ಸು ಕೂಡ ಕಡಿಮೆಯಾಗುತ್ತಿದೆ. ರಾಸಾಯನಿಕ ಗೊಬ್ಬರಗಳ ಯಥೇಚ್ಛ ಬಳಕೆಯಿಂದ ರೈತರ ಆರೋಗ್ಯದ ಮೇಲೂ ಅನೇಕ ದುಷ್ಪರಿಣಾಮಗಳು ಆಗುತ್ತಿರುವುದಂತೂ ಸತ್ಯ.
ಇಂದು ಹೆಚ್ಚಿನ ಕೃಷಿ ರಾಸಾಯನಿಕ ರಸಗೊಬ್ಬರಗಳ ಮೂಲಕ ನಡೆಯುತ್ತಿದೆ. ಪೂರ್ಣ ಪ್ರಮಾಣದಲ್ಲಿ ಅಥವಾ ಆಮ್ಶಿಕವಾಗಿ ಈ ಗೊಬ್ಬರಗಳನ್ನು ಬಳಸುವವರು ತುಂಬಾ ಕೃಷಿಕರು ಇದ್ದಾರೆ. ಇವುಗಳ ಲಭ್ಯತೆ ಕೆಲವು ಸಮಯ ಹಿಂದಿನ ವರೆಗೆ ಸಾಕಷ್ಟು ಇತ್ತು. ಈಗ ಕೆಲವೇ ಗೊಬ್ಬರಗಳು ಮಾತ್ರ ಲಭ್ಯ ಇದೇ. ಮುಖ್ಯವಾಗಿ ಪೊಟಾಷ್ ಸಿಗುವುದೇ ಇಲ್ಲ. ಇದಕ್ಕೇನು ಕಾರಣ. ಸರಿಯಾದ ಸಮಯಕ್ಕೆ ಗೊಬ್ಬರ ಸಿಗದಿದ್ದರೆ ರೈತರ ಗತಿ ಏನು…?ಹೊರಗಿನಿಂದ ಬೆಲೆ ಕೊಟ್ಟು ಖರೀದಿ ಮಾಡುವ ಗೊಬ್ಬರ ನಂಬಿ ಕೃಷಿಗಿಳಿದವರಿಗೆ ಕಷ್ಟದ ದಿನಗಳು ಪ್ರಾರಂಭ ಆಗಿದೆ. ಕೇಂದ್ರ ಸರ್ಕಾರ ಸಾವಯವ ಕೃಷಿಗೆ ಪ್ರೋತ್ಸಾಹ ಮತ್ತು ರಾಸಾಯನಿಕ ಬಳಕೆಯನ್ನು ನಿರುತ್ತೇಜಿಸುವ  ತಂತ್ರಗಳನ್ನು ಜ್ಯಾರಿ ಮಾಡಲಿದೆ. ರಾಸಾಯನಿಕ ಗೊಬ್ಬರ ತಯಾರಿಕೆಗೆ ಬೇಕಾಗುವ ಹೊರದೇಶಗಳಿಂದ ಬರುವ ಕಚ್ಚಾವಸ್ತುಗಳ ಆಮದಿನ ಮೇಲೆ ನಿಯಂತ್ರಣ ಹೆಚ್ಚೆಚ್ಚು ಬಿಗಿಯಾಗುತ್ತ್ತಾ ಹೋದೀತು. ಇನ್ನು ಕೆಲವೇ ವರ್ಷಗಳಲ್ಲಿ ರಾಸಾಯನಿಕ ಗೊಬ್ಬರ ನಿಲ್ಲಲೂಬಹುದು.ಆದ್ದರಿಂದ ಡಾ ಸಾಯಿಲ್ ಜೈವಿಕ ಗೊಬ್ಬರವೇ ರೈತರಿಗೆ ಪರಿಹಾರವಾಗಿದೆ ಎಂದರು.

ಈ ಸಂಧರ್ಭದಲ್ಲಿ ಡಾ.ದಿನಮಣಿ,ಮಹೇಂದ್ರ ಗೌಡ ರಿಪ್ಪನ್ ಪೇಟೆ, ಗುರುಬಸಪ್ಪ ಗೌಡ ಹಾಗೂ ಇನ್ನಿತರರು ಉಪಸ್ಥಿತರಿದ್ದರು.



ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಶ್ರೀ ವೀರಭದ್ರೇಶ್ವರ ಟ್ರೇಡರ್ಸ್
ಗುರುಶಕ್ತಿ ಕಟ್ಟಡ, ಶಿವಮೊಗ್ಗ ರಸ್ತೆ, ಹೊಸನಗರ – 577418
8050281665, 9902013235
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

4 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

6 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

23 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

23 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

1 day ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago