ಪ್ರಧಾನಿ ನರೇಂದ್ರ ಮೋದಿಗೆ ಪಂಜಾಬ್ ಸರ್ಕಾರ ಅವಮಾನ ಮಾಡಿದ ಘಟನೆ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ…
ಶಿವಮೊಗ್ಗ: ಪ್ರಧಾನಿ ಮೋದಿ ಅವರಿಗೆ ಅವಮಾನ ಮಾಡಿರುವ ಮತ್ತು ಅವರ ಪ್ರಯಾಣಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿರುವ ಪಂಜಾಬ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಸಮಿತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರಧಾನಿ ಮೋದಿ ನಿನ್ನೆ ಪಂಜಾಬ್ ನಲ್ಲಿರುವ ಭಟಿಂಡಾದಿಂದ ಫಿರೋಜ್ ಪುರದ ಹುಸೇನ್ ವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಬೇಕಿತ್ತು. ಅಲ್ಲಿ ಅವರು ಭಗತ್ ಸಿಂಗ್ ಇತರ ಸ್ವಾತಂತ್ರ್ಯವೀರ ಹುತಾತ್ಮರಿಗೆ ಗೌರವ ಸಲ್ಲಿಸುವ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ಮಾಡುವ ಕಾರ್ಯಕ್ರಮವಿತ್ತು…