ಹಿರಿಯ ಸಾಹಿತಿ,ಕನ್ನಡಪರ ಹೋರಾಟಗಾರ ಚಂಪಾ ನಿಧನ :
ಕವಿ, ನಾಟಕಕಾರ, ಕನ್ನಡಪರ ಹೋರಾಟಗಾರ ಪ್ರೊ.ಚಂದ್ರಶೇಖರ್ ಪಾಟೀಲ್ (ಚಂಪಾ) ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು.ಅನಾರೋಗ್ಯದಿಂದ ಬಳಲುತ್ತಿದ್ದ ಚಂಪಾ ಅವರು ಇಂದು ಬೆಳಗ್ಗೆ ನಗರದ ಕೋಣನಕುಂಟೆಯ ಆಸ್ಟ್ರಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಮೃತರು , ಒಬ್ಬ ಪುತ್ರ, ಒಬ್ಬರು ಪುತ್ರಿ ಸಹಿತ ಅಪಾರ ಬಂಧುಮಿತ್ರರು, ಅಭಿಮಾನಿಗಳನ್ನು ಅಗಲಿದ್ದಾರೆ. ಪಾರ್ಥಿವ ಶರೀರವನ್ನು ನಗರದ ಯಲಚೇನಹಳ್ಳಿಯಲ್ಲಿರುವ ಅವರ ನಿವಾಸಕ್ಕೆ ತರಲಾಗುವುದು. ಅಂತ್ಯಕ್ರಿಯೆ ಬೆಂಗಳೂರಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಸಾಹಿತ್ಯ ಲೋಕದಲ್ಲಿ ಚಂಪಾ ಎಂಬ ಹೆಸರಿನಿಂದ ಪ್ರಖ್ಯಾತರಾಗಿದ್ದ…