ರಿಪ್ಪನ್ ಪೇಟೆ ಪಟ್ಟಣದಲ್ಲಿ ರಸ್ತೆ ಅಗಲೀಕರಣ : ಬೆಂಗಳೂರಿನಲ್ಲಿ ಅಧಿಕಾರಿಗಳೊಂದಿಗೆ ಶಾಸಕ ಹರತಾಳು ಹಾಲಪ್ಪ ಚರ್ಚೆ
ರಿಪ್ಪನ್ ಪೇಟೆ : ಪಟ್ಟಣದ ರಸ್ತೆಗಳ ಅಗಲೀಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಇಂದು ಶಾಸಕರು ಹಾಗೂ ಎಂಎಸ್ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪರವರು ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈಗಾಗಲೇ ಪಟ್ಟಣದ ರಸ್ತೆಗಳ ಅಗಲೀಕರಣಕ್ಕೆ 6ಕೋಟಿ ಹಣ ಬಿಡುಗಡೆಯಾಗಿದ್ದು ಇನ್ನೂ ಹೆಚ್ಚಿನ 2ಕೋಟಿ ಅನುದಾನ ನೀಡುವಂತೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಅಧಿಕಾರಿ ಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಹಾಗೆಯೇ ಸಾಗರದ ಮಾರ್ಕೆಟ್ ರಸ್ತೆ ಅಗಲೀಕರಣಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳೊಂದಿಗೆ ಶಾಸಕರು ಇದೇ ಸಂದರ್ಭದಲ್ಲಿ ಚರ್ಚೆ ನಡೆಸಿದರು.